ನಿಫಾ ವೈರಸ್ ಸೋಂಕಿತರಲ್ಲಿ ಮರಣ ಪ್ರಮಾಣ ಕೋವಿಡ್​ಗಿಂತಲೂ ಹೆಚ್ಚು; ಆತಂಕಕಾರಿ ಮಾಹಿತಿ ಬಹಿರಂಗಪಡಿಸಿದ ಐಸಿಎಂಆರ್

Nipah Mortality Rate; ದಕ್ಷಿಣದ ರಾಜ್ಯದಲ್ಲಿ ನಿಫಾ ವೈರಸ್ ಸೋಂಕು ಪ್ರಮಾಣ ಹೆಚ್ಚುತ್ತಿರುವುದು ಮತ್ತು ಕೋವಿಡ್‌ಗೆ ಹೋಲಿಸಿದರೆ ಹೆಚ್ಚಿನ ಮರಣ ಪ್ರಮಾಣ ಹೊಂದಿರುವುದರಿಂದ ಅದರ ವಿರುದ್ಧ ಲಸಿಕೆ ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಐಸಿಎಂಆರ್ ತಿಳಿಸಿದೆ.

ನಿಫಾ ವೈರಸ್ ಸೋಂಕಿತರಲ್ಲಿ ಮರಣ ಪ್ರಮಾಣ ಕೋವಿಡ್​ಗಿಂತಲೂ ಹೆಚ್ಚು; ಆತಂಕಕಾರಿ ಮಾಹಿತಿ ಬಹಿರಂಗಪಡಿಸಿದ ಐಸಿಎಂಆರ್
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Sep 16, 2023 | 11:46 AM

ನವದೆಹಲಿ, ಸೆಪ್ಟೆಂಬರ್ 16: ಕೋವಿಡ್-19 ಸೋಂಕಿತರಿಗೆ ಹೋಲಿಸಿದರೆ ನಿಫಾ (Nipah) ವೈರಸ್ ಸೋಂಕಿತರಲ್ಲಿ ಮರಣ ಪ್ರಮಾಣವು ತುಂಬಾ ಹೆಚ್ಚಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮುಖ್ಯಸ್ಥ ಡಾ ರಾಜೀವ್ ಬಹ್ಲ್ ಶುಕ್ರವಾರ ಹೇಳಿದ್ದಾರೆ. ಡಾ ಬಹ್ಲ್ ಅವರ ಪ್ರಕಾರ, ಕೋವಿಡ್‌ನ ಶೇ 2-3 ಮರಣ ಪ್ರಮಾಣಕ್ಕೆ ಹೋಲಿಸಿದರೆ ನಿಫಾ ವೈರಸ್ ಸೋಂಕಿನಿಂದ ಮರಣ ಪ್ರಮಾಣ ಶೇಕಡಾ 40 ರಿಂದ 70 ರಷ್ಟಿದೆ. ಶುಕ್ರವಾರ ಕೇರಳದ ಕೋಝಿಕ್ಕೋಡ್‌ನಲ್ಲಿ ನಿಫಾ ವೈರಸ್‌ನ ಹೊಸ ಪ್ರಕರಣ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6 ಕ್ಕೆ ತಲುಪಿದೆ.

ಕೇರಳದಲ್ಲಿ ಪ್ರಕರಣಗಳ ಹೆಚ್ಚಳದ ಮಧ್ಯೆ, ನಿಫಾ ವೈರಸ್ ಸೋಂಕಿಗೆ ಚಿಕಿತ್ಸೆ ನೀಡಲು ಇನ್ನೂ 20 ಡೋಸ್ ಮೊನೊಕ್ಲೋನಲ್ ಆಂಟಿಬಾಡಿಗಳನ್ನು ಪೂರೈಸುವಂತೆ ಭಾರತವು ಆಸ್ಟ್ರೇಲಿಯಾಕ್ಕೆ ಮನವಿ ಮಾಡಿದೆ.

ದಕ್ಷಿಣದ ರಾಜ್ಯದಲ್ಲಿ ನಿಫಾ ವೈರಸ್ ಸೋಂಕು ಪ್ರಮಾಣ ಹೆಚ್ಚುತ್ತಿರುವುದು ಮತ್ತು ಕೋವಿಡ್‌ಗೆ ಹೋಲಿಸಿದರೆ ಹೆಚ್ಚಿನ ಮರಣ ಪ್ರಮಾಣ ಹೊಂದಿರುವುದರಿಂದ ಅದರ ವಿರುದ್ಧ ಲಸಿಕೆ ಅಭಿವೃದ್ಧಿಪಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಐಸಿಎಂಆರ್ ತಿಳಿಸಿದೆ.

ನಾವು 2018 ರಲ್ಲಿ ಆಸ್ಟ್ರೇಲಿಯಾದಿಂದ ಕೆಲವು ಡೋಸ್ ಮೊನೊಕ್ಲೋನಲ್ ಆಂಟಿಬಾಡಿಗಳನ್ನು ಪಡೆದುಕೊಂಡಿದ್ದೆವು. ಪ್ರಸ್ತುತ, ಕೇವಲ 10 ರೋಗಿಗಳಿಗೆ ಮಾತ್ರ ಸಾಕಾಗುವಷ್ಟು ಲಭ್ಯವಿವೆ ಎಂದು ಡಾ ರಾಜೀವ್ ಬಹ್ಲ್ ತಿಳಿಸಿದ್ದಾರೆ.

ವಿದೇಶಗಳಲ್ಲಿ ನಿಫಾ ವೈರಸ್‌ಗೆ ತುತ್ತಾದ 14 ಜನರು ಮೊನೊಕ್ಲೋನಲ್ ಆಂಟಿಬಾಡಿ ಚಿಕಿತ್ಸೆಯನ್ನು ಪಡೆದ ನಂತರ ಸಂಪೂರ್ಣ ಚೇತರಿಸಿಕೊಂಡಿದ್ದಾರೆ ಎಂದು ಡಾ ಬಹ್ಲ್ ಹೇಳಿದ್ದಾರೆ.

ಇದನ್ನೂ ಓದಿ: Nipah Virus ಭೀತಿ: ನಿಫಾ ವಾರ್ಡ್ ತೆರೆದ ಚಿಕ್ಕಮಗಳೂರು ಜಿಲ್ಲಾಡಳಿತ, ಮೈಸೂರಿನಲ್ಲಿ ಕಟ್ಟೆಚ್ಚರ

ಹೆಚ್ಚುತ್ತಿರುವ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಕೋಝಿಕ್ಕೋಡ್‌ನ ಎಲ್ಲಾ ಶಿಕ್ಷಣ ಸಂಸ್ಥೆಗಳು ಇಂದಿನಿಂದ ಒಂದು ವಾರದವರೆಗೆ ರಜೆ ಘೋಷಿಸಿವೆ.

ಕೇರಳದಲ್ಲಿ ನಿಫಾ ವೈರಸ್ ಸೋಂಕಿತರ ಸಂಪರ್ಕ ಪಟ್ಟಿ 1,080ಕ್ಕೆ ಏರಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಶುಕ್ರವಾರ ಹೇಳಿದ್ದಾರೆ. ಇವರಲ್ಲಿ 327 ಮಂದಿ ಆರೋಗ್ಯ ಕಾರ್ಯಕರ್ತರಾಗಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ