ಕುಡುಕ ಡ್ರೈವರ್​ನ ಅವಾಂತರ: ಪಿಕಪ್ ವಾಹನ ಪಲ್ಟಿ, 9 ಜನರ ಸಾವು

ಜಿಲ್ಲಾಧಿಕಾರಿ ಮಧುಸೂದನ್ ಮಿಶ್ರಾ ಪ್ರಕಾರ, ಪ್ರಯಾಣಿಕರು ಒಡಿಶಾದ ಸಿಂಧಿಗುಡ ಗ್ರಾಮದಿಂದ ಛತ್ತೀಸ್ ಘಡ ಕುಲ್ತಾ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದರು. ಈ ನಡುವೆ ಕುಡಿದ ಮತ್ತಿನಲ್ಲಿ ಚಾಲಕ ವಾಹನ ಚಲಾಯಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಕುಡುಕ ಡ್ರೈವರ್​ನ ಅವಾಂತರ: ಪಿಕಪ್ ವಾಹನ ಪಲ್ಟಿ, 9 ಜನರ ಸಾವು
ಕೊರಪುತ್ ಜಿಲ್ಲೆಯ ಕೋಟ್‌ಪ್ಯಾಡ್‌ನಲ್ಲಿ ವಾಹನ ಪಲ್ಟಿಯಾಗಿರುವುದು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Feb 01, 2021 | 9:52 AM

ಕೊರಪುಟ್‌: ಒಡಿಶಾದ ಕೊರಪುತ್ ಜಿಲ್ಲೆಯ ಕೋಟ್‌ಪ್ಯಾಡ್‌ನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ವ್ಯಾನ್ ಪಲ್ಟಿಯಾಗಿ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದು 13 ಜನರು ಗಾಯಗೊಂಡಿದ್ದಾರೆ.

ಜಿಲ್ಲಾಧಿಕಾರಿ ಮಧುಸೂದನ್ ಮಿಶ್ರಾ ಪ್ರಕಾರ, ಪ್ರಯಾಣಿಕರು ಒಡಿಶಾದ ಸಿಂಧಿಗುಡ ಗ್ರಾಮದಿಂದ ಛತ್ತೀಸ್ ಘಡ ಕುಲ್ತಾ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದರು. ಈ ನಡುವೆ ಕುಡಿದ ಮತ್ತಿನಲ್ಲಿ ಚಾಲಕ ವಾಹನ ಚಲಾಯಿಸಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

“ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು 13 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊರಪುಟ್ ಜಿಲ್ಲೆಯ ಕೋಟ್‌ಪ್ಯಾಡ್‌ನಲ್ಲಿ ಪಿಕಪ್ ವ್ಯಾನ್ ಪಲ್ಟಿಯಾಗಿದೆ. ಪ್ರಯಾಣಿಕರೆಲ್ಲರೂ ಛತ್ತೀಸ್ ಘಡದ ಕುಲ್ತಾ ಗ್ರಾಮದವರು ಮತ್ತು ಸಿಂಧಿಗುಡ ಗ್ರಾಮದಿಂದ ಹಿಂದಿರುಗುತ್ತಿದ್ದರು” ಎಂದು ಮಿಶ್ರಾ ತಿಳಿಸಿದ್ದಾರೆ.

ಇನ್ನು ಗಾಯಗೊಂಡ ಏಳು ಮಂದಿಯನ್ನು ಕೊರಪುತ್‌ನ ಲಕ್ಷ್ಮಣ್ ನಾಯಕ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಹಾಗೂ ಇಬ್ಬರನ್ನು ಕೋಟ್‌ಪ್ಯಾಡ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸಬ್ ಕಲೆಕ್ಟರ್ ಜಯಪುರ ಹೇಮಕಂತ ಸಯಾ ಅವರ ಪ್ರಕಾರ ಗಾಯಗೊಂಡ ಇತರ ನಾಲ್ವರನ್ನು ಜಗದಲ್ಪುರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಶವಗಳನ್ನು ಕೋಟ್‌ಪ್ಯಾಡ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ. ಏಳು ಮಂದಿ ಸ್ಥಳದಲ್ಲೇ ಮತ್ತು ಇಬ್ಬರು ಕೋಟ್‌ಪ್ಯಾಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 30 ಕ್ಕೂ ಹೆಚ್ಚು ಜನರು ವ್ಯಾನ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಫಾರ್ಚೂನರ್​ ಕಾರು ಪಲ್ಟಿ: ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು, ಯಾವೂರಲ್ಲಿ?

Published On - 6:46 am, Mon, 1 February 21

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್