ಜೈಪುರ: ಖಾಸಗಿ ಆಸ್ಪತ್ರೆಯಲ್ಲಿ ಸನಿಟೇಶನ್ ವರ್ಕರ್ ಆಗಿ ಕೆಲಸ ಮಾಡುತ್ತಿರುವ 19 ವರ್ಷದ ಯುವತಿ ತನ್ನ ಮೇಲೆ ಗ್ಯಾಂಗ್ ರೇಪ್ ಆಗಿದೆ ಎಂದು ಸೋಮವಾರ ಶ್ಯಾಮ್ ನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ದೂರು ನೀಡಿರುವ ಘಟನೆ ನಡೆದಿದೆ.
ಒಂಬತ್ತು ದಿನಗಳ ಹಿಂದೆ ನಗರದ ಹೊರವಲಯದಲ್ಲಿ ಐವರು ಕಾಮುಕರು ತನ್ನನ್ನು ಪ್ರತ್ಯೇಕ ಸ್ಥಳಕ್ಕೆ ಕರೆದುಕೊಂಡು ಹೋಗಿ ಡ್ರಗ್ಸ್ ನೀಡಿ ಪೈಶಾಚಿಕ ಕೃತ್ಯ ಎಸಗಿದ್ದಾರೆ ಎಂದು ಯುವತಿ ತಿಳಿಸಿದ್ದಾಳೆ. ಸದ್ಯ ಜೈಪುರದ ಶ್ಯಾಮ್ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.
ಪೊಲೀಸರ ಪ್ರಕಾರ, ಯುವತಿ ಸೋಮವಾರ ಸಂಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಹಾಗೂ ತಾನು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು ಅಲ್ಲಿ ನನಗೆ ಒಬ್ಬ ವ್ಯಕ್ತಿಯ ಪರಿಚಯವಿತ್ತು. ಆ ವ್ಯಕ್ತಿ ತನ್ನನ್ನು ರಿಂಗ್ ರೋಡ್ ಬಳಿಯ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ತನ್ನ ಇತರೆ ನಾಲ್ಕು ಜನ ಸ್ನೇಹಿತರನ್ನು ಕರೆಸಿ ಡ್ರಗ್ಸ್ ನೀಡಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಯುವತಿ ದೂರು ನೀಡಿದ್ದಾಳೆ ಎಂದು ಶ್ಯಾಮ್ ನಗರ ಪೊಲೀಸ್ ಠಾಣಾಧಿಕಾರಿ ಮೋಹನ್ ಮೀನಾ ತಿಳಿಸಿದ್ದಾರೆ.
ಇದನ್ನೂ ಓದಿ: ಮಗಳ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದವನ ಹತ್ಯೆ ಮಾಡಿದ ತಾಯಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್..