NMACC launch: ಭಾರತೀಯ ಕಲಾ ಪ್ರಕಾರಗಳನ್ನು ಉತ್ತೇಜಿಸುವ ಪ್ರಯತ್ನಗಳಿಗಾಗಿ ನೀತಾ ಅಂಬಾನಿಯವರನ್ನು ಶ್ಲಾಘಿಸಿದ ಪ್ರಧಾನಿ ಮೋದಿ

|

Updated on: Apr 03, 2023 | 10:22 PM

ಮುಂಬೈನಲ್ಲಿ ನೀತಾ ಮುಕೇಶ್ ಅಂಬಾನಿ ಕಲ್ಚರಲ್ ಸೆಂಟರ್ ಲೋಕಾರ್ಪಣೆಗೊಂಡಿರುವ ಬಗ್ಗೆ ತಿಳಿದು ಸಂತೋಷವಾಗಿದೆ. ದೇಶದ ನಾಗರಿಕರಲ್ಲಿ ಮಾತ್ರವಲ್ಲದೆ ಜಾಗತಿಕವಾಗಿ ಸಾಮಾಜಿಕ-ಸಾಂಸ್ಕೃತಿಕತೆಯ ಬಗ್ಗೆ ಪ್ರಚಾರ ಮಾಡಲು ಪ್ರಯತ್ನಿಸುತ್ತಿರುವ ನೀತಾ ಅಂಬಾನಿಯವರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

NMACC launch: ಭಾರತೀಯ ಕಲಾ ಪ್ರಕಾರಗಳನ್ನು ಉತ್ತೇಜಿಸುವ ಪ್ರಯತ್ನಗಳಿಗಾಗಿ ನೀತಾ ಅಂಬಾನಿಯವರನ್ನು ಶ್ಲಾಘಿಸಿದ ಪ್ರಧಾನಿ ಮೋದಿ
ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರ ಸ್ಥಾಪನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ
Follow us on

ನವದೆಹಲಿ: ಮುಂಬೈನಲ್ಲಿ ರಿಲಯನ್ಸ್ ಫೌಂಡೇಶನ್ ಮುಖ್ಯಸ್ಥೆ ನೀತಾ ಮುಕೇಶ್ ಅಂಬಾನಿ ಅವರ ಹೆಸರಿನಲ್ಲಿ ಆರಂಭಿಸಲಾದ ಸಾಂಸ್ಕೃತಿಕ ಕೇಂದ್ರದ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪತ್ರದ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರದ (Nita Mukesh Ambani Cultural Centre -NMACC) ಮೂಲಕ ಸಾಂಪ್ರದಾಯಿಕ ಭಾರತೀಯ ಕಲಾ ಪ್ರಕಾರಗಳನ್ನು ಉತ್ತೇಜಿಸುವ ಪ್ರಯತ್ನಗಳಿಗಾಗಿ ಪ್ರಧಾನಿ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದು, ದೇಶದ ಮೂಲೆ ಮೂಲೆಯಲ್ಲಿರುವ ಯುವ ಹಾಗೂ ಉದಯೋನ್ಮುಖ ಕಲಾವಿದರಿಗೆ ಈ ಕೇಂದ್ರ ದಾರಿದೀಪವಾಗಲಿದೆ ಎಂದು ಹೇಳಿದ್ದಾರೆ. ಸದ್ಯ ಮೋದಿ ಅವರು ಬರೆದಿರುವ ಈ ಪತ್ರವನ್ನು ಎನ್ಎಂಎಸಿಸಿಯ ಅಧಿಕೃತ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

“ಮುಂಬೈನಲ್ಲಿ ನೀತಾ ಮುಕೇಶ್ ಅಂಬಾನಿ ಕಲ್ಚರಲ್ ಸೆಂಟರ್ ಲೋಕಾರ್ಪಣೆಗೊಂಡಿರುವ ಬಗ್ಗೆ ತಿಳಿದು ಸಂತೋಷವಾಗಿದೆ. ಈ ಸಾಂಸ್ಕೃತಿಕ ಕೇಂದ್ರಕ್ಕಾಗಿ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ. ನೀತಾ ಮುಖೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರ ಸ್ಥಾಪನೆ ಪ್ರಯತ್ನವು ಕಲೆ ಮತ್ತು ಸಂಸ್ಕೃತಿಯನ್ನು ದೊಡ್ಡ ಸಮಾಜಕ್ಕೆ ಲಭ್ಯವಾಗುವಂತೆ ಮಾಡಲು ಕಾರಣವಾಗುತ್ತದೆ. ಇದು ದೇಶದ ನಾಗರಿಕರಲ್ಲಿ ಮಾತ್ರವಲ್ಲದೆ ಜಾಗತಿಕವಾಗಿ ಸಾಮಾಜಿಕ-ಸಾಂಸ್ಕೃತಿಕತೆಯ ಬಗ್ಗೆ ಪ್ರಚಾರ ಮಾಡಲು ಪ್ರಯತ್ನಿಸುತ್ತಿರುವ ನೀತಾ ಅಂಬಾನಿಯವರ ಕಾರ್ಯ ನಿಜಕ್ಕೂ ಶ್ಲಾಘನೀಯ” ಎಂದರು.

ಇದನ್ನೂ ಓದಿ: Rahul Gandhi: ಮೋದಿ ಉಪನಾಮ ಹೇಳಿಕೆ; ರಾಹುಲ್​ ಗಾಂಧಿ ಮೇಲ್ಮನವಿ ವಿಚಾರಣೆಗೆ ಸಮ್ಮತಿ, ಜಾಮೀನು ವಿಸ್ತರಣೆ

“ಭಾರತದ ಕಲೆ ಮತ್ತು ಸಂಸ್ಕೃತಿಯನ್ನು ಎಲ್ಲೆಡೆ ಪಸರಿಸಿ ಜನಪ್ರಿಯಗೊಳಿಸುವಲ್ಲಿ ಅಂಬಾನಿ ಕುಟುಂಬ ಮೊದಲಿನಿಂದಲೂ ಕೊಡುಗೆ ನೀಡುತ್ತಿದೆ. ಇದನ್ನು ನೀತಾ ಅಂಬಾನಿ ಕೂಡ ಮುಂದುವರಿಸುತ್ತಿದ್ದಾರೆ. ಎನ್ಎಂಎಸಿಸಿ ಉದಯೋನ್ಮುಖ ಕಲಾವಿದರು ಮತ್ತು ಪ್ರದರ್ಶಕರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಒಂದು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ, ಇದು ಹೆಚ್ಚಿನ ಜನರನ್ನು ಕಲೆಯನ್ನು ವೃತ್ತಿಪರವಾಗಿ ತೆಗೆದುಕೊಳ್ಳಲು ಪ್ರೋತ್ಸಾಹಿಸುತ್ತದೆ” ಎಂದರು.

ಜಗತ್ತನ್ನು ಆಕರ್ಷಿಸಲಿರುವ ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರ

“ಭಾರತವು ರೋಮಾಂಚಕ, ಪ್ರವರ್ಧಮಾನಕ್ಕೆ ಬರುತ್ತಿರುವ ಸಂಸ್ಕೃತಿಯಾಗಿದ್ದು, ಇದು ಸಾವಿರಾರು ವರ್ಷಗಳಿಂದ ಅಭಿವೃದ್ಧಿ ಹೊಂದಿದೆ. ನಮ್ಮ ಪೂರ್ವಜರು ನಮಗೆ ಭಾಷೆ ಅಥವಾ ಸಾಹಿತ್ಯ, ಮೌಲ್ಯಗಳು ಅಥವಾ ಹಬ್ಬಗಳು, ಕಲೆ ಅಥವಾ ವಾಸ್ತುಶಿಲ್ಪ, ಸಂಸ್ಕೃತಿ ಅಥವಾ ಪಾಕಪದ್ಧತಿಯಂತಹ ಶ್ರೀಮಂತ ನಿಧಿಯನ್ನು ನೀಡಿದ್ದಾರೆ, ಸದ್ಯ ಭಾರತದತ್ತ ಇಡೀ ಜಗತ್ತೇ ನೋಡುತ್ತಿರುವಾಗ ಈ ಕಲಾಕೇಂದ್ರ ಜಗತ್ತನ್ನು ಮತ್ತಷ್ಟು ಆಕರ್ಷಿಸಲಿದೆ” ಎಂದು ಪ್ರಧಾನಿ ಹೇಳಿದರು.

ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರ

“ಈ ಬೆಳವಣಿಗೆಗೆ ಹೆಚ್ಚಿನ ಆವೇಗವನ್ನು ನೀಡಲು, ನಮ್ಮ ಸಂಸ್ಕೃತಿಯನ್ನು ಪ್ರದರ್ಶಿಸುವ ಮತ್ತು ಜನಪ್ರಿಯಗೊಳಿಸುವ ಸಂಸ್ಥೆಗಳು ನಿರ್ಣಾಯಕವಾಗಿವೆ. ರಾಷ್ಟ್ರದ ಅಮೃತ ಕಾಲವು ನಮ್ಮ ಉಜ್ವಲ ಪರಂಪರೆಯಿಂದ ಸ್ಫೂರ್ತಿ ಪಡೆಯಲು ಮತ್ತು ಅದರ ಸಂಸ್ಕೃತಿಯನ್ನು ಆಚರಿಸುವ ಅಂತರ್ಗತ, ಬಲವಾದ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸಲು ಒಂದು ಅವಕಾಶವಾಗಿದೆ. ಈ ಸಾಂಸ್ಕೃತಿಕ ಕೇಂದ್ರವು ಭಾರತೀಯ ಸಮಾಜದಲ್ಲಿ ಕಲೆ ಮತ್ತು ಸಂಸ್ಕೃತಿಯ ಮೌಲ್ಯ ಮತ್ತು ಸ್ಥಾನವನ್ನು ಪ್ರದರ್ಶಿಸುವಲ್ಲಿ ಸಹಾಯಕವಾಗಲಿದೆ ಎಂದು ಹೇಳಿ ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರದ ಉದ್ಘಾಟನೆಗೆ ಶುಭಾಶಯಗಳು ಎಂದರು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 pm, Mon, 3 April 23