AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಯೊಬ್ಬರ ಅಭಿಪ್ರಾಯ ಮುಖ್ಯವಲ್ಲ ಎಂದಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್​​ಗೆ ಪ್ರಶಾಂತ್ ಕಿಶೋರ್​​ ಟ್ವೀಟ್​​ ತಿರುಗೇಟು

ಸತ್ಯವೆಂದರೆ 30 ವರ್ಷಗಳ ಲಾಲು-ನಿತೀಶ್ ಆಳ್ವಿಕೆಯ ನಂತರವೂ, ಬಿಹಾರ ಇಂದು ದೇಶದ ಅತ್ಯಂತ ಬಡ ಮತ್ತು ಹಿಂದುಳಿದ ರಾಜ್ಯವಾಗಿದೆ. ಬಿಹಾರವನ್ನು ಬದಲಾಯಿಸಲು ಹೊಸ ಚಿಂತನೆ...

ಪ್ರತಿಯೊಬ್ಬರ ಅಭಿಪ್ರಾಯ ಮುಖ್ಯವಲ್ಲ ಎಂದಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್​​ಗೆ ಪ್ರಶಾಂತ್ ಕಿಶೋರ್​​ ಟ್ವೀಟ್​​ ತಿರುಗೇಟು
ಪ್ರಶಾಂತ್ ಕಿಶೋರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: May 06, 2022 | 9:09 PM

Share

ನಿತೀಶ್ ಕುಮಾರ್ (Nitish Kumar)  ಮತ್ತು ಲಾಲು ಯಾದವ್ (Lalu Yadav) ಅವರ 30 ವರ್ಷಗಳ ಆಡಳಿತದ ನಂತರವೂ ಬಿಹಾರದ ಬಗೆಗಿನ ವಾಸ್ತವ ಏನೆಂದರೆ ರಾಜ್ಯವು ದೇಶದಲ್ಲೇ ಅತ್ಯಂತ ಬಡ ಮತ್ತು ಹಿಂದುಳಿದ ರಾಜ್ಯವಾಗಿ ಉಳಿದಿದೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ (Prashant Kishor) ಶುಕ್ರವಾರ ಹೇಳಿದ್ದಾರೆ. ಶುಕ್ರವಾರ ಟ್ವೀಟ್ ಮಾಡಿದ ಪ್ರಶಾಂತ್ ಕಿಶೋರ್, “ನಿತೀಶ್ ಜಿ ಸರಿಯಾಗಿಯೇ ಹೇಳಿದ್ದಾರೆ. ಪ್ರಾಮುಖ್ಯತೆ ಸತ್ಯವನ್ನಾಧರಿಸಿರುತ್ತದೆ. ಸತ್ಯವೆಂದರೆ 30 ವರ್ಷಗಳ ಲಾಲು-ನಿತೀಶ್ ಆಳ್ವಿಕೆಯ ನಂತರವೂ, ಬಿಹಾರ ಇಂದು ದೇಶದ ಅತ್ಯಂತ ಬಡ ಮತ್ತು ಹಿಂದುಳಿದ ರಾಜ್ಯವಾಗಿದೆ. ಬಿಹಾರವನ್ನು ಬದಲಾಯಿಸಲು ಹೊಸ ಚಿಂತನೆ ಮತ್ತು ಪ್ರಯತ್ನದ ಅಗತ್ಯವಿದೆ ಮತ್ತು ಅದು ಅಲ್ಲಿನ ಜನರ ಸಾಮೂಹಿಕ ಪ್ರಯತ್ನದಿಂದ ಮಾತ್ರ ಸಾಧ್ಯ ಎಂದಿದ್ದಾರೆ. ಕಿಶೋರ್ ಅವರ ಹೇಳಿಕೆಯು ಅವರ ಮತ್ತು ಬಿಹಾರ ಮುಖ್ಯಮಂತ್ರಿಯ ನಡುವಿನ ಇತ್ತೀಚಿನ ವಾಕ್ ಸಮರಕ್ಕೆ ಪ್ರತಿಕ್ರಿಯೆಯಾಗಿದೆ. ಪ್ರತಿಯೊಬ್ಬರ ಅಭಿಪ್ರಾಯ ಮುಖ್ಯವಲ್ಲ ಆದರೆ ಸತ್ಯ ಮುಖ್ಯ ಎಂದಿದ್ದರು ನಿತೀಶ್ ಕುಮಾರ್.  ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್  ಇತ್ತೀಚೆಗೆ ಬಿಹಾರದ ರಾಜಕೀಯ ವಲಯಗಳಲ್ಲಿ ಸಂಚಲನ ಸೃಷ್ಟಿಸಿದ್ದು ಕಾಂಗ್ರೆಸ್ ಸೇರುವ ಪ್ರಸ್ತಾಪವನ್ನು ತಿರಸ್ಕರಿಸಿದರು. ಪೂರ್ವ ರಾಜ್ಯದಲ್ಲಿ ಬದಲಾವಣೆ ತರಲು ಹೊಸ ಚಿಂತನೆ ಮತ್ತು ಪ್ರಯತ್ನದ ಅಗತ್ಯವಿದೆ ಎಂದು  ಅವರು ಹೇಳಿದ್ದರು.

ಸಮಸ್ಯೆಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ನಿಜವಾದ ಗುರುಗಳು ಜನರು” ಎಂದ ಪ್ರಶಾಂತ್ ಕಿಶೋರ್, ‘ಜನ್ ಸುರಾಜ್ -ಜನರಿಂದ ಉತ್ತಮ ಆಡಳಿತ’ ಕ್ಕೆ ಹೋಗಲು ಇದು ಸೂಕ್ತ ಸಮಯ ಎಂದಿದ್ದರು. ಈ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಿಹಾರ ಮುಖ್ಯಮಂತ್ರಿ, ರಾಜ್ಯದಲ್ಲಿ ಒಳ್ಳೆಯ ಕೆಲಸ ನಡೆದಿದೆಯೇ ಎಂಬುದನ್ನು ಎಲ್ಲರೂ ನೋಡಬೇಕು ಮತ್ತು ಸತ್ಯ ಮಾತ್ರ ಮುಖ್ಯ ಎಂದು ಹೇಳಿದ್ದಾರೆ.

ಒಂದು ದಿನದ ಹಿಂದೆ ಕಿಶೋರ್ ತನ್ನ ತವರು ರಾಜ್ಯ ಬಿಹಾರವನ್ನು ಪರಿವರ್ತಿಸುವ ಗುರಿಯನ್ನು ಹೊಂದಿರುವ ‘ಜನ್ ಸುರಾಜ್’ ಎಂಬ ಹೆಸರಿನ ಸಮಾನ ಮನಸ್ಕ ಜನರ ವೇದಿಕೆಯನ್ನು ರಚಿಸಲು ಉದ್ದೇಶಿಸಿರುವುದಾಗಿ ಹೇಳಿದರು. ಅದೇ ವೇಳೆ ಅವರು ಹೊಸ ಪಕ್ಷವನ್ನು ರಚಿಸುವ ಊಹಾಪೋಹಗಳನ್ನು ತಳ್ಳಿಹಾಕಿದರು. ಆದರೆಲ್ಲಿ ಜನ್ ಸುರಾಜ್ ವೇದಿಕೆ ರಾಜಕೀಯವಾಗಿ ರೂಪಾಂತರಗೊಳ್ಳುವ ಸಾಧ್ಯತೆಯನ್ನು ಸಂಪೂರ್ಣವಾಗಿ ತಳ್ಳಿಹಾಕಿಲ್ಲ.

ಅಕ್ಟೋಬರ್ 2 ಗಾಂಧಿ ಜಯಂತಿಯಂದು ಚಂಪಾರಣ್‌ನಲ್ಲಿರುವ ಗಾಂಧಿ ಆಶ್ರಮದಿಂದ 3,000 ಕಿಮೀ ‘ಪಾದಯಾತ್ರೆ’ (ಮೆರವಣಿಗೆ) ಪ್ರಾರಂಭಿಸುವ ಮೊದಲು ಬಿಹಾರದ ಬಗ್ಗೆ ತಮ್ಮ ದೃಷ್ಟಿಕೋನವನ್ನು ಹಂಚಿಕೊಂಡ ಅವರು “ಸುಮಾರು 18,000 ಜನರೊಂದಿಗೆ” ಸಂಪರ್ಕದಲ್ಲಿದ್ದೇನೆ ಅವರನ್ನು “ವೈಯಕ್ತಿಕವಾಗಿ ಭೇಟಿಯಾಗಲು ಪ್ರಯತ್ನಿಸುತ್ತೇನೆ” ಎಂದು ಹೇಳಿದ್ದಾರೆ. ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು