ಪಾಟ್ನಾ: ರಾಜ್ಯದ ಸಿಎಂ ಆಗಿ ನಿತೀಶ್ ಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಫಗು ಚೌಹಾಣ್ ಪ್ರತಿಜ್ಞಾವಿಧಿ ಬೋಧನೆ ಮಾಡಿದರು. ಬಿಹಾರದ ರಾಜಭವನದಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ ನಡೆಯಿತು. ಸತತ 4ನೇ ಬಾರಿಗೆ ಸಿಎಂ ಪಟ್ಟವನ್ನು ಅಲಂಕರಿಸಿದ ನಿತೀಶ್ ಕುಮಾರ್ ಒಟ್ಟು 7ನೇ ಬಾರಿಗೆ ಮುಖ್ಯಮಂತ್ರಿ ಪಟ್ಟಕ್ಕೇರಿದ್ದಾರೆ.