AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಣದಂಡನೆ ರದ್ದು, ಶೀಘ್ರದಲ್ಲೇ ನಿಮಿಷಾ ಪ್ರಿಯಾ ಬಿಡುಗಡೆ; ಧರ್ಮಗುರು ಡಾ. ಕೆ.ಎ. ಪೌಲ್ ಘೋಷಣೆ

ಯೆಮೆನ್​​ನಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ರದ್ದತಿಗೆ ಭಾರತ ಸರ್ಕಾರ ಸೇರಿದಂತೆ ಆಕೆಯ ಕುಟುಂಬ ಶತಾಯಗತಾಯ ಪ್ರಯತ್ನಿಸುತ್ತಿದೆ. ಈ ನಡುವೆ ಯೆಮೆನ್‌ನಲ್ಲಿ ತೀವ್ರ ರಾಜತಾಂತ್ರಿಕ ಪ್ರಯತ್ನದ ನಂತರ ಧರ್ಮ ಗುರು ಕೆಎ ಪೌಲ್ ಗೆಲುವು ಸಾಧಿಸಿದ್ದಾರೆ ಎನ್ನಲಾಗಿದೆ. ಭಾರತೀಯ ನರ್ಸ್‌ ನಿಮಿಷಾಳ ಮರಣದಂಡನೆ ರದ್ದುಗೊಂಡಿದೆ ಎಂದು ಕೆಎ ಪೌಲ್ ಹೇಳಿದ್ದಾರೆ.

ಮರಣದಂಡನೆ ರದ್ದು, ಶೀಘ್ರದಲ್ಲೇ ನಿಮಿಷಾ ಪ್ರಿಯಾ ಬಿಡುಗಡೆ; ಧರ್ಮಗುರು ಡಾ. ಕೆ.ಎ. ಪೌಲ್ ಘೋಷಣೆ
Nimisha Priya
ಸುಷ್ಮಾ ಚಕ್ರೆ
|

Updated on:Jul 22, 2025 | 5:04 PM

Share

ನವದೆಹಲಿ, ಜುಲೈ 22: 38 ವರ್ಷದ ಭಾರತೀಯ ಪ್ರಜೆಯಾದ ಕೇರಳದ ನರ್ಸ್ ನಿಮಿಷಾ ಪ್ರಿಯಾಳ (Nimisha Priya) ಮರಣದಂಡನೆಯನ್ನು ಜುಲೈ 16ರಂದು ನಿಗದಿಪಡಿಸಲಾಗಿತ್ತು. ಆದರೆ, ಭಾರತೀಯ ಅಧಿಕಾರಿಗಳ ಹಸ್ತಕ್ಷೇಪದ ನಂತರ ಅದನ್ನು ಮುಂದೂಡಲಾಯಿತು. ಆಕೆ ಪ್ರಸ್ತುತ ಇರಾನ್ ಬೆಂಬಲಿತ ಹೌತಿಗಳ ನಿಯಂತ್ರಣದಲ್ಲಿರುವ ಯೆಮೆನ್ ರಾಜಧಾನಿ ಸನಾದಲ್ಲಿರುವ ಜೈಲಿನಲ್ಲಿದ್ದಾರೆ. ಈ ಪ್ರಕರಣದ ಪ್ರಮುಖ ರಾಜತಾಂತ್ರಿಕ ಬೆಳವಣಿಗೆಯಲ್ಲಿ, ಯೆಮೆನ್‌ನಲ್ಲಿ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರಿಗೆ ವಿಧಿಸಲಾದ ಮರಣದಂಡನೆಯನ್ನು ಯೆಮೆನ್ ಮತ್ತು ಭಾರತೀಯ ನಾಯಕರ ವ್ಯಾಪಕ ಪ್ರಯತ್ನದ ನಂತರ ರದ್ದುಗೊಳಿಸಲಾಗಿದೆ ಎಂದು ಧರ್ಮ ಗುರು ಡಾ. ಕೆಎ ಪೌಲ್ ಮಂಗಳವಾರ ರಾತ್ರಿ (ಸ್ಥಳೀಯ ಸಮಯ) ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ಯೆಮೆನ್ ಮತ್ತು ಭಾರತೀಯ ನಾಯಕರ ವ್ಯಾಪಕ ಪ್ರಯತ್ನಗಳ ನಂತರ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಗೊಳಿಸಲಾಗಿದೆ ಎಂದು ಜಾಗತಿಕ ಶಾಂತಿ ಉಪಕ್ರಮದ ಸಂಸ್ಥಾಪಕ ಡಾ. ಕೆ.ಎ. ಪೌಲ್ ಮಂಗಳವಾರ ಯೆಮೆನ್‌ನ ಸನಾದಿಂದ ವೀಡಿಯೊ ಸಂದೇಶದಲ್ಲಿ ಹೇಳಿಕೊಂಡಿದ್ದಾರೆ. ಇದರಲ್ಲಿ ಡಾ. ಪೌಲ್ ಯೆಮೆನ್ ನಾಯಕರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಇದನ್ನೂ ಓದಿ: Nimisha Priya: ನಿಮಿಷಾ ಪ್ರಿಯಾ ಪ್ರಕರಣ, ವಿಚಾರಣೆ ಆಗಸ್ಟ್​ 14ಕ್ಕೆ ಮುಂದೂಡಿದ ಸುಪ್ರೀಂ

ಕಳೆದ 10 ದಿನಗಳಿಂದ ಹಗಲಿರುಳು ಪ್ರಯತ್ನ ನಡೆಸಿದ ನಾಯಕರ ಪರಿಶ್ರಮಕ್ಕೆ ಫಲ ಸಿಕ್ಕಿದೆ ಎಂದಿರುವ ಡಾ. ಪೌಲ್, “ನಿಮಿಷಾ ಪ್ರಿಯಾ ಅವರ ಗಲ್ಲು ಶಿಕ್ಷೆ ರದ್ದಾಗಿದ್ದು, ಇದನ್ನು ಯಶಸ್ವಿಗೊಳಿಸಲು ಭಾಗಿಯಾಗಿರುವ ಎಲ್ಲಾ ನಾಯಕರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ದೇವರ ದಯೆಯಿಂದ, ಅವರನ್ನು ಬಿಡುಗಡೆ ಮಾಡಿ ಭಾರತಕ್ಕೆ ಕರೆದೊಯ್ಯಲಾಗುವುದು. ನಿಮ್ಮ ರಾಜತಾಂತ್ರಿಕರನ್ನು ಕಳುಹಿಸಿದ್ದಕ್ಕೆ ಮತ್ತು ನಿಮಿಷಾ ಅವರನ್ನು ವೃತ್ತಿಪರವಾಗಿ, ಸುರಕ್ಷಿತವಾಗಿ ಕರೆದೊಯ್ಯಲು ತಯಾರಿ ನಡೆಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ಹೇಳಿದ್ದಾರೆ.

ನಿಮಿಷಾ ಪ್ರಿಯಾ ಯಾರು?:

ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೊಲ್ಲೆಂಗೋಡ್‌ನ 38 ವರ್ಷದ ನರ್ಸ್ ನಿಮಿಷಾ ಪ್ರಿಯಾ ಅವರಿಗೆ 2017ರಲ್ಲಿ ಯೆಮೆನ್ ಪ್ರಜೆಯ ಕೊಲೆಗೆ ಸಂಬಂಧಿಸಿದಂತೆ ಶಿಕ್ಷೆ ವಿಧಿಸಲಾಯಿತು. 2020ರಲ್ಲಿ ಅವರಿಗೆ ಯೆಮೆನ್ ನ್ಯಾಯಾಲಯವು ಮರಣದಂಡನೆ ವಿಧಿಸಿತು. ಅವರ ಅಂತಿಮ ಮನವಿಯನ್ನು ದೇಶದ ಸುಪ್ರೀಂ ಜುಡಿಷಿಯಲ್ ಕೌನ್ಸಿಲ್ ನವೆಂಬರ್ 2023ರಲ್ಲಿ ತಿರಸ್ಕರಿಸಿತು. ಅವರು ಪ್ರಸ್ತುತ ಯೆಮೆನ್ ರಾಜಧಾನಿ ಸನಾದಲ್ಲಿ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ಬ್ಲಡ್ ಮನಿ ನಿರಾಕರಿಸಿದ ಮೃತನ ಸೋದರ; ಯೆಮೆನ್​ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಬಹುತೇಕ ಖಚಿತ

ನಿಮಿಷಾ ಪ್ರಿಯಾಳನ್ನು ಜುಲೈ 16ರಂದು ಗಲ್ಲಿಗೇರಿಸಲು ನಿರ್ಧರಿಸಲಾಗಿತ್ತು. ಆದರೆ, ಆಕೆಯ ಕುಟುಂಬದೊಂದಿಗೆ ಸಂಭಾವ್ಯ ಒಪ್ಪಂದಕ್ಕೆ ಹೆಚ್ಚಿನ ಸಮಯವನ್ನು ಪಡೆಯಲು ಭಾರತವು ಒತ್ತಡ ಹೇರಿದ ನಂತರ ಯೆಮೆನ್ ಅಧಿಕಾರಿಗಳು ಆಕೆಯ ಮರಣದಂಡನೆಯನ್ನು ಮುಂದೂಡಿದರು.

ನಿಮಿಷಾ ಪ್ರಿಯಾಳ ತಾಯಿ ಪ್ರೇಮಕುಮಾರಿ ಕಳೆದ ವರ್ಷ ತನ್ನ ಮಗಳ ಬಿಡುಗಡೆಗಾಗಿ ಮನವಿ ಮಾಡಲು ಯೆಮೆನ್‌ಗೆ ಪ್ರಯಾಣ ಬೆಳೆಸಿದರು. ಕೇರಳದ ಸುನ್ನಿ ಧರ್ಮಗುರು ಒಬ್ಬರು ಮಧ್ಯಪ್ರವೇಶಕ್ಕಾಗಿ ಪ್ರಮುಖ ಯೆಮೆನ್ ಧಾರ್ಮಿಕ ಗುರುಗಳನ್ನು ಸಂಪರ್ಕಿಸಿದರು. ಈ ಪ್ರಯತ್ನಗಳ ಹೊರತಾಗಿಯೂ, ಯೆಮೆನ್‌ನಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಔಪಚಾರಿಕ ರಾಜತಾಂತ್ರಿಕ ಸಂಬಂಧಗಳ ಕೊರತೆಯಿಂದಾಗಿ ಅಡೆತಡೆಗಳು ಮುಂದುವರೆದಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Tue, 22 July 25

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!