ಕೊರೊನಾ ಲಸಿಕೆ ಖರೀದಿಗೆ ಹೆಚ್ಚಿನ ಹಣ ನೀಡಲು ನಿರ್ಮಲಾ ಸೀತಾರಾಮನ್ ಒಪ್ಪಿಗೆ

ಇದರಿಂದ ನಿತ್ಯ 1 ಕೋಟಿ ಡೋಸ್ ಲಸಿಕೆ ನೀಡುವ ಗುರಿ ತಲುಪಲು ಸಾಧ್ಯ ಆಗಲಿದೆ. 24 ಗಂಟೆ ಲಸಿಕೆ ನೀಡಿದರೆ 84 ಲಕ್ಷ ಜನರಿಗೆ ನೀಡಬಹುದು ಎಂದು ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ.ಸುಬ್ರಹ್ಮಣ್ಯನ್ ಹೇಳಿದ್ದಾರೆ.

ಕೊರೊನಾ ಲಸಿಕೆ ಖರೀದಿಗೆ ಹೆಚ್ಚಿನ ಹಣ ನೀಡಲು ನಿರ್ಮಲಾ ಸೀತಾರಾಮನ್ ಒಪ್ಪಿಗೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Jun 17, 2021 | 11:01 PM

ದೆಹಲಿ: ಕೊರೊನಾ ಲಸಿಕೆಗೆ ಬಜೆಟ್​ನಲ್ಲಿ 35 ಸಾವಿರ ಕೋಟಿ ರೂಪಾಯಿ ಹಂಚಿಕೆ ಮಾಡಲಾಗುತ್ತದೆ. ಇದರ ಜೊತೆಗೆ ಇನ್ನೂ 15 ಸಾವಿರ ಕೋಟಿ ರೂಪಾಯಿ ಬೇಕಾಗುತ್ತದೆ. ಲಸಿಕೆ ಖರೀದಿಗೆ ಹೆಚ್ಚಿನ ಹಣ ನೀಡಲು ಸಿದ್ಧ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ ಎಂಬ ಬಗ್ಗೆ ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ.ಸುಬ್ರಹ್ಮಣ್ಯನ್ ತಿಳಿಸಿದ್ದಾರೆ.

ಇದರಿಂದ ನಿತ್ಯ 1 ಕೋಟಿ ಡೋಸ್ ಲಸಿಕೆ ನೀಡುವ ಗುರಿ ತಲುಪಲು ಸಾಧ್ಯ ಆಗಲಿದೆ. 24 ಗಂಟೆ ಲಸಿಕೆ ನೀಡಿದರೆ 84 ಲಕ್ಷ ಜನರಿಗೆ ನೀಡಬಹುದು ಎಂದು ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ.ಸುಬ್ರಹ್ಮಣ್ಯನ್ ಹೇಳಿದ್ದಾರೆ.

ಮಕ್ಕಳ ಮೇಲೆ ಲಸಿಕೆ ಪ್ರಯೋಗ ಮುಂದಿನ ತಿಂಗಳು ಮಕ್ಕಳ ಮೇಲೆ ಲಸಿಕೆಯ ಪ್ರಯೋಗ ಮಾಡಲಾಗುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನೋವಾವ್ಯಾಕ್ಸ್, ಕೊವ್ಯಾಕ್ಸಿನ್, ಜೈಕೋವ್​​ ಲಸಿಕೆ ಟ್ರಯಲ್ ಮಾಡಲಾಗುವುದು ಎಂದು ತಿಳಿಸಲಾಗಿದೆ. ಈಗಾಗಲೇ ಅಮೆರಿಕದಲ್ಲಿ ನೋವಾವ್ಯಾಕ್ಸ್​​ ಪರಿಣಾಮಕಾರಿ ಎಂದು ವರದಿ ಲಭ್ಯವಾಗಿದೆ. ನೋವಾವ್ಯಾಕ್ಸ್ ಶೇಕಡಾ 91ರಷ್ಟು ಪರಿಣಾಮಕಾರಿಯಾಗಿರುವ ಬಗ್ಗೆ ತಿಳಿದುಬಂದಿದೆ.

ಭಾರತದಲ್ಲಿ ಈಗ ಮಕ್ಕಳ ಮೇಲೆ ಲಸಿಕೆ ಪ್ರಯೋಗಕ್ಕೆ ನಿರ್ಧಾರ ಮಾಡಲಾಗಿದೆ. 3ನೇ ಅಲೆಯಲ್ಲಿ ಮಕ್ಕಳ ಮೇಲೆ ಕೊರೊನಾ ದಾಳಿ ಸಾಧ್ಯತೆ ಇದೆ ಎಂಬ ಅಭಿಪ್ರಾಯ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳ ಮೇಲೆ ಲಸಿಕೆಯ ಪ್ರಯೋಗ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ದೇಶದಲ್ಲಿ 10 ರಿಂದ 18 ವರ್ಷದ 20 ಕೋಟಿ ಮಕ್ಕಳಿದ್ದಾರೆ.  ಮಕ್ಕಳನ್ನು ರಕ್ಷಿಸುವುದಕ್ಕೆ ಲಸಿಕೆ ನೀಡಿಕೆಯೊಂದೇ ಅಸ್ತ್ರ ಎಂದು ಹೇಳಲಾಗಿದೆ.

ಕರ್ನಾಟಕದ ನೆರೆಯಲ್ಲಿರುವ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿನ 3ನೇ ಅಲೆ ಶೀಘ್ರದಲ್ಲಿಯೇ ಬಾಧಿಸಬಹುದು ಎಂದು ಮಹಾರಾಷ್ಟ್ರ ಸರ್ಕಾರದ ತಜ್ಞರ ಕಾರ್ಯಪಡೆ ಎಚ್ಚರಿಕೆ ನೀಡಿದೆ. ಇನ್ನು ಕೇವಲ 2ರಿಂದ 4 ವಾರಗಳ ಒಳಗೆ ಮಹಾರಾಷ್ಟ್ರಕ್ಕೆ ಕೊವಿಡ್ 3ನೇ ಅಲೆ ವ್ಯಾಪಿಸುವ ಆತಂಕವಿದ್ದು, ಸಕ್ರಿಯ ಸೋಂಕು ಪ್ರಕರಣಗಳು 8 ಲಕ್ಷ ಮುಟ್ಟಬಹುದು ಎಂದು ಕಾರ್ಯಪಡೆಯ ಸದಸ್ಯರು ವಿಶ್ಲೇಷಿಸಿದ್ದಾರೆ. ಈವರೆಗೆ ಸೋಂಕು ಬಾಧಿಸದ ಕೆಳ ಮಧ್ಯಮವರ್ಗದ ಜನರಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳಬಹುದು. ಈ ಹಿಂದೆ ಆಂದಾಜಿಸಿದ್ದಂತೆ ಮಕ್ಕಳಲ್ಲಿ ಸೋಂಕು ಹೆಚ್ಚಾಗಿ ಬಾಧಿಸಬಹುದು ಎಂದು ಕಾರ್ಯಪಡೆ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಲಸಿಕೆ ನೀಡಿಕೆ ಪ್ರಕ್ರಿಯೆ ವೇಗ ಪಡೆದುಕೊಳ್ಳುವುದು ಅನಿವಾರ್ಯವಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರಕ್ಕೆ ಕೊವಿಡ್ 3ನೇ ಅಲೆಯ ಕಾರ್ಮೋಡ; 8 ಲಕ್ಷ ಮಂದಿಗೆ ಸೋಂಕು ತಗುಲುವ ಆತಂಕ

Covid 19 Karnataka Update: ಕರ್ನಾಟಕದಲ್ಲಿ 5983 ಮಂದಿಗೆ ಕೊರೊನಾ ಸೋಂಕು, 138 ಸಾವು

Published On - 10:45 pm, Thu, 17 June 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್