Nirmala Sitharaman: ಭಾರತದಲ್ಲಿ ಮುಸ್ಲಿಮರ ಸ್ಥಿತಿ ಪಾಕಿಸ್ತಾನಕ್ಕಿಂತ ಉತ್ತಮವಾಗಿದೆ: ನಿರ್ಮಲಾ ಸೀತಾರಾಮನ್ ಖಡಕ್ ಉತ್ತರ

ಭಾರತದಲ್ಲಿ ಅಲ್ಪಸಂಖ್ಯಾತ ಸಮುದಾಯವು ಇಸ್ಲಾಮಿಕ್ ದೇಶವಾದ ಪಾಕಿಸ್ತಾನಕ್ಕಿಂತ ಹೆಚ್ಚು ಉತ್ತಮವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

Nirmala Sitharaman: ಭಾರತದಲ್ಲಿ ಮುಸ್ಲಿಮರ ಸ್ಥಿತಿ ಪಾಕಿಸ್ತಾನಕ್ಕಿಂತ ಉತ್ತಮವಾಗಿದೆ: ನಿರ್ಮಲಾ ಸೀತಾರಾಮನ್ ಖಡಕ್ ಉತ್ತರ
ನಿರ್ಮಲಾ ಸೀತಾರಾಮನ್
Follow us
ನಯನಾ ರಾಜೀವ್
|

Updated on: Apr 11, 2023 | 10:34 AM

ಭಾರತದಲ್ಲಿ ಅಲ್ಪಸಂಖ್ಯಾತ ಸಮುದಾಯವು ಇಸ್ಲಾಮಿಕ್ ದೇಶವಾದ ಪಾಕಿಸ್ತಾನಕ್ಕಿಂತ ಹೆಚ್ಚು ಉತ್ತಮವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಹೇಳಿದರು. ಅಮೆರಿಕ ಮೂಲದ ಪೀಟರ್ಸನ್ ಇನ್​ಸ್ಟಿಟ್ಯೂಟ್ ಫಾರ್ ಇಂಟರ್ನ್ಯಾಷನಲ್ ಎಕನಾಮಿಕ್ಸ್ (ಪಿಐಐಐ) ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ನಿರ್ಮಲಾ ಸೀತಾರಾಮನ್ ಅವರ ಬಳಿ, ಭಾರತದಲ್ಲಿ ಮುಸ್ಲಿಮರ ಮೇಲಿನ ಹಿಂಸಾಚಾರದ ಸುದ್ದಿ ಹೆಚ್ಚುತ್ತಿರುವ ಬಗ್ಗೆ ಪ್ರಶ್ನಿಸಿದಾಗ ಇಸ್ಲಾಮಿಕ್ ರಾಷ್ಟ್ರವಾಗಿರುವ ಪಾಕಿಸ್ತಾನಕ್ಕಿಂತ ಭಾರತದಲ್ಲಿ ಮುಸ್ಲಿಮರ ಸ್ಥಿತಿ ಉತ್ತಮವಾಗಿದೆ ಎಂದು ಕೇಂದ್ರ ಸಚಿವರು ಸಮರ್ಥಿಸಿಕೊಂಡರು.

ಮುಸ್ಲಿಮರ ಮೇಲೆ ಹಿಂಸಾಚಾರ ನಡೆದಿದ್ದರೆ ಜನಸಂಖ್ಯೆ ಹೆಚ್ಚಾಗುತ್ತಿರಲಿಲ್ಲ, ಭಾರತವು ವಿಶ್ವದ ಎರಡನೇ ಅತಿ ದೊಡ್ಡ ಮುಸ್ಲಿಂ ಬಹುಸಂಖ್ಯಾತ ರಾಷ್ಟ್ರವಾಗಿದ್ದು, ಮುಸ್ಲಿಂ ಸಮುದಾಯದ ಜನಸಂಖ್ಯೆಯೂ ದೇಶದಲ್ಲಿ ವೇಗವಾಗಿ ಹೆಚ್ಚುತ್ತಿದೆ. ಸರ್ಕಾರದ ಬೆಂಬಲದಿಂದ ಅವರ ಜೀವನ ಇಷ್ಟು ಕಷ್ಟವಾಗಿದ್ದರೆ, 1947 ರಿಂದ ಅವರ ಜನಸಂಖ್ಯೆ ಇಷ್ಟು ಹೆಚ್ಚಾಗುತ್ತಿತ್ತೇ ಎಂದಿದ್ದಾರೆ.

ಮತ್ತಷ್ಟು ಓದಿ: Pakistan Economic Crisis: ದೇಶದ ಜನರಿಗೆ 24×7 ಅನಿಲ ಪೂರೈಕೆ ಸಾಧ್ಯವಿಲ್ಲ ಎಂದ ಪಾಕ್ ಸಚಿವ

ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಸಂಖ್ಯೆ ನಿರಂತರವಾಗಿ ಕಡಿಮೆಯಾಗುತ್ತಿದೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಸ್ಥಿತಿ ಹದಗೆಡುತ್ತಿದೆ ಮತ್ತು ಅವರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಸಣ್ಣಪುಟ್ಟ ಆರೋಪಗಳನ್ನು ಮಾಡಲಾಗುತ್ತದೆ, ಅದಕ್ಕೆ ಮರಣದಂಡನೆಯಂತಹ ಶಿಕ್ಷೆಯನ್ನು ನೀಡಲಾಗುತ್ತದೆ ಎಂದರು.

ಭಾರತದಲ್ಲಿ ಪ್ರತಿಯೊಂದು ವರ್ಗದ ಮುಸ್ಲಿಮರು ತಮ್ಮದೇ ಆದ ವ್ಯಾಪಾರವನ್ನು ಮಾಡುತ್ತಿದ್ದಾರೆ, ಅವರ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ ಅವರಿಗೆ ಸರ್ಕಾರ ಫೆಲೋಶಿಪ್ ನೀಡುತ್ತಿದೆ. ಅಂತಾರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವಬ್ಯಾಂಕ್​ನ ಸಭೆಯಲ್ಲಿ ಪಾಲ್ಗೊಳ್ಳುವ ದೃಷ್ಟಿಯಿಂದ ನಿರ್ಮಲಾ ಸೀತಾರಾಮನ್ ಅಮೆರಿಕಕ್ಕೆ ತೆರಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ