ನವದೆಹಲಿ: ದೆಹಲಿ ಮುಖ್ಯಮಂತ್ರಿ, ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್ (Arvind Kejriwal) ಅವರು ಬುಧವಾರ ದೆಹಲಿಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ, ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಎದುರಿಸಲು ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಬಗ್ಗೆ ಮಾತುಕತೆ ನಡೆಯಿತು. ನಿತೀಶ್ ಅವರು ಎಲ್ಲಾ ವಿರೋಧ ಪಕ್ಷಗಳನ್ನು ಒಂದೇ ಸೂರಿನಡಿ ಒಟ್ಟುಗೂಡಿಸುವ ಉತ್ತಮ ಕ್ರಮ ಕೈಗೊಳ್ಳುತ್ತಿದ್ದಾರೆ. ನಾವು ಕೂಡ ಇದರಲ್ಲಿ ಕೈಜೋಡಿಸಲಿದ್ದೇವೆ ಎಂದು ಮಾತುಕತೆ ಬಳಿಕ ಕೇಜ್ರಿವಾಲ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ದೇಶ ಅತ್ಯಂತ ಕಷ್ಟದ ಕಾಲವನ್ನು ಎದುರಿಸುತ್ತಿದೆ. ಕೇಂದ್ರದಲ್ಲಿ ಅತ್ಯಂತ ಭ್ರಷ್ಟ ಸರ್ಕಾರವಿದೆ ಎಂದು ನಾನು ಹಲವು ಬಾರಿ ಹೇಳಿದ್ದೇನೆ ಎಂದು ಕೇಜ್ರಿವಾಲ್ ಟೀಕಿಸಿದರು.
ಇದಕ್ಕೂ ಮುನ್ನ ಲಾಲು ಪ್ರಸಾದ್ ಯಾದವ್ ಅವರನ್ನು ನಿತೀಶ್ ಭೇಟಿ ಮಾಡಿದ್ದರು. ಜತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ನಿತೀಶ್ ಅವರ ದೆಹಲಿ ಭೇಟಿಯು ಪ್ರತಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಒಂದು ದೊಡ್ಡ ಹೆಜ್ಜೆ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.
ಸಭೆಯ ನಂತರ ಮಾತನಾಡಿದ ಕೇಜ್ರಿವಾಲ್, ನಾನು ನಿತೀಶ್ ಕುಮಾರ್ ಜೊತೆಗಿದ್ದೇನೆ. ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ. ಸಾಮಾನ್ಯರಿಗೆ ಖರ್ಚು ಭರಿಸುವುದೇ ಕಷ್ಟವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಎಲ್ಲ ಪ್ರತಿಪಕ್ಷಗಳು ಹಾಗೂ ಇಡೀ ದೇಶ ಒಗ್ಗೂಡಬೇಕಿದೆ. ನಿತೀಶ್ ಕುಮಾರ್ ನೇತೃತ್ವದಲ್ಲಿ ಇದು ನಡೆಯುತ್ತಿದೆ. ನಾವು ಸಂಪೂರ್ಣವಾಗಿ ಅವರೊಂದಿಗೆ ಇದ್ದೇವೆ ಮತ್ತು ಅವರು ಎಲ್ಲರನ್ನು ಸಂಪರ್ಕಿಸುವ ರೀತಿಯಲ್ಲಿ ಅವರಿಗೆ ನೆರವಾಗಲಿದ್ದೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಇದನ್ನೂ ಓದಿ: Odisha: ಒಡಿಶಾದ ಝಮು ಜಾತ್ರೆಯಲ್ಲಿ ಕೆಂಡದ ಮೇಲೆ ನಡೆದು ಪ್ರಾರ್ಥನೆ ಸಲ್ಲಿಸಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಜೊತೆಗೂ ನಿತೀಶ್ ಕುಮಾರ್ ಚರ್ಚೆ ನಡೆಸಲಿದ್ದಾರೆ. ಉದ್ಧವ್ ಠಾಕ್ರೆಯಿಂದ ತೊಡಗಿ ಎಂಕೆ ಸ್ಟಾಲಿನ್ ವರೆಗೆ ಹಲವು ನಾಯಕರನ್ನು ಭೇಟಿಯಾಗಲು ನಿತೀಶ್ ಉದ್ದೇಶಿಸಿದ್ದಾರೆ. ಜತೆ ಮಾತನಾಡುವ ಬಗ್ಗೆಯೂ ನಿತೀಶ್ಗೆ ರಾಹುಲ್ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ