ನಿತೀಶ್ ಕುಮಾರ್(Nitish Kumar) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ಕಾರ್ಯತಂತ್ರವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಹೇಳಿದರು. ಮಹಾಮೈತ್ರಿ ಸರ್ಕಾರ ಅಂತ್ಯವಾಗಿದೆ, ಅಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತಿಲ್ಲ ಎಂದು ನಿತೀಶ್ ಹೇಳಿದ್ದಾರೆ.
ಇಂಡಿಯಾ ಒಕ್ಕೂಟವನ್ನು ರೂಪಿಸಲು ಮತ್ತು ಅದನ್ನು ಮುಂದಕ್ಕೆ ಕೊಂಡೊಯ್ಯಲು ಸಾಕಷ್ಟು ಪ್ರಯತ್ನಗಳನ್ನು ಮಾಡಲಾಗಿದೆ ಆದರೆ ಇತರರು ಅದರಲ್ಲಿ ಆಸಕ್ತಿ ತೋರಿಸಲಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.
ಇಂದು ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಮತ್ತು ರಾಜ್ಯದಲ್ಲಿ ಸರ್ಕಾರವನ್ನು ವಿಸರ್ಜಿಸುವಂತೆ ರಾಜ್ಯಪಾಲರನ್ನು ಕೇಳಿದ್ದೇನೆ. ಎಲ್ಲವೂ ಸರಿಯಿಲ್ಲದ ಕಾರಣ ಈ ಪರಿಸ್ಥಿತಿ ಬಂತು.
ನಿತೀಶ್ ಕುಮಾರ್ ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಮುಂಚೂಣಿಯಲ್ಲಿದ್ದರು. ಅದರ ಮೊದಲ ಸಭೆಯೂ ಪಾಟ್ನಾದಲ್ಲಿ ನಡೆದಿತ್ತು. ಆದರೆ ಚುನಾವಣೆ ನಡೆಯುವ ಕೇವಲ ಎರಡು ತಿಂಗಳ ಮೊದಲು ಹಲವರ ನಿರ್ಧಾರ ಬದಲಾಗಿದೆ.
ಬಿಜೆಪಿ, ಜೆಡಿಯು ಮತ್ತು ಇತರ ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಬಿಹಾರದಲ್ಲಿ ಎನ್‌ಡಿಎ ಸರ್ಕಾರ ರಚಿಸುವ ಪ್ರಸ್ತಾಪವನ್ನು ಬಿಜೆಪಿ ಅಂಗೀಕರಿಸಿದೆ.
ಮತ್ತಷ್ಟು ಓದಿ: CM Nitish Kumar Resigns: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ
ಇಂದು ಬೆಳಗ್ಗೆ ಜೆಡಿಯು ಶಾಸಕರ ಸಭೆಯ ನಂತರ ನಿತೀಶ್ ಕುಮಾರ್ ಅವರು ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ರಾಜೀನಾಮೆ ಸಲ್ಲಿಸಿದರು.
ಲಾಲು ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮತ್ತು ಕಾಂಗ್ರೆಸ್ ಜೊತೆಗಿನ 18 ತಿಂಗಳ ಮೈತ್ರಿ ಕೊನೆಗೊಂಡಿತು.
VIDEO | Bihar political crisis: “I have submitted my resignation as Bihar CM today. I have also asked the Governor to dissolve the government. Things were not working out well,” says @NitishKumar after resigning as Bihar CM.
(Full video available on PTI Videos -… pic.twitter.com/yutgfjcesT
— Press Trust of India (@PTI_News) January 28, 2024
ಬಿಜೆಪಿ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಇತರ ಘಟಕಗಳ ಬೆಂಬಲದೊಂದಿಗೆ ನಿತೀಶ್ ಕುಮಾರ್ ಅವರು ಇಂದು ಸಂಜೆ 5 ಗಂಟೆಗೆ ಬಿಹಾರದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ಅವರ ಪ್ರಮಾಣ ವಚನ ಸ್ವೀಕಾರಕ್ಕೆ ರಾಜಭವನದಲ್ಲಿ ಸಿದ್ಧತೆ ಆರಂಭವಾಗಿದೆ.
ಬಿಜೆಪಿಗೆ ಇಬ್ಬರು ಉಪಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ. ಬಿಜೆಪಿ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಈ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದಾರೆ ಎನ್ನಲಾಗಿದೆ. ಬಿಜೆಪಿ ಶಾಸಕರು ತಮ್ಮ ಬೆಂಬಲ ಪತ್ರಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಅದನ್ನು ನಿತೀಶ್ ಕುಮಾರ್ ಅವರಿಗೆ ನೀಡಲಾಗುವುದು ಎಂದು ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ