AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷಪಾತ ಮಾಡಿಲ್ಲ, ಸದನಕ್ಕಿಂತ ವಿಪಕ್ಷ ನಾಯಕ ಮೇಲಲ್ಲ; ರಾಹುಲ್ ಗಾಂಧಿಗೆ ಸ್ಪೀಕರ್ ಓಂ ಬಿರ್ಲಾ ತಿರುಗೇಟು

ಈಗಾಗಲೇ ವಿರೋಧ ಪಕ್ಷಗಳು ಸ್ಪೀಕರ್ ವಿರುದ್ಧ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಇಂದು ವಿಪಕ್ಷ ನಾಯಕರಾದ ರಾಹುಲ್ ಗಾಂಧಿಗೆ ಅಧಿವೇಶನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ ಎಂಬ ಕಾಂಗ್ರೆಸ್ ಹಾಗೂ ಇತರೆ ವಿಪಕ್ಷಗಳ ಆರೋಪಕ್ಕೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸ್ಪಷ್ಟನೆ ನೀಡಿದ್ದಾರೆ. 'ಪ್ರತಿಯೊಬ್ಬ ಸದಸ್ಯರಿಗೂ ಮಾತನಾಡುವ ಹಕ್ಕಿದೆ, ನಾನು ಎರಡೂ ಕಡೆಯವರಿಗೂ ಮಾತನಾಡಲು ಸಮಾನ ಅವಕಾಶ ನೀಡಿದ್ದೇನೆ. ಕೆಲವರು ವಿಪಕ್ಷ ನಾಯಕನ ಸ್ಥಾನ ಸದನಕ್ಕಿಂತಲೂ ದೊಡ್ಡದು ಎಂದು ಭಾವಿಸಿದ್ದಾರೆ' ಎಂದು ಸ್ಪೀಕರ್ ಓಂ ಬಿರ್ಲಾ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.

ಪಕ್ಷಪಾತ ಮಾಡಿಲ್ಲ, ಸದನಕ್ಕಿಂತ ವಿಪಕ್ಷ ನಾಯಕ ಮೇಲಲ್ಲ; ರಾಹುಲ್ ಗಾಂಧಿಗೆ ಸ್ಪೀಕರ್ ಓಂ ಬಿರ್ಲಾ ತಿರುಗೇಟು
Speaker Om Birla
ಸುಷ್ಮಾ ಚಕ್ರೆ
|

Updated on: Mar 12, 2026 | 4:11 PM

Share

ನವದೆಹಲಿ, ಮಾರ್ಚ್ 12: ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಸದನದಲ್ಲಿ ಸೋತ ನಂತರ ಇಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Om Birla) ತಮ್ಮ ಕರ್ತವ್ಯವನ್ನು ಪುನರಾರಂಭಿಸಿದ್ದಾರೆ. ನಾನು ಯಾವುದೇ ಪಕ್ಷಪಾತ ಮಾಡಿಲ್ಲ ಎಂದಿರುವ ಓಂ ಬಿರ್ಲಾ, ಪ್ರತಿ ಸಂಸದರಿಗೆ ಲೋಕಸಭೆಯಲ್ಲಿ ಮಾತನಾಡಲು ಅವಕಾಶ ಸಿಗುವಂತೆ ನೋಡಿಕೊಳ್ಳಲು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ. ವಿರೋಧ ಪಕ್ಷದ ನಾಯಕರು ಸದನಕ್ಕಿಂತಲೂ ಎಂದು ರಾಹುಲ್ ಗಾಂಧಿಯನ್ನು ಟೀಕಿಸಿದ್ದಾರೆ.

ನಿನ್ನೆ ವಿಪಕ್ಷದ ಅವಿಶ್ವಾಸ ನಿರ್ಣಯವು ಲೋಕಸಭೆಯಲ್ಲಿ ಸೋತಿತ್ತು. ಇದಾದ ಒಂದು ದಿನದ ನಂತರ, ಸ್ಪೀಕರ್ ಓಂ ಬಿರ್ಲಾ ಇಂದು (ಮಾರ್ಚ್ 12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅಥವಾ ಇತರ ಸದಸ್ಯರನ್ನು ಸದನದಲ್ಲಿ ಮಾತನಾಡದಂತೆ ತಡೆಯಲಾಗಿದೆ ಎಂಬ ಆರೋಪಗಳನ್ನು ನಿರಾಕರಿಸಿದ್ದಾರೆ. “ಪ್ರತಿಯೊಬ್ಬ ಸಂಸದರಿಗೂ ನಿಯಮಗಳ ಪ್ರಕಾರ ಮಾತನಾಡುವ ಹಕ್ಕಿದೆ. ನಾನು ಆ ಅವಕಾಶ ನೀಡಿದ್ದೇನೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಫೆ. 4ರಂದು ಅಧಿವೇಶನದಲ್ಲಿ ನಡೆದಿದ್ದೇನು? ಕಾಂಗ್ರೆಸ್ ಮಹಿಳಾ ಸಂಸದರ 2 ವಿಡಿಯೋ ರಿಲೀಸ್ ಮಾಡಿದ ಬಿಜೆಪಿ

ಫೆಬ್ರವರಿ 13ರಂದು ಕೊನೆಗೊಂಡ ಬಜೆಟ್ ಅಧಿವೇಶನದ ಮೊದಲ ಭಾಗದಲ್ಲಿ ಅವಿಶ್ವಾಸ ನಿರ್ಣಯಕ್ಕೆ ನೋಟಿಸ್ ನೀಡಿದ ನಂತರ ಇಂದು ಓಂ ಬಿರ್ಲಾ ಮೊದಲ ಬಾರಿಗೆ ಸದನಕ್ಕೆ ಬಂದರು. ಅಧಿವೇಶನದ ಎರಡನೇ ಭಾಗ ಮಾರ್ಚ್ 9ರಂದು ಪ್ರಾರಂಭವಾಯಿತು.

ವಿರೋಧ ಪಕ್ಷಕ್ಕೆ ಮಾತನಾಡಲು ಅವಕಾಶ ನೀಡಲಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್, ಸದನವು ಸ್ಥಾಪಿತ ನಿಯಮಗಳ ಪ್ರಕಾರ ಕಾರ್ಯನಿರ್ವಹಿಸುತ್ತದೆ. ಸದಸ್ಯರು ಸದನವನ್ನು ಉದ್ದೇಶಿಸಿ ಮಾತನಾಡುವ ಮೊದಲು ಸ್ಪೀಕರ್​ರಿಂದ ಅನುಮತಿ ಪಡೆಯಬೇಕು. ಲೋಕಸಭೆಯ ನಿಯಮಗಳಿಗಿಂತ ಯಾರೂ ಮೇಲಲ್ಲ ಎಂದು ಅವರು ಒತ್ತಿ ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ