ನಿತಾರಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಸುರೇಂದ್ರ ಕೊಲಿ ಖುಲಾಸೆ

ಈ ಹಿಂದೆ ಮರಣದಂಡನೆಗೆ ಗುರಿಯಾಗಿದ್ದ ನಿತಾರಿ ಹತ್ಯೆಯ ಪ್ರಮುಖ ಆರೋಪಿ ಸುರೇಂದ್ರ ಕೊಲಿಯನ್ನು ಅಲಹಾಬಾದ್ ಹೈಕೋರ್ಟ್​ ಸೋಮವಾರ ಖುಲಾಸೆಗೊಳಿಸಿದೆ.

ನಿತಾರಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಸುರೇಂದ್ರ ಕೊಲಿ ಖುಲಾಸೆ
ಸುರೇಂದ್ರ ಕೋಲಿImage Credit source: India Today
Follow us
ನಯನಾ ರಾಜೀವ್
|

Updated on:Oct 16, 2023 | 11:49 AM

ಈ ಹಿಂದೆ ಮರಣದಂಡನೆಗೆ ಗುರಿಯಾಗಿದ್ದ ನಿತಾರಿ ಹತ್ಯೆಯ ಪ್ರಮುಖ ಆರೋಪಿ ಸುರೇಂದ್ರ ಕೊಲಿ(Surendra Koli)ಯನ್ನು ಅಲಹಾಬಾದ್ ಹೈಕೋರ್ಟ್​ ಸೋಮವಾರ ಖುಲಾಸೆಗೊಳಿಸಿದೆ. 2012ರಲ್ಲಿ ನಿತಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೊಲಿಗೆ ಸಿಬಿಐನ ವಿಶೇಷ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಐದನೇ ಪ್ರಕರಣದಲ್ಲಿ ಕೊಲಿಯ ಆರೋಪದ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಮರಣದಂಡನ ಶಿಕ್ಷೆ ವಿಧಿಸಿತ್ತು.

2005ರಲ್ಲಿ ನೋಯ್ಡಾದ ಸೆಕ್ಟರ್ 31ರಲ್ಲಿ ಇರುವ ಕೊಲಿಯ ಉದ್ಯೋಗದಾತ ಮೊಂನೀದರ್ ಸಿಂಗ್ ಪಂದೇರ್ ಮನೆ ಹೊರಗಿಂದ ಬಾಲಕಿ ಕಾಣೆಯಾಗಿದ್ದಳು. ಈ ಸಂಬಂಧ ಆಕೆಯ ತಂದೆ ಸ್ಥಳೀಯ ಪೊಲೀಸರಲ್ಲಿ ದೂರು ನೀಡಿದ್ದರು. ಈ ಕೊಲೆ ಪ್ರಕರಣದಲ್ಲಿ ಪಂದೇರ್ ಆರೋಪಿಯಲ್ಲ. 2006ರಲ್ಲಿ ಮನೆಯ ಸಮೀಪದ ಚರಂಡಿಯಲ್ಲಿ ಬಾಲಕಿಯ ಅಸ್ತಿಪಂಜರಗಳು ದೊರೆತಿದ್ದವು.

ಹಲವು ಬಾಲಕಿಯರನ್ನು ಕೊಲೆ ಮಾಡಿರುವುದಾಗಿ ಕೊಲಿ ಒಪ್ಪಿಕೊಂಡು ಅವರ ದೇಹಗಳನ್ನು ತುಂಡು ತುಂಡಾಗಿ ಕತ್ತರಿಸಿ ಮನೆಯ ಹಿಂಬದಿಯ ಚರಂಡಿಗೆ ಎಸೆದಿರುವುದಾಗಿ ಹೇಳಿದ್ದ.

ಮತ್ತಷ್ಟು ಓದಿ: ಮಧ್ಯಪ್ರದೇಶ: ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ

ದಾಖಲಾದ ಒಟ್ಟು 19 ಪ್ರಕರಣಗಳಲ್ಲಿ ಸಿಬಿಐ 16 ಪ್ರಕರಣದ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಸಾಕ್ಷ್ಯಾಧಾರಗಳ ಕೊರತೆಯಿಂದ ಮೂರು ಪ್ರಕರಣಗಳು ರದ್ದುಗೊಂಡಿದ್ದವು.

ಅತ್ಯಾಚಾರ, ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ 2009 ಫೆಬ್ರವರಿ ಹಾಗೂ 2009 ಸೆಪ್ಟೆಂಬರ್​, 2010 ಮೇ ಹಾಗೂ 2010 ಡಿಸೆಂಬರ್​ನಲ್ಲಿ ಕೊಲಿಗೆ ಗಲ್ಲು ಮರಣದಂಡನೆ ವಿಧಿಸಲಾಗಿತ್ತು. ಕೊಲಿ ವಿರುದ್ಧ ಒಟ್ಟು 16 ಪ್ರಕರಣಗಳು ದಾಖಲಾಗಿದ್ದು, ಹನ್ನೆರಡರಲ್ಲಿ ಆತನಿಗೆ ಮರಣದಂಡನೆ ವಿಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:40 am, Mon, 16 October 23

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ