AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯ ಮಾಡುತ್ತಿದೆ’; ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ

ಕೇರಳದ ನರ್ಸ್ ನಿಮಿಷಾ ಪ್ರಿಯಾ 2017ರಲ್ಲಿ ತನ್ನ ಬ್ಯುಸಿನೆಸ್ ಪಾರ್ಟನರ್ ಆಗಿದ್ದ ತಲಾಲ್ ಅಬ್ದೋ ಮೆಹ್ದಿ ಅವರ ಕೊಲೆ ಆರೋಪದ ಮೇಲೆ ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದಾರೆ. ಜುಲೈ 16ರಂದೇ ಅವರು ಗಲ್ಲಿಗೇರಬೇಕಿತ್ತು. ಆದರೆ, ಭಾರತದ ಮಧ್ಯಪ್ರವೇಶದ ನಂತರ ಗಲ್ಲಿಗೇರಿಸುವ ದಿನಾಂಕವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

'ಸರ್ಕಾರ ಸಾಧ್ಯವಿರುವ ಎಲ್ಲಾ ಸಹಾಯ ಮಾಡುತ್ತಿದೆ'; ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಬಗ್ಗೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ
Nimisha Priya
ಸುಷ್ಮಾ ಚಕ್ರೆ
|

Updated on: Jul 17, 2025 | 5:38 PM

Share

ನವದೆಹಲಿ, ಜುಲೈ 17: ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆ ಎದುರಿಸುತ್ತಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದಲ್ಲಿ ( Nimisha Priya Case) ಮಧ್ಯಪ್ರವೇಶಿಸಬೇಕೆಂಬ ಒತ್ತಾಯ ಹೆಚ್ಚುತ್ತಿರುವ ನಡುವೆ ಭಾರತದ ವಿದೇಶಾಂಗ ಸಚಿವಾಲಯ (MEA) ಇಂದು ಪ್ರತಿಕ್ರಿಯಿಸಿದ್ದು, “ಕೇಂದ್ರ ಸರ್ಕಾರ ರಾಜತಾಂತ್ರಿಕ ಮಾರ್ಗಗಳನ್ನು ಸಕ್ರಿಯವಾಗಿ ಅನುಸರಿಸುತ್ತಿದೆ. ಈ ವಿಷಯವನ್ನು ಪರಿಹರಿಸಲು ಕೆಲವು ಸ್ನೇಹಪರ ಸರ್ಕಾರಗಳೊಂದಿಗೆ ಹಾಗೂ ಯೆಮೆನ್​​ನಲ್ಲಿರುವ ಸಂಘ-ಸಂಸ್ಥೆಗಳ ಜೊತೆ ಸಂಪರ್ಕದಲ್ಲಿದೆ” ಎಂದು ಹೇಳಿದೆ.

“ಇದು ಸೂಕ್ಷ್ಮ ವಿಷಯ. ಭಾರತ ಸರ್ಕಾರವು ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದೆ. ನಾವು ಕಾನೂನು ನೆರವು ನೀಡಿದ್ದೇವೆ. ಆಕೆಯ ಕುಟುಂಬಕ್ಕೆ ಸಹಾಯ ಮಾಡಲು ವಕೀಲರನ್ನು ಸಹ ನೇಮಿಸಿದ್ದೇವೆ. ಸಮಸ್ಯೆಯನ್ನು ಪರಿಹರಿಸಲು ನಾವು ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಜುಲೈ 16ರಂದು ನಿಗದಿಯಾಗಿದ್ದ ಅವರ ಮರಣದಂಡನೆಯನ್ನು ಯೆಮೆನ್ ಸರ್ಕಾರ ಮುಂದೂಡಿದೆ. ಸಮಸ್ಯೆಯನ್ನು ಪರಿಹರಿಸಲು ಸ್ಥಳೀಯ ಅಧಿಕಾರಿಗಳು ಮತ್ತು ಕುಟುಂಬ ಸದಸ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಈ ವಿಷಯದಲ್ಲಿ ಶೇಖ್ ಅಬುಬಕರ್ ಅಹ್ಮದ್ ಪಾತ್ರದ ಬಗ್ಗೆ ಹಂಚಿಕೊಳ್ಳಲು ನನಗೆ ಯಾವುದೇ ಮಾಹಿತಿ ಇಲ್ಲ” ಎಂದು ವಿದೇಶಾಂಗ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೇರಳದ ನರ್ಸ್​ ನಿಮಿಷಾ ಪ್ರಿಯಾಳ ಗಲ್ಲು ಶಿಕ್ಷೆ ಮುಂದೂಡಿದ ಯೆಮೆನ್

“ನಾವು ಈ ವಿಷಯವನ್ನು ಬಹಳ ಸೂಕ್ಷ್ಮವಾಗಿ ಅನುಸರಿಸುತ್ತಿದ್ದೇವೆ. ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುತ್ತಿದ್ದೇವೆ. ನಾವು ಕೆಲವು ಸ್ನೇಹಪರ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು MEA ಹೇಳಿದೆ.

ನಿಮಿಷಾ ಪ್ರಿಯಾ ಯಾರು?: 

ಕೇರಳದ ಪಾಲಕ್ಕಾಡ್ ಜಿಲ್ಲೆಯವರಾದ ನಿಮಿಷಾ ಪ್ರಿಯಾ, 2011ರಲ್ಲಿ ತನ್ನ ನರ್ಸಿಂಗ್ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಯೆಮೆನ್‌ಗೆ ತೆರಳಿದರು. ಅವರು ತಮ್ಮ ದೈನಂದಿನ ಕೂಲಿ ಕಾರ್ಮಿಕರಾದ ಪೋಷಕರಿಗೆ ಆರ್ಥಿಕ ಸಹಾಯ ನೀಡಲು ಯೆಮೆನ್​ಗೆ ತೆರಳಿದ್ದರು. ಯೆಮೆನ್‌ನಲ್ಲಿ ತನ್ನ ಕ್ಲಿನಿಕ್ ಅನ್ನು ಪ್ರಾರಂಭಿಸಲು ಸಹಾಯ ಮಾಡುವುದಾಗಿ ತಲಾಲ್ 2014ರಲ್ಲಿ ಭರವಸೆ ನೀಡಿದಾಗ ಆಕೆ ತಲಾಲ್ ಅಬ್ದೋ ಮಹ್ದಿ ಅವರ ಜೊತೆ ಒಡನಾಟ ಬೆಳೆಸಿಕೊಂಡರು.

ಯೆಮೆನ್ ವ್ಯವಹಾರ ಕಾನೂನಿನ ಪ್ರಕಾರ ಅಲ್ಲಿ ಬ್ಯುಸಿನೆಸ್ ಪ್ರಾರಂಭಿಸಲು ವಿದೇಶಿಯೊಬ್ಬ ಸ್ಥಳೀಯರೊಂದಿಗೆ ಪಾಲುದಾರಿಕೆ ಮಾಡಿಕೊಳ್ಳಬೇಕಾಗುತ್ತದೆ. ಹೀಗಾಗಿ, ನಿಮಿಷಾ ತಲಾಲ್ ಜೊತೆ 2015ರಲ್ಲಿ ಸನಾದಲ್ಲಿ ತನ್ನ ಕ್ಲಿನಿಕ್ ಪ್ರಾರಂಭಿಸಿದರು. ಸ್ವಲ್ಪ ದಿನದಲ್ಲೇ ಅವರ ನಡುವೆ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡವು. ಆಕೆ ಯೆಮೆನ್ ಬಿಟ್ಟು ಹೋಗದಂತೆ ನೋಡಿಕೊಳ್ಳಲು ತಲಾಲ್ ನಿಮಿಷಾರ ಪಾಸ್‌ಪೋರ್ಟ್ ಅನ್ನು ಸಹ ತೆಗೆದುಕೊಂಡಿದ್ದ ಎನ್ನಲಾಗಿದೆ. ಆತನಿಂದ ನಿಮಿಷಾ ತನ್ನ ಪಾಸ್‌ಪೋರ್ಟ್ ಮರಳಿ ಪಡೆದು ಭಾರತಕ್ಕೆ ಹಿಂತಿರುಗಲು ಅವನಿಗೆ ಅಮಲಿನ ಡ್ರಗ್ ಚುಚ್ಚಿದಳು. ಆದರೆ, ಅದು ಓವರ್ ಡೋಸ್ ಆಗಿ ಆತ ಸಾವನ್ನಪ್ಪಿದನು. ಇದರಿಂದ ಆಕೆಯನ್ನು ಬಂಧಿಸಿ, ಗಲ್ಲು ಶಿಕ್ಷೆಗೆ ಗುರಿಪಡಿಸಲಾಯಿತು.

ಇದನ್ನೂ ಓದಿ:  ಬ್ಲಡ್ ಮನಿ ನಿರಾಕರಿಸಿದ ಮೃತನ ಸೋದರ; ಯೆಮೆನ್​ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಬಹುತೇಕ ಖಚಿತ

ಬ್ಲಡ್ ಮನಿಗೆ ನಿರಾಕರಣೆ:

ನಿಮಿಷಾಳ ಮರಣದಂಡನೆಯನ್ನು ಮುಂದೂಡಿರುವುದನ್ನು ಮೃತ ವ್ಯಕ್ತಿ ತಲಾಲ್ ಮಹ್ದಿ ಅವರ ಸಹೋದರ ಅಬ್ದೆಲ್‌ಫತ್ತಾ ಮಹ್ದಿ ಟೀಕಿಸಿದ್ದಾರೆ. ಮೃತರ ಕುಟುಂಬದಿಂದ ನಿಮಿಷಾಗೆ ಕ್ಷಮೆ ಪಡೆಯುವ ಪ್ರಯತ್ನಗಳನ್ನು ಮತ್ತು ಭಾರತ ಸರ್ಕಾರ ಸೇರಿದಂತೆ ವಿವಿಧ ಪಕ್ಷಗಳಿಂದ ಮಧ್ಯಸ್ಥಿಕೆಯ ಮಾತುಕತೆಗಳನ್ನು ಅವರು ಬಲವಾಗಿ ತಿರಸ್ಕರಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅಬ್ದುಲ್‌ ಫತ್ತಾಹ್, ಇಸ್ಲಾಮಿಕ್ ಶರಿಯಾ ಕಾನೂನಿನ ಪ್ರಕಾರ ಕ್ವಿಸಾಸ್ (ಪ್ರತೀಕಾರ)ಗಾಗಿ ನಮ್ಮ ಬೇಡಿಕೆ ದೃಢವಾಗಿದೆ. ಮರಣದಂಡನೆ ಜಾರಿಯಾಗುವವರೆಗೆ ಕಾನೂನು ಕ್ರಮಗಳನ್ನು ಮುಂದುವರಿಸುತ್ತೇವೆ. ಮರಣದಂಡನೆಯನ್ನು ಮುಂದೂಡಿದ ಮಾತ್ರಕ್ಕೆ ಆಕೆ ಗಲ್ಲಿಗೇರುವುದು ತಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!