Nipah Virus: ಅಕ್ಟೋಬರ್​ವರೆಗೆ ಕೇರಳದಿಂದ ಕರ್ನಾಟಕಕ್ಕೆ ಆಗಮಿಸಬೇಡಿ; ಮನವಿಪೂರ್ವಕ ಸೂಚನೆ ನೀಡಿದ ಕರ್ನಾಟಕ ಸರ್ಕಾರ

ವಿದ್ಯಾರ್ಥಿಗಳು, ಉದ್ಯೋಗಿಗಳು ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣ ಮುಂದೂಡುವಂತೆ ಸರ್ಕಾರ ತಿಳಿಸಿದೆ.

Nipah Virus: ಅಕ್ಟೋಬರ್​ವರೆಗೆ ಕೇರಳದಿಂದ ಕರ್ನಾಟಕಕ್ಕೆ ಆಗಮಿಸಬೇಡಿ; ಮನವಿಪೂರ್ವಕ ಸೂಚನೆ ನೀಡಿದ ಕರ್ನಾಟಕ ಸರ್ಕಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: guruganesh bhat

Updated on: Sep 07, 2021 | 9:09 PM

ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ (Nipah virus) ಪತ್ತೆಯಾದ ಬೆನ್ನಲ್ಲೆ ಕರ್ನಾಟಕ ಸರ್ಕಾರ ಎಚ್ಚರಿಕಾ ಕ್ರಮಕ್ಕೆ ಮುಂದಾಗಿದೆ. ಕೇರಳದಿಂದ ಕರ್ನಾಟಕಕ್ಕೆ ಅಕ್ಟೋಬರ್ ಅಂತ್ಯದವರೆಗೂ ಆಗಮಿಸದಂತೆ ಸರ್ಕಾರ ಮನವಿಪೂರ್ವಕ ಸೂಚನೆ ನೀಡಿದೆ. ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆಗಳು, ನರ್ಸಿಂಗ್ ಹೋಮ್, ಕಾರ್ಖಾನೆ, ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಸೂಚನೆ ರವಾನಿಸಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು ಕೇರಳದಿಂದ ಕರ್ನಾಟಕಕ್ಕೆ ಪ್ರಯಾಣ ಮುಂದೂಡುವಂತೆ ಸರ್ಕಾರ ತಿಳಿಸಿದೆ. ರಾಜ್ಯ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದ್ದು, ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಎಂದಿಗಿಂತ ಹೆಚ್ಚು ನಿಗಾ ವಹಿಸಲು ತಿಳಿಸಲಾಗಿದೆ. ಜ್ವರ, ಕೆಮ್ಮು, ಶೀತ ಮೈಕೈ ನೋವು ಕಂಡುಬಂದವರ ಮೇಲೆ ನಿಗಾ ಇಡಿ. ಸಾರ್ವಜನಿಕರು ಓಡಾಡುವ ಸ್ಥಳದಲ್ಲಿ ಜಾಗೃತಿ ಮೂಡಿಸಿ. ಆನಾರೋಗ್ಯವಿರುವವರ ಸ್ಯಾಂಪಲ್ಸ್ ಸಂಗ್ರಹಿಸುವಂತೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಕೇರಳದ ಕೋಯಿಕ್ಕೋಡ್‌ (Kozhikode) ಜಿಲ್ಲೆಯಲ್ಲಿ ನಿಫಾ ಪ್ರಕರಣ ಪತ್ತೆಯಾದ ನಂತರ ಆರೋಗ್ಯ ಸಚಿವಾಲಯವು ಕಣ್ಣೂರ್, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಯಲ್ಲಿ ಎಚ್ಚರಿಕೆ ಘೋಷಿಸಿದೆ. ಸಾವನ್ನಪ್ಪಿದ ಹುಡುಗನ ಸಂಪರ್ಕದಲ್ಲಿದ್ದ 11 ಮಂದಿಗೆ ರೋಗಲಕ್ಷಣಗಳಿದ್ದು ಮತ್ತು 251 ಸಂಪರ್ಕಗಳನ್ನು ಪತ್ತೆ ಮಾಡಲಾಗಿದೆ, ಅವರಲ್ಲಿ 129 ಆರೋಗ್ಯ ಕಾರ್ಯಕರ್ತರಾಗಿದ್ದಾರೆ. ಏತನ್ಮಧ್ಯೆ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 16,055 ಆರ್‌ಟಿಪಿಸಿಆರ್-ಪಾಸಿಟಿವ್ ಕೊವಿಡ್ -19 ಮಾದರಿಗಳನ್ನು ಜುಲೈ ಮತ್ತು ಆಗಸ್ಟ್‌ನಲ್ಲಿ ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂನ ಅಡಿಯಲ್ಲಿರುವ ಅತ್ಯುನ್ನತ ಲ್ಯಾಬ್ ನೆಟ್‌ವರ್ಕ್‌ಗೆ ಸಂಪೂರ್ಣ ಜೀನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಿವೆ ಎಂದು ಕೇರಳ ಸರ್ಕಾರ ಹೇಳಿದೆ.

ಕೋಯಿಕ್ಕೋಡ್​​ನಲ್ಲಿ ನಿಫಾ ವೈರಸ್‌ನಿಂದ ಭಾನುವಾರ ಮೃತಪಟ್ಟ 12 ವರ್ಷದ ಬಾಲಕನ ನಿಕಟ ಸಂಪರ್ಕದಿಂದ ಎಂಟು ಮಾದರಿಗಳು ಮಂಗಳವಾರ ನೆಗೆಟಿವ್ ಆಗಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ರಾಷ್ಟ್ರೀಯ ವೈರಾಲಜಿ ಸಂಸ್ಥೆಯಿಂದ (ಪುಣೆ) ಇನ್ನೂ ಐದು ಫಲಿತಾಂಶಗಳನ್ನು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ: 

Nipah Virus: ಕೊವಿಡ್​ಗಿಂತಲೂ ಅಪಾಯಕಾರಿಯಾಗಿರುವ ನಿಫಾ ವೈರಸ್ ಬಗ್ಗೆ ನಿಮಗೆಷ್ಟು ಗೊತ್ತು?

ನಿಫಾ ಭೀತಿ: ಕೇರಳದಿಂದ ಬರುವವರಿಗೆ ಕಡ್ಡಾಯ ತಪಾಸಣೆ; ಇನ್ನೊಂದೆಡೆ, ಹಣ್ಣುಗಳಿಂದ ವೈರಸ್​ ಹಬ್ಬುವ ಭಯ

(Nipah Virus fear Karnataka Government requests travelers from Kerala to postpone travel by October)

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ