AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಭಯಾ ರೇಪ್ ಅಂಡ್ ಮರ್ಡರ್ ಪ್ರಕರಣ: ಅತ್ಯಾಚಾರಿಗಳು ಗಲ್ಲಿಗೇರುವ ಡೇಟ್ ಫಿಕ್ಸ್​

ದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳಿಗೆ ಡೆತ್ ವಾರಂಟ್ ಜಾರಿ ಮಾಡಲಾಗಿದೆ. ಅಪರಾಧಿಗಳಾದ ಅಕ್ಷಯ್, ಮುಖೇಶ್, ವಿನಯ್, ಪವನ್‌ಗೆೆ ಗಲ್ಲು  ವಿಧಿಸಿಲು ದಿನಾಂಕ ನಿಗದಿ ಮಾಡಿ ಕೋರ್ಟ್​ ತೀರ್ಪು ನೀಡಿದೆ. ಜ.22ರ ಬೆಳಗ್ಗೆ 7 ಗಂಟೆಗೆ ನಾಲ್ವರು ಅಪರಾಧಿಗಳಿಗೆ ಗಲ್ಲು ವಿಧಿಸಲು ದೆಹಲಿಯ ಪಟಿಯಾಲ ಹೌಸ್​ ಕೋರ್ಟ್‌ ಆದೇಶಿಸಿದೆ. ಕ್ಯುರೇಟಿವ್ ಅರ್ಜಿ ಹಾಕಿದ್ರೂ ತಿರಸ್ಕೃತವಾಗುವ ಸಾಧ್ಯತೆ: ಅಪರಾಧಿಗಳಿಗೆ ಕೋರ್ಟ್​ನಿಂದ ಡೆತ್ ವಾರಂಟ್ ಜಾರಿ ಹಿನ್ನೆಲೆಯಲ್ಲಿ ಅಪರಾಧಿಗಳು ಕ್ಯುರೇಟಿವ್ ಅರ್ಜಿ […]

ನಿರ್ಭಯಾ ರೇಪ್ ಅಂಡ್ ಮರ್ಡರ್ ಪ್ರಕರಣ: ಅತ್ಯಾಚಾರಿಗಳು ಗಲ್ಲಿಗೇರುವ ಡೇಟ್ ಫಿಕ್ಸ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 08, 2020 | 11:22 AM

Share

ದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳಿಗೆ ಡೆತ್ ವಾರಂಟ್ ಜಾರಿ ಮಾಡಲಾಗಿದೆ. ಅಪರಾಧಿಗಳಾದ ಅಕ್ಷಯ್, ಮುಖೇಶ್, ವಿನಯ್, ಪವನ್‌ಗೆೆ ಗಲ್ಲು  ವಿಧಿಸಿಲು ದಿನಾಂಕ ನಿಗದಿ ಮಾಡಿ ಕೋರ್ಟ್​ ತೀರ್ಪು ನೀಡಿದೆ. ಜ.22ರ ಬೆಳಗ್ಗೆ 7 ಗಂಟೆಗೆ ನಾಲ್ವರು ಅಪರಾಧಿಗಳಿಗೆ ಗಲ್ಲು ವಿಧಿಸಲು ದೆಹಲಿಯ ಪಟಿಯಾಲ ಹೌಸ್​ ಕೋರ್ಟ್‌ ಆದೇಶಿಸಿದೆ.

ಕ್ಯುರೇಟಿವ್ ಅರ್ಜಿ ಹಾಕಿದ್ರೂ ತಿರಸ್ಕೃತವಾಗುವ ಸಾಧ್ಯತೆ: ಅಪರಾಧಿಗಳಿಗೆ ಕೋರ್ಟ್​ನಿಂದ ಡೆತ್ ವಾರಂಟ್ ಜಾರಿ ಹಿನ್ನೆಲೆಯಲ್ಲಿ ಅಪರಾಧಿಗಳು ಕ್ಯುರೇಟಿವ್ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ. ತೀರ್ಪಿನಲ್ಲಿ ಲೋಪಗಳಿದ್ದಾಗ ಅದನ್ನು ಸರಿಪಡಿಸುವಂತೆ ಮಾತ್ರ ಅಪರಾಧಿಗಳು ಕ್ಯುರೇಟಿವ್ ಅರ್ಜಿ ಸಲ್ಲಿಸಬಹುದು. ಆದ್ರೆ, ಕೋರ್ಟ್​ರೂಂನಲ್ಲಿ ಕ್ಯುರೇಟಿವ್ ಅರ್ಜಿ ವಿಚಾರಣೆ ನಡೆಯುವುದಿಲ್ಲ. ನ್ಯಾಯಮೂರ್ತಿಗಳ ಚೇಂಬರ್​ನಲ್ಲಿ ಅರ್ಜಿ ಇತ್ಯರ್ಥವಾಗುತ್ತದೆ. ಈ ಪ್ರಕರಣದಲ್ಲಿ ಅಪರಾಧಿಗಳಿಗೆ ಕ್ಯುರೇಟಿವ್ ಅರ್ಜಿಯಿಂದ ಯಾವುದೇ ಅನುಕೂಲವಾಗುವ ಸಾಧ್ಯತೆ ಇಲ್ಲ. ಅಪರಾಧಿಗಳು ಅರ್ಜಿ ಹಾಕಿದರೂ ಶೀಘ್ರ ತಿರಸ್ಕೃತವಾಗುವ ಸಾಧ್ಯತೆಯಿದೆ.

2012ರ ಡಿಸೆಂಬರ್ 16ರಂದು ಸ್ನೇಹಿತನ ಜೊತೆ ಸಿನಿಮಾ ನೋಡಿ ಸಂತ್ರಸ್ತೆ ಮನೆಗೆ ಹಿಂತಿರುಗುತ್ತಿದ್ದರು. ರಾತ್ರಿ 9.30ರ ವೇಳೆ ಸಂತ್ರಸ್ತೆ ಮತ್ತು ಸ್ನೇಹಿತ ಬಸ್ ಹತ್ತಿದರು. ಆಗ ಚಲಿಸುತ್ತಿದ್ದ ಬಸ್​ನಲ್ಲೇ ಸ್ನೇಹಿತನಿಗೆ ಹೊಡೆದು ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿದ್ದರು. ಬಳಿಕ ಬಸ್​ನಿಂದ ಇಬ್ಬರನ್ನೂ ನಡುರಸ್ತೆಗೆ ತಳ್ಳಿ ಅತ್ಯಾಚಾರಿಗಳು ಪರಾರಿಯಾಗಿದ್ದರು. ಡಿಸೆಂಬರ್ 27ರಂದು ಸಂತ್ರಸ್ತೆಯನ್ನು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ಏರ್ ಆ್ಯಂಬುಲೆನ್ಸ್ ಮೂಲಕ ಸ್ಥಳಾಂತರಿಸಲಾಯಿತು. ಆದ್ರೆ ಡಿ. 29ರಂದು ಚಿಕಿತ್ಸೆ ಫಲಿಸದೆ ಮಧ್ಯರಾತ್ರಿ 2.10ಕ್ಕೆ ಸಂತ್ರಸ್ತೆ ಮೃತಪಟ್ಟರು.

Published On - 5:10 pm, Tue, 7 January 20

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ