AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಜನಗಣತಿ ಬಳಿಕ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ: ನಿರ್ಮಲಾ ಸೀತಾರಾಮನ್

2024ರ ಜನಗಣತಿಯ ನಂತರ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ರಾಣಿ ಅಬ್ಬಕ್ಕ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿ ಮಾತನಾಡಿದರು. ಮಹಿಳಾ ಮೀಸಲಾತಿ ಮಸೂದೆಯು ಈಗ ವಾಸ್ತವವಾಗಿದೆ ಏಕೆಂದರೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರವೂ ಹೆಚ್ಚಿದೆ ಎಂಬುದನ್ನು ಸಾರಿ ಸಾರಿ ಹೇಳುತ್ತಿದ್ದಾರೆ.

2024ರ ಜನಗಣತಿ ಬಳಿಕ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ: ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್Image Credit source: ET Auto
ನಯನಾ ರಾಜೀವ್
|

Updated on: Dec 16, 2023 | 2:45 PM

Share

2024ರ ಜನಗಣತಿಯ ನಂತರ ಮಹಿಳಾ ಮೀಸಲಾತಿ ಮಸೂದೆ(Women’s Reservation Bill)ಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ತಿಳಿಸಿದ್ದಾರೆ. ರಾಣಿ ಅಬ್ಬಕ್ಕ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಮಾಡಿ ಮಾತನಾಡಿದರು. ಮಹಿಳಾ ಮೀಸಲಾತಿ ಮಸೂದೆಯು ಈಗ ವಾಸ್ತವವಾಗಿದೆ ಏಕೆಂದರೆ ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆಯರ ಪಾತ್ರವೂ ಹೆಚ್ಚಿದೆ ಎಂಬುದನ್ನು ಸಾರಿ ಸಾರಿ ಹೇಳುತ್ತಿದ್ದಾರೆ.

ಅಮರ್​ ಚಿತ್ರ ಕಥಾ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ, ಸ್ವಾತಂತ್ರ್ಯ ಹೋರಾಟದ ಬುಡಕಟ್ಟು ನಾಯಕರ ಮೂರು ಪುಸ್ತಕಗಳನ್ನು ಪ್ರಕಟಿಸಲು ಕೇಂದ್ರ ಸಂಸ್ಕೃತಿ ಸಚಿವಾಲಯ ನಿರ್ಧರಿಸಿದೆ.

ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ರಾಣಿ ಅಬ್ಬಕ್ಕ ಹೆಸರಿನಲ್ಲಿ ಸೈನಿಕ ಶಾಲೆ ತೆರೆಯಲಾಗುವುದು ಎಂದು ಭರವಸೆ ನೀಡಿದರು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯನ್ನು ಒದಗಿಸಲು ಪ್ರಯತ್ನಿಸುವ ಮಹಿಳಾ ಮೀಸಲಾತಿ ಮಸೂದೆಯನ್ನು ಈ ವರ್ಷದ ಸೆಪ್ಟೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿತು ಮತ್ತು ಸೆಪ್ಟೆಂಬರ್ 29 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅದಕ್ಕೆ ಒಪ್ಪಿಗೆ ನೀಡಿದರು.

ಮತ್ತಷ್ಟು ಓದಿ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ

ಪೋರ್ಚುಗೀಸರ ವಿರುದ್ಧ ಹೋರಾಡಿದ 16 ನೇ ಶತಮಾನದ ಉಳ್ಳಾಲದ ರಾಣಿ ರಾಣಿ ಅಬ್ಬಕ್ಕ ಅವರ ಧೈರ್ಯ ಮತ್ತು ವೀರತೆಯನ್ನು ಸೀತಾರಾಮನ್ ಶ್ಲಾಘಿಸಿದರು ಮತ್ತು ಸಾಮ್ರಾಜ್ಯಶಾಹಿ ಶಕ್ತಿಗಳ ವಿರುದ್ಧ ಹೋರಾಡಿದ ಹಲವಾರು ಹೋರಾಟಗಾರರ ಕೊಡುಗೆಯನ್ನು ದಾಖಲಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!