ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ನನ್ನ ಬಳಿ ಅಷ್ಟು ಹಣವಿಲ್ಲ ಎಂದ ನಿರ್ಮಲಾ ಸೀತಾರಾಮನ್

|

Updated on: Mar 28, 2024 | 7:50 AM

ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಸ್ಪರ್ಧಿಸಲು ಅಗತ್ಯವಿರುವಷ್ಟು ಹಣ ನನ್ನ ಬಳಿ ಇಲ್ಲ ಹಾಗಾಗಿ ನಾನು ಸ್ಪಧಿಸುವುದಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅಗತ್ಯವಿರುವ ಹಣ ತನ್ನ ಬಳಿ ಇಲ್ಲ ಎಂದು ಮನವಿ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿಯ ಪ್ರಸ್ತಾಪವನ್ನು ನಿರಾಕರಿಸಿದ್ದೇನೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ನನ್ನ ಬಳಿ ಅಷ್ಟು ಹಣವಿಲ್ಲ ಎಂದ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
Image Credit source: Indian Express
Follow us on

ಲೋಕಸಭಾ ಚುನಾವಣೆ(Lok Sabha Election)ಯಲ್ಲಿ ಸ್ಪರ್ಧಿಸಲು ಅಗತ್ಯವಿರುವಷ್ಟು ಹಣ ನನ್ನ ಬಳಿ ಇಲ್ಲ ಹಾಗಾಗಿ ನಾನು ಸ್ಪಧಿಸುವುದಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಅಗತ್ಯವಿರುವ ಹಣ ತನ್ನ ಬಳಿ ಇಲ್ಲ ಎಂದು ಮನವಿ ಮಾಡಿ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿಯ ಪ್ರಸ್ತಾಪವನ್ನು ನಿರಾಕರಿಸಿದ್ದೇನೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಆಯ್ಕೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ನಾನು ವಾರಗಳವರೆಗೆ ಆಲೋಚನೆ ಮಾಡಿ ನನ್ನ ನಿರ್ಧಾರ ತಿಳಿಸಿದೆ, ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ, ನನ್ನ ವಾದವನ್ನು ಅಂಗೀಕರಿಸಿದ್ದಕ್ಕೆ ನಾನು ಆಭಾರಿಯಾಗಿದ್ದೇನೆ , ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನನ್ನ ಸಂಬಳ, ನನ್ನ ಗಳಿಕೆ ಮತ್ತು ನನ್ನ ಉಳಿತಾಯ ನನ್ನದೇ ಹೊರತು ಭಾರತದ ಕನ್ಸಾಲಿಡೇಟೆಡ್ ಫಂಡ್ ಅಲ್ಲ ಎಂದರು.
ಏಪ್ರಿಲ್ 19 ರಿಂದ ಪ್ರಾರಂಭವಾಗುವ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹಲವಾರು ಅಸ್ತಿತ್ವದಲ್ಲಿರುವ ರಾಜ್ಯಸಭಾ ಸದಸ್ಯರನ್ನು ಕಣಕ್ಕಿಳಿಸಿದೆ. ಇವರಲ್ಲಿ ಪಿಯೂಷ್ ಗೋಯಲ್, ಭೂಪೇಂದರ್ ಯಾದವ್, ರಾಜೀವ್ ಚಂದ್ರಶೇಖರ್, ಮನ್ಸುಖ್ ಮಾಂಡವಿಯಾ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಸೇರಿದ್ದಾರೆ.

ಮತ್ತಷ್ಟು ಓದಿ: ಇಂಡಿಯಾ ಒಕ್ಕೂಟದ ನಾಯಕರನ್ನು ಭೇಟಿಯಾದ ತೇಜಸ್ವಿ ಯಾದವ್, ಸೀಟು ಹಂಚಿಕೆ ಬಹುತೇಕ ಅಂತಿಮ

ಮಧ್ಯಪ್ರದೇಶದಲ್ಲಿ 40 ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ಮಧ್ಯಪ್ರದೇಶ ಲೋಕಸಭಾ ಚುನಾವಣೆ(Lok Sabha Election)ಯ ಪ್ರಚಾರಕ್ಕಾಗಿ ಭಾರತೀಯ ಜನತಾ ಪಕ್ಷವು 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಜೆಪಿ ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಶಿವಪ್ರಕಾಶ್, ಡಾ.ಮೋಹನ್ ಯಾದವ್, ವಿಡಿ ಶರ್ಮಾ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಅವರ ಹೆಸರುಗಳು ಸೇರಿವೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜಸ್ಥಾನ ಸಿಎಂ ಭಜನ್ಲಾಲ್ ಶರ್ಮಾ ಮತ್ತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರನ್ನು ಸಹ ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ. ಕಾಂಗ್ರೆಸ್ ನಿಂದ ಬಿಜೆಪಿ ಸೇರಿದ ಸುರೇಶ್ ಪಚೌರಿ ಅವರನ್ನೂ ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ.

ಮಾಜಿ ಸಿಎಂ ಸಂಸದೆ ಹಾಗೂ ಬಿಜೆಪಿಯ ಫೈರ್ ಬ್ರ್ಯಾಂಡ್ ನಾಯಕಿ ಉಮಾಭಾರತಿ ಹೆಸರಿಲ್ಲ. ಈ ಪಟ್ಟಿಯಲ್ಲಿ ಮಧ್ಯಪ್ರದೇಶದ ಹಲವು ನಾಯಕರೂ ಸ್ಥಾನ ಪಡೆದಿದ್ದಾರೆ. ಸಿಎಂ ಮೋಹನ್ ಯಾದವ್, ವಿಡಿ ಶರ್ಮಾ, ಉಪ ಮುಖ್ಯಮಂತ್ರಿ ರಾಜೇಂದ್ರ ಶುಕ್ಲಾ, ಉಪಮುಖ್ಯಮಂತ್ರಿ ಜಗದೀಶ್ ದೇವ್ರಾ, ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಭೂಪೇಂದ್ರ ಪಟೇಲ್ ಅವರ ಹೆಸರುಗಳು ಸೇರಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:50 am, Thu, 28 March 24