AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitin Gadkari: ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದೇನು?

ನಾನು ಬಾವಿಗೆ ಹಾರಿ ಸಾಯುತ್ತೇನೆಯೇ ಹೊರತು ಕಾಂಗ್ರೆಸ್‌ಗೆ ಸೇರುವುದಿಲ್ಲ. ಏಕೆಂದರೆ ನನಗೆ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಇಷ್ಟವಿಲ್ಲ ಎಂದು ಹೇಳಿದ್ದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

Nitin Gadkari: ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದೇನು?
ನಿತಿನ್ ಗಡ್ಕರಿ
ಸುಷ್ಮಾ ಚಕ್ರೆ
|

Updated on:Aug 29, 2022 | 1:18 PM

Share

ನವದೆಹಲಿ: ತಾವು ವಿದ್ಯಾರ್ಥಿ ನಾಯಕರಾಗಿದ್ದಾಗ ಕಾಂಗ್ರೆಸ್ ಮುಖಂಡ ಶ್ರೀಕಾಂತ್ ಜಿಚ್ಕರ್ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್ ಸೇರುವಂತೆ ಕೇಳಿಕೊಂಡಿದ್ದರು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹಳೆಯ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. ಆಗ ಶ್ರೀಕಾಂತ್‌ಗೆ, ನಾನು ಬಾವಿಗೆ ಹಾರಿ ಸಾಯುತ್ತೇನೆಯೇ ಹೊರತು ಕಾಂಗ್ರೆಸ್‌ಗೆ ಸೇರುವುದಿಲ್ಲ. ಏಕೆಂದರೆ ನನಗೆ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಇಷ್ಟವಿಲ್ಲ ಎಂದು ಹೇಳಿದ್ದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಉದ್ಯಮಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ನಿತಿನ್ ಗಡ್ಕರಿ, ವ್ಯಾಪಾರ, ಸಾಮಾಜಿಕ ಕೆಲಸ ಅಥವಾ ರಾಜಕೀಯದಲ್ಲಿರುವ ಯಾರಿಗಾದರೂ ಮಾನವನ ಸಂಬಂಧವೇ ದೊಡ್ಡ ಶಕ್ತಿಯಾಗಿದೆ. ಆದ್ದರಿಂದ, ಒಳ್ಳೆಯ ದಿನಗಳು ಅಥವಾ ಕೆಟ್ಟ ದಿನಗಳಲ್ಲಿ ಒಮ್ಮೆ ನೀವು ಯಾರದ್ದಾದರೂ ಕೈಯನ್ನು ಹಿಡಿದರೆ ಆ ಕೈಯನ್ನು ಯಾವಾಗಲೂ ಹಿಡಿದುಕೊಳ್ಳಿ ಎಂದು ಹೇಳಿದ್ದಾರೆ.

ರಿಚರ್ಡ್ ನಿಕ್ಸನ್ ಅವರನ್ನೂ ಉಲ್ಲೇಖಿಸಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ, ಒಬ್ಬ ವ್ಯಕ್ತಿಯು ಸೋತಾಗ ಅವನ ಕತೆ ಅಲ್ಲಿಗೇ ಮುಗಿಯುವುದಿಲ್ಲ. ಆದರೆ, ಆತ ಸೋತ ಮೇಲೆ ಇನ್ನಾಗದು ಎಂದು ಕೈಚೆಲ್ಲಿದಾಗ ಆತನ ಕತೆ ಅಂತ್ಯ ಕಾಣುತ್ತದೆ ಎಂಬ ಅಮೆರಿಕಾದ ಮಾಜಿ ಅಧ್ಯಕ್ಷ ರಿಚರ್ಡ್ ನಿಕ್ಸನ್ ಅವರ ಆತ್ಮಚರಿತ್ರೆಯ ವಾಕ್ಯವನ್ನು ಯುವ ಉದ್ಯಮಿಗಳು ನೆನಪಿಟ್ಟುಕೊಳ್ಳಬೇಕು ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ಇದನ್ನೂ ಓದಿ: Nitin Gadkari: ಸರ್ಕಾರ ಸರಿಯಾದ ಸಮಯದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತಿಲ್ಲ; ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ

ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಬಿಜೆಪಿ ಅಧಿಕಾರಕ್ಕೆ ಬರಲು ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ ಅಡ್ವಾಣಿ ಮತ್ತು ದೀನದಯಾಳ್ ಉಪಾಧ್ಯಾಯ ಮಾಡಿದ ಕೆಲಸಗಳು ಕಾರಣ ಎಂದು ಹೇಳಿದ್ದರು. ಮುಂಬೈನಲ್ಲಿ 1980ರ ಬಿಜೆಪಿಯ ಸಮಾವೇಶದಲ್ಲಿ ವಾಜಪೇಯಿ ಅವರ ಭಾಷಣವನ್ನು ನಾನು ಕೇಳಿದ್ದೆ. ಮುಂಬೈನಲ್ಲಿ 1980ರ ಬಿಜೆಪಿಯ ಸಮಾವೇಶದಲ್ಲಿ ಅಟಲ್ ಬಿಹಾರಿ ವಾಜಪೇಯಿ ಮಾಡಿದ್ದ ಭಾಷಣವನ್ನು ಉಲ್ಲೇಖಿಸಿದ್ದರು. ಅಟಲ್ ಜಿ ಅವರು ‘ಅಂಧೇರಾ ಛಟೇಗಾ, ಸೂರಜ್ ನಿಕ್ಲೇಗಾ, ಕಮಲ ಖಿಲೇಗಾ’ (ಕತ್ತಲು ಮಾಯವಾಗುತ್ತದೆ, ಸೂರ್ಯ ಹೊರಬರುತ್ತಾನೆ ಮತ್ತು ಕಮಲ ಅರಳುತ್ತದೆ) ಎಂದು ಹೇಳಿದ್ದರು ಎಂದು ಗಡ್ಕರಿ ಹೇಳಿದ್ದರು.

ಆ ದಿನ ಅಟಲ್ ಬಿಹಾರಿ ವಾಜಪೇಯಿ ಭಾಷಣದ ವೇಳೆ ನಾನು ಅಲ್ಲಿದ್ದೆ. ಆ ಭಾಷಣ ಕೇಳಿದವರೆಲ್ಲರೂ ಇಂತಹ ದಿನ ಬರುತ್ತದೆ ಎಂದು ಆಗಲೇ ನಂಬಿದ್ದರು. ಅಟಲ್ ಜಿ, ಅಡ್ವಾಣಿ ಜಿ, ದೀನದಯಾಳ್ ಉಪಾಧ್ಯಾಯ ಮತ್ತು ಅನೇಕ ಕಾರ್ಯಕರ್ತರು ಬಿಜೆಪಿ ಅಧಿಕಾರಕ್ಕೆ ಬರಲು ಅಗತ್ಯವಿರುವ ಕೆಲಸವನ್ನು ಮಾಡಿದ್ದಾರೆ. ಇಂದು ನಾವು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ಮತ್ತು ಅನೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದೇವೆ ಎಂದು ನಿತಿನ್ ಗಡ್ಕರಿ ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:16 pm, Mon, 29 August 22

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ