ವಿಪಕ್ಷ ಜೋಡೋ ಮಿಷನ್: ಮುಂಬೈನಲ್ಲಿ ಉದ್ಧವ್ ಠಾಕ್ರೆಯನ್ನು ಭೇಟಿ ಮಾಡಿದ ನಿತೀಶ್ ಕುಮಾರ್
ಗುರುವಾರ ಮುಂಬೈಯಲ್ಲಿ ಉದ್ಧವ್ ಠಾಕ್ರೆಯವರನ್ನು ಭೇಟಿ ಮಾಡಿದ ನಿತೀಶ್, ಕೇಂದ್ರದಲ್ಲಿ ಇರುವವರು ದೇಶಕ್ಕಾಗಿ ಕೆಲಸ ಮಾಡುತ್ತಿಲ್ಲ. ದೇಶದ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಕೆಲಸ ಮಾಡಲು ಒಗ್ಗೂಡಬೇಕಿದೆ ಎಂದು ಹೇಳಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ಇಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (NCP) ಅಧ್ಯಕ್ಷ ಶರದ್ ಪವಾರ್ ಮತ್ತು ಶಿವಸೇನಾ (UBT) ನಾಯಕ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಲಿದ್ದಾರೆ. ನಿತೀಶ್ ಕುಮಾರ್ ಜತೆ ಅವರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಲಾಲನ್ ಸಿಂಗ್ ಮತ್ತು ಪಕ್ಷದ ಮತ್ತೋರ್ವ ನಾಯಕ ಸಂಜಯ್ ಝಾ ಕೂಡಾ ಇರಲಿದ್ದಾರೆ. ಗುರುವಾರ ಮುಂಬೈಯಲ್ಲಿ ಉದ್ಧವ್ ಠಾಕ್ರೆಯವರನ್ನು ಭೇಟಿ ಮಾಡಿದ ನಿತೀಶ್, ಕೇಂದ್ರದಲ್ಲಿ ಇರುವವರು ದೇಶಕ್ಕಾಗಿ ಕೆಲಸ ಮಾಡುತ್ತಿಲ್ಲ. ದೇಶದ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಕೆಲಸ ಮಾಡಲು ಒಗ್ಗೂಡಬೇಕಿದೆ ಎಂದು ಹೇಳಿದ್ದಾರೆ.
ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ವಿಪಕ್ಷ ಜೋಡೋ ಮಿಷನ್
ಬುಧವಾರ ನಿತೀಶ್ ಕುಮಾರ್ ಅವರು ಜಾರ್ಖಂಡ್ ಸಹವರ್ತಿ ಹೇಮಂತ್ ಸೊರೆನ್ ಅವರನ್ನು ರಾಂಚಿಯಲ್ಲಿ ಭೇಟಿ ಮಾಡಿದ್ದು, ಅವರ ಮಾತುಕತೆಗಳು 2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ವಿಪಕ್ಷಗಳ ಒಕ್ಕೂಟ ರಚಿಸುವ ಬಗ್ಗೆ ಕೇಂದ್ರೀಕೃತವಾಗಿದೆ ಎಂದು ಹೇಳಿದರು. ಸೋರೆನ್ ಅವರ ನಿವಾಸದಲ್ಲಿ ಜೆಡಿಯು ನಾಯಕ ಮತ್ತು ಅವರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಸುಮಾರು ಒಂದು ಗಂಟೆ ಮಾತುಕತೆ ನಡೆಸಿದ್ದಾರೆ.
ನಮ್ಮ ಮಾತುಕತೆಗಳು ವಿಪಕ್ಷಗಳ ಒಗ್ಗಟ್ಟಿನ ಕೂಟ ರಚಿಸುವ ಸುತ್ತ ಕೇಂದ್ರೀಕೃತವಾಗಿವೆ ಮತ್ತು ಚರ್ಚೆಯ ಫಲಿತಾಂಶವು 2024 ರ ಲೋಕಸಭೆ ಚುನಾವಣೆಯಲ್ಲಿ ಗೋಚರಿಸುತ್ತದೆ. ನಾವು ದೇಶದ ರಾಜಕೀಯದ ಬಗ್ಗೆ ಮಾತನಾಡಿದ್ದೇವೆ ಮತ್ತು ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ಕುಮಾರ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
#WATCH | “Those who are at the Centre are not working for the country…All political parties in the country need to unite to work together,” says Bihar CM & JD(U) leader Nitish Kumar during his meeting with Uddhav Thackeray in Mumbai. pic.twitter.com/BDXrUQajfe
— ANI (@ANI) May 11, 2023
“ಇತಿಹಾಸದಲ್ಲಿ ಬದಲಾವಣೆ ಮಾಡುವ ಕೇಂದ್ರದ ಪ್ರಯತ್ನಗಳನ್ನು ನಾವು ವಿರೋಧಿಸುತ್ತೇವೆ. ನಾವು ಹಿಂದೂ-ಮುಸ್ಲಿಂ ಐಕ್ಯತೆಯನ್ನು ಪುನಃಸ್ಥಾಪಿಸುತ್ತೇವೆ” ಎಂದು ಜೆಡಿಯು ನಾಯಕ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ದೆಹಲಿ ವಿಶ್ವವಿದ್ಯಾಲಯದ ಹಾಸ್ಟೆಲ್ಗೆ ರಾಹುಲ್ ಗಾಂಧಿ ದಿಢೀರ್ ಭೇಟಿ, ಇದು ಘನತೆಗೆ ಮೀರಿದ್ದು ಎಂದು ವಿವಿ ನೋಟಿಸ್
ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಗುರುವಾರ ಸಂಜೆ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಲಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ