AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nirmala Sitharaman Discharged: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೊಟ್ಟೆ ಸೋಂಕಿನ ಕಾರಣದಿಂದ  ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿದೆ.

Nirmala Sitharaman Discharged: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ನಿರ್ಮಲಾ ಸೀತಾರಾಮನ್
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Dec 29, 2022 | 3:15 PM

Share

ದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೊಟ್ಟೆ ಸೋಂಕಿನ ಕಾರಣದಿಂದ  ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಮೂಲಗಳು ತಿಳಿಸಿದೆ. ಅವರು ಹೊಟ್ಟೆ ಸೋಂಕಿನಿಂದ ಬಳಲುತ್ತಿದ್ದು, ಮೂರು ದಿನಗಳ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ದಾಖಲಾಗಿದ್ದರು, ಇದೀಗ ಏಮ್ಸ್ ಆಸ್ಪತ್ರೆಯಿಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಡಿಸ್ಚಾರ್ಜ್ ಆಗಿದ್ದಾರೆ.

ಸೀತಾರಾಮನ್ ಶನಿವಾರ ಚೆನ್ನೈನಲ್ಲಿರುವ ತಮಿಳುನಾಡು ಡಾ ಎಂಜಿಆರ್ ವೈದ್ಯಕೀಯ ವಿಶ್ವವಿದ್ಯಾಲಯದ 35 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಿದ್ದರು. ಸೀತಾರಾಮನ್ ಅವರು ಡಿಸೆಂಬರ್ 25 ರಂದು ನವದೆಹಲಿಯ ‘ಸದೈವ್ ಅಟಲ್’ ನಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಪುಷ್ಪ ನಮನ ಸಲ್ಲಿಸಿದರು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಸೋಮವಾರ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (AIIMS)ಗೆ ದಾಖಲಾಗಿತ್ತು. 63 ವರ್ಷದ ನಿರ್ಮಲಾ ಸೀತಾರಾಮನ್ ಅವರನ್ನು ಏಮ್ಸ್​ ಆಸ್ಪತ್ರೆಯ ಖಾಸಗಿ ವಾರ್ಡ್‌ನಲ್ಲಿ ದಾಖಲು ಮಾಡಲಾಗಿತ್ತು.

ಇದನ್ನು ಓದಿ:  ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಿರ್ಮಲಾ ಸೀತಾರಾಮನ್ ಅವರನ್ನು ಏಮ್ಸ್​ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ವರ್ಷದ ಜುಲೈನಲ್ಲಿ ನಿರ್ಮಲಾ ಸೀತಾರಾಮನ್ ಅವರಿಗೆ ಇಂಡೋನೇಷ್ಯಾದ ಬಾಲಿಯಿಂದ ಹಿಂದಿರುಗಿದ ನಂತರ ಕೋವಿಡ್ -19 ಗೆ ಪಾಸಿಟಿವ್ ದೃಢಪಟ್ಟಿತ್ತು. ಅಲ್ಲಿ ಅವರು ಜಿ 20 ಹಣಕಾಸು ಮಂತ್ರಿಗಳ ಸಭೆಯಲ್ಲಿ ಭಾಗವಹಿಸಿದ್ದರು. ಅದಾದ ಬಳಿಕ ಸಂಪೂರ್ಣ ಪಿಪಿಇ ಕಿಟ್ ಧರಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ ಚಲಾಯಿಸಿದ್ದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Thu, 29 December 22