AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Elections 2022: ಮುಂದಿನ ವರ್ಷ ಉತ್ತರ ಪ್ರದೇಶ ಚುನಾವಣೆ; ಬಿಜೆಪಿ ಜತೆ ಮೈತ್ರಿ ದೃಢಪಡಿಸಿದ ನಿಷಾದ್ ಪಾರ್ಟಿ

Nishad Party: ಮೈತ್ರಿ ಸಂಬಂಧ ಹಾಗೂ ಸೀಟು ಹಂಚಿಕೆ ಬಗ್ಗೆ ಸಂಜಯ್​ ನಿಷಾದ್​ ಅವರು, ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

UP Elections 2022: ಮುಂದಿನ ವರ್ಷ ಉತ್ತರ ಪ್ರದೇಶ ಚುನಾವಣೆ; ಬಿಜೆಪಿ ಜತೆ ಮೈತ್ರಿ ದೃಢಪಡಿಸಿದ ನಿಷಾದ್ ಪಾರ್ಟಿ
ಸಂಜಯ್​ ನಿಷಾದ್​
TV9 Web
| Edited By: |

Updated on: Sep 07, 2021 | 6:13 PM

Share

ಲಖನೌ: ಉತ್ತರ ಪ್ರದೇಶದಲ್ಲಿ ಬರುವ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಾರ್ಟಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ನಿಷಾದ್​ ಪಕ್ಷ(Nishad Party) ಇಂದು ದೃಢಪಡಿಸಿದೆ. ನಿಷಾದ್ ಪಕ್ಷ ಒಟ್ಟು 70 ಕ್ಷೇತ್ರಗಳಿಂದ ಸ್ಪರ್ಧೆಗೆ ಇಳಿಯವ ಯೋಜನೆ ರೂಪಿಸಿಕೊಂಡಿದೆ. ಹಾಗಂತ ಇದಿನ್ನೂ ಅಂತಿಮಗೊಂಡಿಲ್ಲ. ಬಿಜೆಪಿ ಮತ್ತು ನಿಷಾದ್ ಪಾರ್ಟಿ ಮಧ್ಯೆ ಈ ವಿಚಾರವಾಗಿ ಇನ್ನೂ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ. 

ಮಾಧ್ಯಮಗಳೊಂದಿಗೆ ಮಾತನಾಡಿದ ನಿಷಾದ್​ ಪಾರ್ಟಿ ಮುಖ್ಯಸ್ಥ ಸಂಜಯ್​ ನಿಷಾದ್​, ನಮ್ಮ ಪಕ್ಷ 2022ರ ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತದೆ. ನಾವು ಖಂಡಿತ ಗೆಲ್ಲುತ್ತೇವೆ ಮತ್ತು ಬಿಜೆಪಿಯೊಟ್ಟಿಗೆ ಸರ್ಕಾರ ರಚನೆ ಮಾಡುತ್ತೇವೆ ಎಂದು ಆತ್ಮವಿಶ್ವಾಸದಲ್ಲಿ ಹೇಳಿದ್ದಾರೆ. ಮೈತ್ರಿ ಸಂಬಂಧ ಹಾಗೂ ಸೀಟು ಹಂಚಿಕೆ ಬಗ್ಗೆ ಸಂಜಯ್​ ನಿಷಾದ್​ ಅವರು, ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್​.ಸಂತೋಷ್​ ಜೊತೆ ಇಂದು ದೆಹಲಿಯಲ್ಲಿ ಮಾತುಕತೆ ನಡೆಸಿದ್ದಾರೆ ಎಂದೂ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಳೆದ ವಾರ ಮಾತನಾಡಿದ್ದ ಸಂಜಯ್ ನಿಷಾದ್​, ಉತ್ತರಪ್ರದೇಶದಲ್ಲಿ 160ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಿಷಾದ್​ ಸಮುದಾಯದ ಪ್ರಾಬಲ್ಯವಿದೆ. ಈ ನಿಟ್ಟಿನಲ್ಲಿ 70 ಕ್ಷೇತ್ರಗಳಲ್ಲಾದರೂ ನಾವು ಸ್ಪರ್ಧಿಸಬೇಕು ಎಂಬ ನಿರ್ಣಯ ಮಾಡಿದ್ದೇವೆ ಎಂದಿದ್ದರು. ಅಷ್ಟೇ ಅಲ್ಲ, ಬರುವ ವರ್ಷ ಚುನಾವಣೆಯಲ್ಲಿ ನಮ್ಮ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪಕ್ಷಕ್ಕೆ ಮಾತ್ರ ಗೆಲುವು ಸಿಗಲಿದೆ ಎಂದೂ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಪತಿಯ ಅಗಲುವಿಕೆಯಿಂದ ಚೇತರಿಸಿಕೊಂಡು ಮತ್ತೆ ಜಿಮ್ ಕಡೆ ಮುಖಮಾಡಿದ ಖ್ಯಾತ ನಟಿ; ಸ್ವಾಗತಿಸಿದ ಅಭಿಮಾನಿಗಳು

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ