AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ; ಹೊಸ ಸರ್ಕಾರಕ್ಕೆ ಪೂರ್ಣ ಬೆಂಬಲದ ಪ್ರತಿಜ್ಞೆ

ಪಾಟ್ನಾದಲ್ಲಿ ಇಂದು ನಡೆದ ಕೊನೆಯ ಸಚಿವ ಸಂಪುಟ ಸಭೆಯ ನಂತರ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದರು. ನಿತೀಶ್ ಕುಮಾರ್ ರಾಜೀನಾಮೆಯಿಂದಾಗಿ ಬಿಹಾರದಲ್ಲಿ ನಿತೀಶ್ ಕುಮಾರ್ ಯುಗಾಂತ್ಯವಾಗಿದೆ. ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದ ಅವರು ಅಧಿಕೃತವಾಗಿ ಕೇಂದ್ರ ರಾಜಕಾರಣದತ್ತ ಕಾಲಿಟ್ಟಿದ್ದಾರೆ. ಇಂದು ಕೊನೆಯ ಸಚಿವ ಸಂಪುಟ ಸಭೆಯ ವೇಳೆ ನಿತೀಶ್ ಕುಮಾರ್ ಭಾವುಕರಾದರು. ನಾಳೆ ಬಿಹಾರದಲ್ಲಿ ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸುವ ಸಾಧ್ಯತೆಯಿದೆ.

ಬಿಹಾರದ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ; ಹೊಸ ಸರ್ಕಾರಕ್ಕೆ ಪೂರ್ಣ ಬೆಂಬಲದ ಪ್ರತಿಜ್ಞೆ
Nitish Kumar
ಸುಷ್ಮಾ ಚಕ್ರೆ
|

Updated on:Apr 14, 2026 | 4:05 PM

Share

ಪಾಟ್ನಾ, ಏಪ್ರಿಲ್ 14: ಬಿಹಾರದ ರಾಜಕೀಯದಲ್ಲಿ ನಿತೀಶ್ ಕುಮಾರ್ (Nitish Kumar) ಯುಗ ಇಂದು ಅಂತ್ಯಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಪಾಟ್ನಾದಲ್ಲಿ ಇಂದು ತಮ್ಮ ಅಂತಿಮ ಸಚಿವ ಸಂಪುಟ ಸಭೆ ನಡೆಸಿದರು. ಈ ವೇಳೆ ಅವರು ತುಂಬಾ ಭಾವುಕರಾದರು. ಸಂಪುಟ ಸಭೆಯ ನಂತರ ನಿತೀಶ್ ಕುಮಾರ್ ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಾಳೆ ಬಿಹಾರದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಹೊಸ ಮುಖ್ಯಮಂತ್ರಿಯ ಜೊತೆಗೆ, ಇತರ ಇಬ್ಬರು ಉಪಮುಖ್ಯಮಂತ್ರಿಗಳು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಂತಿಮ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾವುಕರಾದರು. ಅವರು ಹೊಸ ಸರ್ಕಾರಕ್ಕೆ ತಮ್ಮ ಶುಭಾಶಯಗಳನ್ನು ಸಹ ಸಲ್ಲಿಸಿದರು. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಬಿಹಾರದಲ್ಲಿ ಹೊಸ ಸರ್ಕಾರ ರಚಿಸುವ ಪ್ರಕ್ರಿಯೆ ಆರಂಭವಾಗಲಿದೆ. ಹೊಸ ಸರ್ಕಾರ ನಾಳೆ ಬುಧವಾರ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ. ರಾಜ್ಯದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿದ್ದ ನಿತೀಶ್ ಕುಮಾರ್ ರಾಜೀನಾಮೆ ನೀಡಿರುವುದರಿಂದ ಬಿಜೆಪಿಯ ಅಭ್ಯರ್ಥಿ ಸಿಎಂ ಆಗುವ ಸಾಧ್ಯತೆ ಹೆಚ್ಚಾಗಿದೆ.

ಇದನ್ನೂ ಓದಿ: Video: ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್

ರಾಜ್ಯಸಭಾ ಸಂಸದರಾಗಿ ನಿತೀಶ್ ಪ್ರಮಾಣವಚನ ಸ್ವೀಕರಿಸಿದ್ದಾರೆ. 2 ದಶಕಗಳ ಕಾಲ ಬಿಹಾರ ಸಿಎಂ ಆಗಿ ಸೇವೆ ಸಲ್ಲಿಸಿದ ನಂತರ ನಿತೀಶ್ ಕುಮಾರ್ ದೆಹಲಿಗೆ ತೆರಳುತ್ತಿದ್ದಾರೆ. ಅವರು ಏಪ್ರಿಲ್ 11ರಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮೊದಲು ಅವರು ಮಾರ್ಚ್ 30ರಂದು ಬಿಹಾರದ ವಿಧಾನಸಭೆಯ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ನಿತೀಶ್ ಕುಮಾರ್ ಮಾರ್ಚ್ 16ರಂದು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. ನಿಯಮದ ಪ್ರಕಾರ, ಸಂಸತ್ತಿನ ಮೇಲ್ಮನೆಗೆ ಆಯ್ಕೆಯಾದ 14 ದಿನಗಳ ಒಳಗೆ ಚುನಾಯಿತ ಸದಸ್ಯರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಹೀಗಾಗಿ, ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Tue, 14 April 26

Follow Us
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ