AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nivar Cyclone ತಮಿಳುನಾಡು, ಪುದುಚೇರಿ, ಆಂಧ್ರದಲ್ಲಿ ಬಿರುಗಾಳಿ ಸಹಿತ ಮಳೆ: ಜನಜೀವನ ಅಸ್ತವ್ಯಸ್ತ

ತಮಿಳುನಾಡು, ಪುದುಚೇರಿ ಸೇರಿದಂತೆ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ರಾಜ್ಯಗಳಲ್ಲಿ ಈವರೆಗೆ 2 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಈವರೆಗಿನ ಮುಖ್ಯ ಬೆಳವಣಿಗೆಗಳ ಮಾಹಿತಿ ಇಲ್ಲಿದೆ..

Nivar Cyclone ತಮಿಳುನಾಡು, ಪುದುಚೇರಿ, ಆಂಧ್ರದಲ್ಲಿ ಬಿರುಗಾಳಿ ಸಹಿತ ಮಳೆ: ಜನಜೀವನ ಅಸ್ತವ್ಯಸ್ತ
ಚಂಡಮಾರುತ (ಸಂಗ್ರಹ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on:Nov 26, 2020 | 11:23 AM

Share

ಚೆನ್ನೈ / ಬೆಂಗಳೂರು: ನಿರೀಕ್ಷೆಗಿಂತ ಕಡಿಮೆ ತೀವ್ರತೆಯಲ್ಲಿ ನಿವಾರ್ ಚಂಡಮಾರುತವು ತಮಿಳುನಾಡಿನ ಮರಕ್ಕಣಂ ಬಳಿ ಗುರುವಾರ ನಸುಕಿನ 2.30ರಲ್ಲಿ ಭೂಮಿಗೆ ಅಪ್ಪಳಿಸಿತು. ಚಂಡಮಾರುತದ ತೀವ್ರತೆಯನ್ನು ಈ ಮೊದಲು ‘ಅತಿ ತೀಕ್ಷ್ಣ’ ಎಂದು ವರ್ಗೀಕರಿಸಲಾಗಿತ್ತು. ನಂತರ ಅದನ್ನು ‘ತೀಕ್ಷ್ಣ’ದ ತೀವ್ರತೆಗೆ ಇಳಿಸಲಾಯಿತು.

ತಮಿಳುನಾಡು, ಪುದುಚೇರಿ ಸೇರಿದಂತೆ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ರಾಜ್ಯಗಳಲ್ಲಿ ಈವರೆಗೆ 2 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಭಾರಿ ಮಳೆ ಮತ್ತು ಪ್ರವಾಹ ಪರಿಸ್ಥಿತಿಯ ನಡುವೆಯೂ ಯುದ್ಧೋಪಾದಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ರಾಜ್ಯ ಸರ್ಕಾರಗಳು ಹೇಳಿವೆ.

ಕರ್ನಾಟಕದಲ್ಲಿ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಸಹಿತ, ತುಂತುರು ಮಳೆಯಾಗುತ್ತಿದೆ.

ಇದನ್ನೂ ಓದಿ: ನುಗ್ಗಿ ಬರ್ತಿದೆ ಡೆಡ್ಲಿ ನಿವಾರ್ ಚಂಡಮಾರುತ: ಬೆಂಗಳೂರಿನಲ್ಲಿ 2 ದಿನ ಭಾರಿ ಮಳೆ

ಚಂಡಮಾರುತಕ್ಕೆ ಸಂಬಂಧಿಸಿದಂತೆ ಈವರೆಗಿನ 10 ಮುಖ್ಯ ಬೆಳವಣಿಗೆಗಳು ಇಲ್ಲಿದೆ..

1) ಪುದುಚೇರಿಯಲ್ಲಿ ಕಳೆದ 20 ಗಂಟೆಗಳಲ್ಲಿ 20 ಸೆಂಮೀ ಮಳೆಯಾಗಿದೆ. ಹಲವೆಡೆ ನೀರು ನಿಂತಿದೆ. ಸಾವಿರಾರು ಮರಗಳು ಉರುಳಿವೆ. ಪುದುಚೇರಿ ಮತ್ತು ತಮಿಳುನಾಡಿನ ಕಡಲೂರಿನಲ್ಲಿ ವಿದ್ಯುತ್​ ಸಂಪರ್ಕ ಕಡಿತಗೊಂಡಿದೆ.

2) ತಮಿಳುನಾಡು ಮತ್ತು ಪುದುಚೇರಿಯಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಚೆನ್ನೈ ವಿಮಾನ ನಿಲ್ದಾಣ ಮತ್ತು ಮೆಟ್ರೊ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ‘ಗಾಳಿಯ ತೀವ್ರತೆ ಕ್ರಮೇಣ ಕಡಿಮೆಯಾಗಲಿದೆ. ಆದರೆ ಭಾರಿ ಮಳೆ ಮುಂದುವರಿಯಲಿದೆ’ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಡಾ.ಎಸ್.ಬಾಲಚಂದ್ರನ್ ಮಾಹಿತಿ ನೀಡಿದ್ದಾರೆ.

3) ಪುದುಚೇರಿ ಮತ್ತು ತಮಿಳುನಾಡಿನ ಕಡಲೂರು, ನಾಗಪಟ್ಟಿನಂ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಬೀಳುತ್ತಿದೆ. 2 ಲಕ್ಷಕ್ಕೂ ಹೆಚ್ಚು ಜನರನ್ನು ಚಂಡಮಾರುತ ತಂಗುದಾಣಗಳಿಗೆ (ಸೈಕ್ಲೋನ್ ಶೆಲ್ಟರ್ಸ್​) ಸ್ಥಳಾಂತರಿಸಲಾಗಿದೆ.

4) ಜನರು ಮನೆಯಲ್ಲಿಯೇ ಇರಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ ಮನವಿ ಮಾಡಿದ್ದಾರೆ. ತಮಿಳುನಾಡಿನ 4000 ಸ್ಥಳಗಳಲ್ಲಿ ಚಂಡಮಾರುತದಿಂದ ತೀವ್ರಹಾನಿ ಆಗಬಹುದು ಎಂದು ಗುರುತಿಸಲಾಗಿದೆ. ಸಂತ್ರಸ್ತರಿಗೆ ಮುಖ್ಯಮಂತ್ರಿ ಶೀಘ್ರ ಪರಿಹಾರ ಘೋಷಿಸಲಿದ್ದಾರೆ ಎಂದು ತಮಿಳುನಾಡಿನ ವಿಪತ್ತು ನಿರ್ವಹಣಾ ಸಚಿವ ಆರ್​.ಬಿ.ಉದಯಕುಮಾರ್ ಹೇಳಿದ್ದಾರೆ.

5) ತಮಿಳುನಾಡು, ಪುದುಚೇರಿ ಮತ್ತು ನೆರೆಯ ಆಂಧ್ರದಲ್ಲಿ ಸುಮಾರು 1,200 NDRF ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಡಲೂರು ಜಿಲ್ಲೆಯಲ್ಲಿ 6 ತಂಡಗಳೂ ಸೇರಿದಂತೆ ತಮಿಳುನಾಡಿನಲ್ಲಿ ಒಟ್ಟು 12 ತಂಡಗಳನ್ನು ನಿಯೋಜಿಸಲಾಗಿದೆ. ಆಂಧ್ರದಲ್ಲಿ 7, ಪುದುಚೇರಿಯಲ್ಲಿ 3 ತಂಡಗಳಿವೆ. ಒಡಿಶಾದ ಕಟಕ್​, ಆಂಧ್ರದ ವಿಜಯವಾಡ ಮತ್ತು ಕೇರಳದ ತ್ರಿಶೂರ್ ನಗರಗಳಲ್ಲಿ ಇನ್ನೂ 20 ಮೀಸಲು ತಂಡಗಳು ಸನ್ನದ್ಧ ಸ್ಥಿತಿಯಲ್ಲಿವೆ.

6) ಮುಂಜಾಗರೂಕತಾ ಕ್ರಮವಾಗಿ ಚೆನ್ನೈ ಸುತ್ತಮುತ್ತಲ ಜಲಾಶಯಗಳಿಂದ ನೀರು ಹರಿಸಲಾಗಿದೆ. ಜಲಾಶಯಗಳ ಒಳಹರಿವಿನ ಮೇಲೆ ಸತತ ನಿಗಾ ಇರಿಸಲಾಗಿದೆ. ಚೆನ್ನೈ ನಗರದಲ್ಲಿದ್ದ ಹಳೆಯ ಮತ್ತು ಬಿದ್ದ ಮರಗಳನ್ನು ತೆರವುಗೊಳಿಸಲಾಗಿದೆ. ಬಂದರಿನಲ್ಲಿದ್ದ ಹಡಗುಗಳನ್ನು ಆಳ ಸಮುದ್ರಕ್ಕೆ ಕಳಿಸಲಾಗಿದ್ದು, ಬಂದರು ಚಟುವಟಿಕೆಗಳನ್ನು ಸ್ತಬ್ಧಗೊಳಿಸಲಾಗಿದೆ.

7) ನಿವಾರ್​ ಚಂಡಮಾರುತದ ಪರಿಣಾಮಗಳನ್ನು ಎಚ್ಚರಿಕೆಯಿಂದ ಗಮನಿಸುತ್ತಿರುವ ನೌಕಾಪಡೆಯು ಹಡಗುಗಳು, ವಿಮಾನಗಳು, ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿ ಮತ್ತು ಮುಳುಗುತಜ್ಞರನ್ನು ಸನ್ನದ್ಧ ಸ್ಥಿತಿಯಲ್ಲಿರಿಸಿದೆ. ತಮಿಳುನಾಡು ಮತ್ತು ಪುದುಚೇರಿ ಸರ್ಕಾರಗಳೊಂದಿಗೆ ನಮ್ಮ ಸಿಬ್ಬಂದಿ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ನೌಕಾಪಡೆಯ ಹೇಳಿಕೆ ತಿಳಿಸಿದೆ.

8) ತಮಿಳುನಾಡಿನ ಕಲ್ಪಕಂನಲ್ಲಿರುವ ಮದ್ರಾಸ್ ಅಣುಶಕ್ತಿ ಘಟಕವು ಚಂಡಮಾರುತದಿಂದ ತೀವ್ರ ಹಾನಿ ಅನುಭವಿಸುವ ಸ್ಥಳ ಎಂದು ಗುರುತಿಸಲಾಗಿರುವ ಮಾಮಲ್ಲಪುರಂಗೆ ಕೇವಲ 20 ಕಿ.ಮೀ. ದೂರದಲ್ಲಿದೆ. ಹವಾಮಾನವು ಘಟಕದ ಮೇಲೆ ಬೀರಬಹುದಾದ ಪರಿಣಾಮಗಳನ್ನು ಅಧಿಕಾರಿಗಳು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

9) ತಮಿಳುನಾಡು ಮತ್ತು ಪುದುಚೇರಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಕೇಂದ್ರದಿಂದ ಎಲ್ಲ ರೀತಿಯ ಸಹಕಾರ ನೀಡುವ ಭರವಸೆ ನೀಡಿದ್ದಾರೆ. ನೈಸರ್ಗಿಕ ವಿಕೋಪದಿಂದ ಜನರು ಸುರಕ್ಷಿತವಾಗಿ ಪಾರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

10) ಆಂಧ್ರ ಪ್ರದೇಶದಲ್ಲಿ ಚಂಡಮಾರುತ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಚಂಡಮಾರುತದ ಪ್ರಭಾವದಿಂದ ನೆಲ್ಲೂರು, ಚಿತ್ತೂರು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕಡಪ, ಕರ್ನೂಲು ಮತ್ತು ಅನಂತಪುರ ಜಿಲ್ಲೆಗಳಲ್ಲಿಯೂ ಬಿರುಗಾಳಿ ಸಹಿತ ಮಳೆಯಾಗಬಹುದು ಎಂಬ ಮುನ್ಸೂಚನೆಯಿದೆ. ಮೀನುಗಾರರಿಗೆ ಸಮುದ್ರಕ್ಕೆ ತೆರಳುವುದನ್ನು ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: Cyclone Nivar ಎದುರಿಸಲು ಹೇಗೆ ಸಿದ್ಧವಾಗಿದೆ ತಮಿಳುನಾಡು, ಪುದುಚೇರಿ?

ಚೆನ್ನೈ ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ (ಪಿಟಿಐ ಚಿತ್ರ)

Published On - 10:57 am, Thu, 26 November 20

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?