AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitish Kumar: ರಾಹುಲ್ ಗಾಂಧಿ, ಅರವಿಂದ ಕೇಜ್ರಿವಾಲ್ ಭೇಟಿಯಾದ ನಿತೀಶ್ ಕುಮಾರ್; ಪ್ರತಿಪಕ್ಷಗಳ ಒಗ್ಗೂಡಿಸುವ ಹೊಣೆ

ದೆಹಲಿ ಮುಖ್ಯಮಂತ್ರಿ, ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್ ಅವರು ಬುಧವಾರ ದೆಹಲಿಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

Nitish Kumar: ರಾಹುಲ್ ಗಾಂಧಿ, ಅರವಿಂದ ಕೇಜ್ರಿವಾಲ್ ಭೇಟಿಯಾದ ನಿತೀಶ್ ಕುಮಾರ್; ಪ್ರತಿಪಕ್ಷಗಳ ಒಗ್ಗೂಡಿಸುವ ಹೊಣೆ
ನಿತೀಶ್ ಕುಮಾರ್ ಮತ್ತು ಅರವಿಂದ ಕೇಜ್ರಿವಾಲ್
ಗಣಪತಿ ಶರ್ಮಾ
|

Updated on: Apr 12, 2023 | 9:32 PM

Share

ಮುಖ್ಯಾಂಶಗಳು

  • ಲೋಕಸಭೆ ಚುನಾವಣೆಗೆ ಮತ್ತೆ ಮಹಾಗಠಬಂಧನ್; ನಿತೀಶ್​ಗೆ ನೇತೃತ್ವ.
  • ಅರವಿಂದ ಕೇಜ್ರಿವಾಲ್, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ನಿತೀಶ್ ಕುಮಾರ್.
  • ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಹೊಣೆ ನಿತೀಶ್​ಗೆ ಎಂದ ಕೇಜ್ರಿವಾಲ್.

ನವದೆಹಲಿ: ದೆಹಲಿ ಮುಖ್ಯಮಂತ್ರಿ, ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್ (Arvind Kejriwal) ಅವರು ಬುಧವಾರ ದೆಹಲಿಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ, ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಬಗ್ಗೆ ಮಾತುಕತೆ ನಡೆಯಿತು. ನಿತೀಶ್ ಅವರು ಎಲ್ಲಾ ವಿರೋಧ ಪಕ್ಷಗಳನ್ನು ಒಂದೇ ಸೂರಿನಡಿ ಒಟ್ಟುಗೂಡಿಸುವ ಉತ್ತಮ ಕ್ರಮ ಕೈಗೊಳ್ಳುತ್ತಿದ್ದಾರೆ. ನಾವು ಕೂಡ ಇದರಲ್ಲಿ ಕೈಜೋಡಿಸಲಿದ್ದೇವೆ ಎಂದು ಮಾತುಕತೆ ಬಳಿಕ ಕೇಜ್ರಿವಾಲ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ದೇಶ ಅತ್ಯಂತ ಕಷ್ಟದ ಕಾಲವನ್ನು ಎದುರಿಸುತ್ತಿದೆ. ಕೇಂದ್ರದಲ್ಲಿ ಅತ್ಯಂತ ಭ್ರಷ್ಟ ಸರ್ಕಾರವಿದೆ ಎಂದು ನಾನು ಹಲವು ಬಾರಿ ಹೇಳಿದ್ದೇನೆ ಎಂದು ಕೇಜ್ರಿವಾಲ್ ಟೀಕಿಸಿದರು.

ಇದಕ್ಕೂ ಮುನ್ನ ಲಾಲು ಪ್ರಸಾದ್ ಯಾದವ್ ಅವರನ್ನು ನಿತೀಶ್ ಭೇಟಿ ಮಾಡಿದ್ದರು. ಜತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ನಿತೀಶ್ ಅವರ ದೆಹಲಿ ಭೇಟಿಯು ಪ್ರತಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಒಂದು ದೊಡ್ಡ ಹೆಜ್ಜೆ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ನಾನು ನಿತೀಶ್ ಜತೆಗಿದ್ದೇನೆ ಎಂದ ಕೇಜ್ರಿ

ಸಭೆಯ ನಂತರ ಮಾತನಾಡಿದ ಕೇಜ್ರಿವಾಲ್, ನಾನು ನಿತೀಶ್ ಕುಮಾರ್ ಜೊತೆಗಿದ್ದೇನೆ. ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಸಾಮಾನ್ಯರಿಗೆ ಖರ್ಚು ಭರಿಸುವುದೇ ಕಷ್ಟವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಎಲ್ಲ ಪ್ರತಿಪಕ್ಷಗಳು ಹಾಗೂ ಇಡೀ ದೇಶ ಒಗ್ಗೂಡಬೇಕಿದೆ. ನಿತೀಶ್ ಕುಮಾರ್ ನೇತೃತ್ವದಲ್ಲಿ ಇದು ನಡೆಯುತ್ತಿದೆ. ನಾವು ಸಂಪೂರ್ಣವಾಗಿ ಅವರೊಂದಿಗೆ ಇದ್ದೇವೆ ಮತ್ತು ಅವರು ಎಲ್ಲರನ್ನು ಸಂಪರ್ಕಿಸುವ ರೀತಿಯಲ್ಲಿ ಅವರಿಗೆ ನೆರವಾಗಲಿದ್ದೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: Odisha: ಒಡಿಶಾದ ಝಮು ಜಾತ್ರೆಯಲ್ಲಿ ಕೆಂಡದ ಮೇಲೆ ನಡೆದು ಪ್ರಾರ್ಥನೆ ಸಲ್ಲಿಸಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಜೊತೆಗೂ ನಿತೀಶ್ ಕುಮಾರ್ ಚರ್ಚೆ ನಡೆಸಲಿದ್ದಾರೆ. ಉದ್ಧವ್ ಠಾಕ್ರೆಯಿಂದ ತೊಡಗಿ ಎಂಕೆ ಸ್ಟಾಲಿನ್ ವರೆಗೆ ಹಲವು ನಾಯಕರನ್ನು ಭೇಟಿಯಾಗಲು ನಿತೀಶ್ ಉದ್ದೇಶಿಸಿದ್ದಾರೆ. ಜತೆ ಮಾತನಾಡುವ ಬಗ್ಗೆಯೂ ನಿತೀಶ್​​ಗೆ ರಾಹುಲ್ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್