ಬಿಹಾರದಲ್ಲಿ ಜೆಡಿಯು ಯುವ ಮುಖಂಡ ಸೌರಭ್ ಕುಮಾರ್ ಹತ್ಯೆ
ಬಿಹಾರದ ಜನತಾ ದಳ ಯುನೈಟೆಡ್ (ಜೆಡಿಯು) ಯುವ ನಾಯಕನನ್ನು ಬುಧವಾರ ರಾತ್ರಿ ಪಾಟ್ನಾದಲ್ಲಿ ಅಪರಿಚಿತ ದಾಳಿಕೋರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ತಡರಾತ್ರಿ ಸೌರಭ್ ಕುಮಾರ್ ತನ್ನ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಬೈಕ್ ನಲ್ಲಿ ಬಂದ ನಾಲ್ವರು ದಾಳಿಕೋರರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

2024ರ ಲೋಕಸಭೆ ಚುನಾವಣೆ(Lok Sabha Election) ಯ ನೀತಿ ಸಂಹಿತೆ(Model Code Of Conduct) ಜಾರಿಯಲ್ಲಿರುವಾಗಲೇ ಬಿಹಾರದಲ್ಲಿ ಜೆಡಿಯು ಯುವ ಮುಖಂಡನ ಬರ್ಬರ ಹತ್ಯೆ ನಡೆದಿದೆ. ಜನತಾ ದಳ ಯುನೈಟೆಡ್ (ಜೆಡಿಯು) ನಾಯಕ ಸೌರಭ್ ಕುಮಾರ್ (33) ಅವರನ್ನು ಬಿಹಾರದ ರಾಜಧಾನಿ ಪಾಟ್ನಾದ ಪನ್‌ಪುನ್‌ನಲ್ಲಿ ನಿನ್ನೆ ರಾತ್ರಿ ಹತ್ಯೆ ಮಾಡಲಾಗಿದೆ. ಜೆಡಿಯು ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಅವರ ಪಕ್ಷವಾಗಿದ್ದು, ಸೌರಭ್ ಪಕ್ಷದ ಸರ್ವಾಂಗೀಣ ನಾಯಕರಾಗಿದ್ದರು.
ಅವರ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ತನ ಸ್ನೇಹಿತ ಮುನ್ಮುನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಪರ್ಸಾ ಬಜಾರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಮೃತದೇಹವನ್ನು ತಮ್ಮ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆತನ ಸ್ನೇಹಿತ ಮುನ್ಮುನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಗುಂಡು ತಗುಲಿದ ಪರಿಣಾಮ ಕುಮಾರ್ ಮೃತಪಟ್ಟಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೌರಭ್ ಕುಮಾರ್ ತನ್ನ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ.
ಮತ್ತಷ್ಟು ಓದಿ: ಬಿಹಾರ : ನಿತೀಶ್ ಕುಮಾರ್ ಜತೆ ಸಚಿವರಾಗಿ 8 ಮಂದಿ ಪ್ರಮಾಣವಚನ
ನೀತಿ ಸಂಹಿತೆಯ ನಡುವೆಯೇ ನಡೆದಿರುವ ಘಟನೆಯಿಂದ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಘಟನೆಯಿಂದ ಆಕ್ರೋಶಗೊಂಡ ಜನರು ಇಂದು ಬೆಳಗ್ಗೆ ಪ್ರತಿಭಟನೆ ನಡೆಸಿ ಪಾಟ್ನಾ-ಗಯಾ ಹೆದ್ದಾರಿ ತಡೆ ನಡೆಸಿದರು. ಸೌರಭ್ ಕುಮಾರ್ ಹತ್ಯೆಯ ಮಾಹಿತಿ ತಿಳಿದ ತಕ್ಷಣ ಪಟ್ಲಿಪುತ್ರ ಕ್ಷೇತ್ರದ ಪಕ್ಷದ ಅಭ್ಯರ್ಥಿ ಹಾಗೂ ಲಾಲು ಪ್ರಸಾದ್ ಯಾದವ್ ಅವರ ಹಿರಿಯ ಪುತ್ರಿ ಮಿಸಾ ಭಾರತಿ ಅವರು ಸೌರಭ್ ಕುಮಾರ್ ಅವರ ಮನೆಗೆ ಮುಂಜಾನೆಯೇ ಆಗಮಿಸಿದ್ದರು.
ಸೌರಭ್ ಹತ್ಯೆಯ ನಂತರ ದುಃಖದಲ್ಲಿರುವ ಕುಟುಂಬವನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದ್ದು, ನಾಳೆ ಅಂದರೆ ಏಪ್ರಿಲ್ 26ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್ 4ಕ್ಕೆ ಫಲಿತಾಂಶ ಹೊರಬರಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




