ಶಿಥಿಲಗೊಂಡ ಗೃಹ ನಿರ್ಮಾಣ ಕ್ಷೇತ್ರಕ್ಕೆ 25 ಸಾವಿರ ಕೋಟಿ ವಿಶೇಷ ಪ್ಯಾಕೇಜ್
ದೆಹಲಿ: ಮನೆ ಖರೀದಿಸುವ ಕನಸು ಕಾಣುವ ಮಧ್ಯಮ, ಕೆಳ ಮಧ್ಯಮ ವರ್ಗದವರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿಹಿಸುದ್ದಿ ನೀಡಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮ ಚೇತರಿಕೆ ಕಾಣಬಹುದಾದ ವಿಶೇಷ ಪ್ಯಾಕೇಜ್ ಇದಾಗಿದೆ. ಸ್ಥಗಿತಗೊಂಡಿರುವ ಗೃಹ ನಿರ್ಮಾಣ ಯೋಜನೆಗಳಿಗೆ ನೆರವು ನೀಡಲು ಮತ್ತು ಆರ್ಥಿಕತೆಗೆ ಚೇತರಿಕೆ ನೀಡಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿದೆ. 25 ಸಾವಿರ ಕೋಟಿ ರೂಪಾಯಿ ಮೊತ್ತದ ಪರಿಹಾರ ನಿಧಿ ಸ್ಥಾಪಿಸಲು ಮುಂದಾಗಿದೆ. ಹಣಕಾಸು ಅಲಭ್ಯತೆ, ಮತ್ತಿತರ ನಿರ್ಮಾಣ ಚಟುವಟಿಕೆಗಳಿಂದ ಸ್ಥಗಿತಗೊಂಡಿರುವ 1600 ಗೃಹ […]
ದೆಹಲಿ: ಮನೆ ಖರೀದಿಸುವ ಕನಸು ಕಾಣುವ ಮಧ್ಯಮ, ಕೆಳ ಮಧ್ಯಮ ವರ್ಗದವರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿಹಿಸುದ್ದಿ ನೀಡಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮ ಚೇತರಿಕೆ ಕಾಣಬಹುದಾದ ವಿಶೇಷ ಪ್ಯಾಕೇಜ್ ಇದಾಗಿದೆ.
ಸ್ಥಗಿತಗೊಂಡಿರುವ ಗೃಹ ನಿರ್ಮಾಣ ಯೋಜನೆಗಳಿಗೆ ನೆರವು ನೀಡಲು ಮತ್ತು ಆರ್ಥಿಕತೆಗೆ ಚೇತರಿಕೆ ನೀಡಲು ಕೇಂದ್ರ ಸರ್ಕಾರ ಪ್ಲಾನ್ ಮಾಡಿದೆ. 25 ಸಾವಿರ ಕೋಟಿ ರೂಪಾಯಿ ಮೊತ್ತದ ಪರಿಹಾರ ನಿಧಿ ಸ್ಥಾಪಿಸಲು ಮುಂದಾಗಿದೆ. ಹಣಕಾಸು ಅಲಭ್ಯತೆ, ಮತ್ತಿತರ ನಿರ್ಮಾಣ ಚಟುವಟಿಕೆಗಳಿಂದ ಸ್ಥಗಿತಗೊಂಡಿರುವ 1600 ಗೃಹ ನಿರ್ಮಾಣ ಯೋಜನೆಗಳನ್ನು ಪೂರ್ಣಗೊಳಿಸಲು ಹಣಕಾಸು ನೆರವು ನೀಡುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಅಸೆಟ್ ಆಲ್ಟರ್ನೇಟಿವ್ ಫಂಡ್ ಅಥವಾ ಆಸ್ತಿ ಪರ್ಯಾಯ ನಿಧಿ (ಎಐಎಫ್) ಸ್ಥಾಪಿಸಿ ಕೇಂದ್ರ ಸರ್ಕಾರ ಈ ನಿಧಿಗೆ 10 ಸಾವಿರ ಕೋಟಿ ರೂ ಹಾಕುತ್ತದೆ. ಎಸ್ಬಿಐ, ಎಲ್ಐಸಿ ಮೊದಲಾದ ಸರ್ಕಾರಿ ಸಂಸ್ಥೆಗಳೂ ಕೂಡ ಇಲ್ಲಿ ಹೂಡಿಕೆ ಮಾಡುತ್ತವೆ. ಒಟ್ಟಾರೆಯಾಗಿ ಈ ನಿಧಿಯಲ್ಲಿ 25 ಸಾವಿರ ಕೋಟಿ ಇರಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ ಯೋಜನೆಯೂ ಮಧ್ಯಮ ವರ್ಗದ ಹಣ ಹೂಡಿಕೆದಾರರು ಎದುರಿಸುತ್ತಿರುವ ಆರ್ಥಿಕ ಸಮಸ್ಯೆ ಯನ್ನು ನಿವಾರಿಸಲು ಸಹಾಯಕವಾಗಲಿದೆ . ಹಾಗೂ ಸಿಮೆಂಟ್, ಕಬ್ಬಿಣ ಮತ್ತು ಉಕ್ಕಿನ ಕೈಗಾರಿಕೆಗಳ ಬೇಡಿಕೆಯನ್ನು ಹೆಚ್ಚಿಸಲಿದೆ. ಉದ್ಯೂಗ ಸೃಷ್ಟಿಯಾಗಲಿದೆ.
Published On - 9:00 am, Thu, 7 November 19