Nirmala Sitharaman: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಏಮ್ಸ್ ಆಸ್ಪತ್ರೆಗೆ ದಾಖಲು
ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ನಿರ್ಮಲಾ ಸೀತಾರಾಮನ್ ಅವರನ್ನು ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು (ಸೋಮವಾರ) ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (AIIMS)ಗೆ ದಾಖಲಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. 63 ವರ್ಷದ ನಿರ್ಮಲಾ ಸೀತಾರಾಮನ್ ಅವರನ್ನು ಏಮ್ಸ್ ಆಸ್ಪತ್ರೆಯ ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ನಿರ್ಮಲಾ ಸೀತಾರಾಮನ್ ಅವರನ್ನು ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಇನ್ನೂ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸಾಮಾನ್ಯ ತಪಾಸಣೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆಯೇ? ಅಥವಾ ಅವರ ಆರೋಗ್ಯದಲ್ಲಿ ಏರುಪೇರಾಗಿದೆಯೇ? ಎಂಬ ಮಾಹಿತಿ ಕೂಡ ಇನ್ನೂ ದೊರಕಿಲ್ಲ.
ಇದನ್ನೂ ಓದಿ: Union Budget 2023: ಮುಂದಿನ 25 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್; ನಿರ್ಮಲಾ ಸೀತಾರಾಮನ್
ಈ ಬಗ್ಗೆ ಏಮ್ಸ್ ಆಸ್ಪತ್ರೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಯಾವುದೇ ಗಂಭೀರ ಸಮಸ್ಯೆಯಿಲ್ಲ. ನಿರ್ಮಲಾ ಸೀತಾರಾಮನ್ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ಇಡೀ ದೇಶವು ಕುತೂಹಲದಿಂದ ಕಾಯುತ್ತಿರುವ ಕೇಂದ್ರ ಬಜೆಟ್‌ಗೆ ಕೇವಲ ಒಂದು ತಿಂಗಳು ಬಾಕಿ ಇರುವಾಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ವರ್ಷದ ಜುಲೈನಲ್ಲಿ ನಿರ್ಮಲಾ ಸೀತಾರಾಮನ್ ಅವರಿಗೆ ಇಂಡೋನೇಷ್ಯಾದ ಬಾಲಿಯಿಂದ ಹಿಂದಿರುಗಿದ ನಂತರ ಕೋವಿಡ್ -19 ಗೆ ಪಾಸಿಟಿವ್ ದೃಢಪಟ್ಟಿತ್ತು. ಅಲ್ಲಿ ಅವರು ಜಿ 20 ಹಣಕಾಸು ಮಂತ್ರಿಗಳ ಸಭೆಯಲ್ಲಿ ಭಾಗವಹಿಸಿದ್ದರು. ಅದಾದ ಬಳಿಕ ಸಂಪೂರ್ಣ ಪಿಪಿಇ ಕಿಟ್ ಧರಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ ಚಲಾಯಿಸಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:13 pm, Mon, 26 December 22