Nitin Gadkari: ಸರ್ಕಾರ ಸರಿಯಾದ ಸಮಯದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಿಲ್ಲ; ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ

ಸಮಯವು ಅತಿ ದೊಡ್ಡ ಬಂಡವಾಳವಾಗಿದೆ. ಸರ್ಕಾರವು ಸಮಯಕ್ಕೆ ಸರಿಯಾಗಿ ನಿರ್ಧಾರಗಳನ್ನು ತೆಗೆದುಕೊಳ್ಳದಿರುವುದು ದೊಡ್ಡ ಸಮಸ್ಯೆಯಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

Nitin Gadkari: ಸರ್ಕಾರ ಸರಿಯಾದ ಸಮಯದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಿಲ್ಲ; ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ
ನಿತಿನ್ ಗಡ್ಕರಿ Image Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 24, 2022 | 11:10 AM

ನವದೆಹಲಿ: ಮಾತಿನ ಭರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಆಗಾಗ ತಮ್ಮದೇ ಸರ್ಕಾರದ ಬಗ್ಗೆಯೂ ಹೇಳಿಕೆಗಳನ್ನು ನೀಡುತ್ತಾರೆ. ಇದೀಗ ನಿತಿನ್ ಗಡ್ಕರಿ ಬಿಜೆಪಿಯ ಉನ್ನತ ನಿರ್ಧಾರ ತೆಗೆದುಕೊಳ್ಳುವ ಮಂಡಳಿಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದಾರೆ. ನಿತಿನ್ ಗಡ್ಕರಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಮೊದಲಿದ್ದ ಸಂಬಂಧ ಈಗಿಲ್ಲ ಎನ್ನಲಾಗುತ್ತಿದೆ. ತಮ್ಮ ಸಂದರ್ಶನವೊಂದರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ, ತಮ್ಮ ಸರ್ಕಾರವು ಸಕಾಲದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ. ಇದೇ ಒಂದು ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.

ನಾವು ಉತ್ತಮ ತಂತ್ರಜ್ಞಾನ, ಆವಿಷ್ಕಾರಗಳು, ಸಂಶೋಧನೆಯಲ್ಲಿ ವಿಶ್ವ ಮಟ್ಟದಲ್ಲಿ ಮುನ್ನುಗ್ಗಬೇಕು. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದೆ ವೆಚ್ಚವನ್ನು ಕಡಿಮೆ ಮಾಡುವ ಪರ್ಯಾಯ ಸಾಮಗ್ರಿಗಳನ್ನು ನಾವು ಹೊಂದಬೇಕು. ಸಮಯವು ಅತಿ ದೊಡ್ಡ ಬಂಡವಾಳವಾಗಿದೆ. ಸರ್ಕಾರವು ಸಮಯಕ್ಕೆ ಸರಿಯಾಗಿ ನಿರ್ಧಾರಗಳನ್ನು ತೆಗೆದುಕೊಳ್ಳದಿರುವುದು ದೊಡ್ಡ ಸಮಸ್ಯೆಯಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ಮುಂಬೈನ ಅಸೋಸಿಯೇಷನ್ ​​ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಆಯೋಜಿಸಿದ್ದ NATCON 2022 ಅನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ತಂತ್ರಜ್ಞಾನ ಅಥವಾ ಸಂಪನ್ಮೂಲಗಳಿಗಿಂತ ಸಮಯವು ಹೆಚ್ಚು ಮುಖ್ಯವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Nitin Gadkari: 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಬಳಕೆಗೆ ಇರುವುದಿಲ್ಲ ಎಂದ ನಿತಿನ್ ಗಡ್ಕರಿ

ಕಳೆದ ವಾರ, 2024ರ ರಾಷ್ಟ್ರೀಯ ಚುನಾವಣೆ ಸೇರಿದಂತೆ ಮುಂಬರುವ ಚುನಾವಣೆಗಳ ನೇತೃತ್ವದ ವಿಚಾರದಲ್ಲಿ ನಿತಿನ್ ಗಡ್ಕರಿ ಅವರನ್ನು ಬಿಜೆಪಿ ಸಂಸದೀಯ ಮಂಡಳಿಯಿಂದ ಕೈಬಿಡಲಾಗಿತ್ತು. ಬಿಜೆಪಿಯ ಮಾಜಿ ರಾಷ್ಟ್ರಾಧ್ಯಕ್ಷರಾಗಿರುವ ನಿತಿನ್ ಗಡ್ಕರಿ ಅವರನ್ನು ಸಂಸದೀಯ ಮಂಡಳಿಯಿಂದ ಕೈಬಿಟ್ಟಿದ್ದು ಅಚ್ಚರಿ ಉಂಟುಮಾಡಿತ್ತು. ನಾಗ್ಪುರದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ನಿತಿನ್ ಗಡ್ಕರಿ ಇಂದಿನ ರಾಜಕೀಯವು ಪವರ್‌ ಪ್ಲೇಗೆ ಸಂಬಂಧಿಸಿದೆ. ಕೆಲವೊಮ್ಮೆ ನಾನು ರಾಜಕೀಯವನ್ನು ತೊರೆಯಲು ಯೋಚಿಸಿದ್ದೆ ಎಂದು ಹೇಳಿದ್ದರು.

ತಮ್ಮ ಸಂದರ್ಶನದಲ್ಲಿ ನಿತಿನ್ ಗಡ್ಕರಿ ಮುಂಬೈನಲ್ಲಿ 1980ರ ಬಿಜೆಪಿಯ ಸಮಾವೇಶದಲ್ಲಿ ಅಟಲ್ ಬಿಹಾರಿ ವಾಜಪೇಯಿ ಮಾಡಿದ್ದ ಭಾಷಣವನ್ನು ಉಲ್ಲೇಖಿಸಿದ್ದರು. ಅಟಲ್ ಜಿ ಅವರು ‘ಅಂಧೇರಾ ಛಟೇಗಾ, ಸೂರಜ್ ನಿಕ್ಲೇಗಾ, ಕಮಲ ಖಿಲೇಗಾ’ (ಕತ್ತಲು ಮಾಯವಾಗುತ್ತದೆ, ಸೂರ್ಯ ಹೊರಬರುತ್ತಾನೆ ಮತ್ತು ಕಮಲ ಅರಳುತ್ತದೆ) ಎಂದು ಹೇಳಿದ್ದರು ಎಂದು ಗಡ್ಕರಿ ಪ್ರಸ್ತಾಪಿಸಿದ್ದಾರೆ.

ಇದನ್ನೂ ಓದಿ: ಭಾರತದ ಮೊತ್ತ ಮೊದಲ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್ ಅನಾವರಣಗೊಳಿಸಿದ ನಿತಿನ್ ಗಡ್ಕರಿ

ಆ ದಿನ ಅಟಲ್ ಬಿಹಾರಿ ವಾಜಪೇಯಿ ಭಾಷಣದ ವೇಳೆ ನಾನು ಅಲ್ಲಿದ್ದೆ. ಆ ಭಾಷಣ ಕೇಳಿದವರೆಲ್ಲರೂ ಇಂತಹ ದಿನ ಬರುತ್ತದೆ ಎಂದು ಆಗಲೇ ನಂಬಿದ್ದರು. ಅಟಲ್ ಜಿ, ಅಡ್ವಾಣಿ ಜಿ, ದೀನದಯಾಳ್ ಉಪಾಧ್ಯಾಯ ಮತ್ತು ಅನೇಕ ಕಾರ್ಯಕರ್ತರು ಬಿಜೆಪಿ ಅಧಿಕಾರಕ್ಕೆ ಬರಲು ಅಗತ್ಯವಿರುವ ಕೆಲಸವನ್ನು ಮಾಡಿದ್ದಾರೆ. ಇಂದು ನಾವು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ಮತ್ತು ಅನೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದೇವೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ನಮ್ಮ ಮೊದಲ ಆದ್ಯತೆ ಜಲಮಾರ್ಗಗಳು. ಎರಡನೆಯದು ರೈಲ್ವೆ ಮಾರ್ಗ. ಮೂರನೇ ಆದ್ಯತೆ ರಸ್ತೆ ಮಾರ್ಗ ಮತ್ತು ನಾಲ್ಕನೇ ಆದ್ಯತೆ ವಾಯುಯಾನವಾಗಿದೆ ಎಂದು ಹೇಳಿರುವ ಸಚಿವ ನಿತಿನ್ ಗಡ್ಕರಿ, ಎಲ್‌ಎನ್‌ಜಿ, ಬಯೋ-ಎಥೆನಾಲ್ ಮತ್ತು ಗ್ರೀನ್ ಹೈಡ್ರೋಜನ್‌ನಂತಹ ಪರ್ಯಾಯ ಇಂಧನಗಳ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. “ಎಥೆನಾಲ್, ಮೆಥನಾಲ್, ಬಯೋಡೀಸೆಲ್, ಬಯೋ-ಎಲ್‌ಎನ್‌ಜಿ, ಬಯೋ-ಸಿಎನ್‌ಜಿ, ಎಲೆಕ್ಟ್ರಿಕ್ ಮತ್ತು ಗ್ರೀನ್ ಹೈಡ್ರೋಜನ್ ಪರ್ಯಾಯ ಇಂಧನಗಳಾಗಿವೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ