AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನ ಈ ಜಿಲ್ಲೆಯಲ್ಲಿ ದಟ್ಟ ಮಂಜು; ಜನಜೀವನದ ಮೇಲೆ ಪರಿಣಾಮ ಬೀರಿದ ‘ಅಕಾಲಿಕ’ ಚಳಿ

ಲಭ್ಯವಿರುವ ಅಧಿಕೃತ ಮಾಹಿತಿಯ ಪ್ರಕಾರ, ಉದಕಮಂಡಲದ ಕಾಂತಲ್ ಮತ್ತು ತಲೈಕುಂಠದಲ್ಲಿ ತಾಪಮಾನವು 1 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದ್ದರೆ, ಬೊಟಾನಿಕಲ್ ಗಾರ್ಡನ್‌ನಲ್ಲಿ 2 ಡಿಗ್ರಿ ಸೆಲ್ಸಿಯಸ್‌. ಸ್ಯಾಂಡಿನಲ್ಲಾ 3 ಡಿಗ್ರಿ ಸೆಲ್ಸಿಯಸ್ ಇತ್ತು. ಈ 'ಅಕಾಲಿಕ' ಚಳಿಯ ಬಗ್ಗೆ ನಿವಾಸಿಗಳು ಮತ್ತು ಪರಿಸರ ಕಾರ್ಯಕರ್ತರು ಚಿಂತಿತರಾಗಿದ್ದಾರೆ.

ತಮಿಳುನಾಡಿನ ಈ ಜಿಲ್ಲೆಯಲ್ಲಿ ದಟ್ಟ ಮಂಜು; ಜನಜೀವನದ ಮೇಲೆ ಪರಿಣಾಮ ಬೀರಿದ 'ಅಕಾಲಿಕ' ಚಳಿ
ನೀಲಗಿರಿಯಲ್ಲಿ ದಟ್ಟ ಮಂಜುImage Credit source: NDTV
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jan 18, 2024 | 7:01 PM

Share

ನೀಲಗಿರಿ, ತಮಿಳುನಾಡು ಜನವರಿ 18: ತಮಿಳುನಾಡಿನ (Tamil Nadu) ನೀಲಗಿರಿ (Nilgiris) ಜಿಲ್ಲೆಯಲ್ಲಿ ತಾಪಮಾನ ಕುಸಿಯುತ್ತಿದ್ದು ಜನರು ಕೊರೆಯುವ ಚಳಿಯಿಂದ (Cold) ತತ್ತರಿಸುತ್ತಿದ್ದಾರೆ. ಇದು ಅಕಾಲಿಕ ಹವಾಮಾನದ ವಿದ್ಯಮಾನವಾಗಿದ್ದು, ಕೃಷಿಯ ಮೇಲೂ ಪರಿಣಾಮ ಬೀರಿದೆ. ಹಚ್ಚ ಹಸಿರಿನ ಹುಲ್ಲುಹಾಸುಗಳು ಹಿಮದಿಂದ ಆವೃತವಾಗಿವೆ. ದಟ್ಟವಾದ ಮಂಜು ಗೋಚರತೆಯ ಮೇಲೆ ಪರಿಣಾಮ ಬೀರಿದೆ. ಹೀಗೆ ಕುಸಿಯುತ್ತಿರುವ ತಾಪಮಾನದಿಂದಾಗಿ ಸ್ಥಳೀಯರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಎನ್​​​ಡಿಟಿವಿ ವರದಿ ಮಾಡಿದೆ.

ಇಂತಹ ಚಳಿ, ಶುಷ್ಕ ವಾತಾವರಣ ಅಸಾಮಾನ್ಯವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಹಲವೆಡೆ ಜನರು ಬೆಂಕಿಯ ಸುತ್ತ ಕುಳಿತು ಬೆಚ್ಚಗಾಗಲು ಪ್ರಯತ್ನಿಸುತ್ತಿರುವುದು ಕಂಡುಬಂದಿತು.

ಲಭ್ಯವಿರುವ ಅಧಿಕೃತ ಮಾಹಿತಿಯ ಪ್ರಕಾರ, ಉದಕಮಂಡಲದ ಕಾಂತಲ್ ಮತ್ತು ತಲೈಕುಂಠದಲ್ಲಿ ತಾಪಮಾನವು 1 ಡಿಗ್ರಿ ಸೆಲ್ಸಿಯಸ್‌ನಲ್ಲಿ ದಾಖಲಾಗಿದ್ದರೆ, ಬೊಟಾನಿಕಲ್ ಗಾರ್ಡನ್‌ನಲ್ಲಿ 2 ಡಿಗ್ರಿ ಸೆಲ್ಸಿಯಸ್‌. ಸ್ಯಾಂಡಿನಲ್ಲಾ 3 ಡಿಗ್ರಿ ಸೆಲ್ಸಿಯಸ್ ಇತ್ತು. ಈ ‘ಅಕಾಲಿಕ’ ಚಳಿಯ ಬಗ್ಗೆ ನಿವಾಸಿಗಳು ಮತ್ತು ಪರಿಸರ ಕಾರ್ಯಕರ್ತರು ಚಿಂತಿತರಾಗಿದ್ದಾರೆ.

ನೀಲಗಿರಿ ಎನ್ವಿರೋಮೆಂಟ್ ಸೋಶಿಯಲ್ ಟ್ರಸ್ಟ್ (NEST) ನ ವಿ ಶಿವದಾಸ್ ಅವರು ಜಾಗತಿಕ ತಾಪಮಾನ ಮತ್ತು ಎಲ್-ನಿನೊ ಪರಿಣಾಮವೇ ಈ ಬದಲಾವಣೆಗೆ ಕಾರಣವೆಂದು ನಂಬುತ್ತಾರೆ. ಚಳಿ ಆರಂಭವಾಗುವುದು ತಡವಾಗಿದ್ದು, ಇಂತಹ ಹವಾಮಾನ ಬದಲಾವಣೆ ನೀಲಗಿರಿಗೆ ದೊಡ್ಡ ಸವಾಲಾಗಿದ್ದು, ಈ ಬಗ್ಗೆ ಅಧ್ಯಯನ ನಡೆಸಬೇಕು ಎಂದರು.ಇಲ್ಲಿ ದೊಡ್ಡ ಪ್ರಮಾಣದಲ್ಲಿರುವ ಚಹಾ ತೋಟದ ಮೇಲೂ ಇದು ಪರಿಣಾಮ ಬೀರಿದೆ.

ಡಿಸೆಂಬರ್‌ನಲ್ಲಿ ಸುರಿದ ಭಾರೀ ಮಳೆ ಮತ್ತು ನಂತರದ ಶೀತದ ಅವಧಿಯು ಚಹಾ ತೋಟದ ಮೇಲೆ ಪರಿಣಾಮ ಬೀರಿದೆ ಎಂದು ಸ್ಥಳೀಯ ಚಹಾ ಕಾರ್ಮಿಕರ ಸಂಘದ ಕಾರ್ಯದರ್ಶಿ ಆರ್ ಸುಕುಮಾರನ್ ಹೇಳಿದ್ದಾರೆ.

ಇದನ್ನೂ ಓದಿ:ನಿರ್ಮಲಾ ಸೀತಾರಾಮನ್​​ರನ್ನು ವಜಾಗೊಳಿಸಿ ಎಂದು ರಾಷ್ಟ್ರಪತಿಗೆ ಪತ್ರ ಬರೆದ ತಮಿಳುನಾಡು IRS ಅಧಿಕಾರಿ

ಇದು ಮುಂಬರುವ ತಿಂಗಳುಗಳಲ್ಲಿ ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಹವಾಮಾನವು ವಿಶೇಷವಾಗಿ ಎಲೆಕೋಸುಗಳ ಮೇಲೆ ಪರಿಣಾಮ ಬೀರಿದೆ ಎಂದು ತರಕಾರಿ ಬೆಳೆಯುವ ರೈತರು ಹೇಳಿದರು. ಚಳಿಯಿಂದಾಗಿ ಬೇಗ ಕೆಲಸ ನಿಮಿತ್ತ ಮನೆಯಿಂದ ಹೊರಡುವುದು ಕಷ್ಟವಾಗುತ್ತಿದೆ ಎನ್ನುತ್ತಾರೆ ಸರ್ಕಾರಿ ನೌಕರ ಎನ್ ರವಿಚಂದ್ರನ್. ಬೆಚ್ಚಗಾಗಲು ಬೇಕಾದ ಉಡುಪನ್ನು ಧರಿಸಿದರೂ, ದ್ವಿಚಕ್ರ ವಾಹನಗಳನ್ನು ಓಡಿಸುವುದು ಇನ್ನೂ ಕಷ್ಟಕರವಾಗಿತ್ತು, ಇದು ಉಸಿರಾಟದ ತೊಂದರೆ, ತೀವ್ರ ತಲೆನೋವು ಮತ್ತು ಜ್ವರದಂತಹ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತಿದೆ ಅಂತಾರೆ ಅವರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!