AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಹಪೀಡಿತರಿಗೆ ಪರಿಹಾರ ನೀಡಲು ನಾನು ಸಚಿವೆಯಲ್ಲ; ವಿವಾದಕ್ಕೀಡಾದ ಸಂಸದೆ ಕಂಗನಾ ರಣಾವತ್

ಹಿಮಾಚಲ ಪ್ರದೇಶದಲ್ಲಿ ಕಳೆದ 2 ವಾರಗಳಿಂದ ಭಾರೀ ಮಳೆಯಾಗುತ್ತಿದ್ದು, ಪ್ರವಾಹದಿಂದ ಜನರು ತತ್ತರಿಸಿದ್ದಾರೆ. ಭೂಕುಸಿತ, ಪ್ರವಾಹದಿಂದ ಹಿಮಾಚಲದ ಜನರು ಕಂಗಾಲಾಗಿದ್ದಾರೆ. ಆದರೆ, ಇಲ್ಲಿನ ಮಂಡಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ ಇಲ್ಲಿಯವರೆಗೂ ಇಲ್ಲಿಗೆ ಭೇಟಿ ನೀಡಿರಲಿಲ್ಲ. ಭಾನುವಾರ ಅವರು ಮಂಡಿಗೆ ಭೇಟಿ ನೀಡಿದಾಗ ಪ್ರವಾಹಪೀಡಿತರಿಗೆ ಪರಿಹಾರ ನೀಡುವ ಕುರಿತು ಪ್ರಶ್ನಿಸಿದ್ದಾಗ ಉಡಾಫೆಯ ಉತ್ತರ ನೀಡುವ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಪ್ರವಾಹಪೀಡಿತರಿಗೆ ಪರಿಹಾರ ನೀಡಲು ನಾನು ಸಚಿವೆಯಲ್ಲ; ವಿವಾದಕ್ಕೀಡಾದ ಸಂಸದೆ ಕಂಗನಾ ರಣಾವತ್
Kangana Ranaut
ಸುಷ್ಮಾ ಚಕ್ರೆ
|

Updated on:Jul 07, 2025 | 5:20 PM

Share

ಮಂಡಿ, ಜುಲೈ 7: ಹಿಮಾಚಲ ಪ್ರದೇಶದ (Himachal Pradesh Flood) ಮಂಡಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ಅವರು ನೀಡಿದ ಹೇಳಿಕೆಗೆ ಟೀಕೆ ವ್ಯಕ್ತವಾಗಿದೆ. ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಸಂಸದೆ ಕಂಗನಾ, ವಿಪತ್ತು ಪರಿಹಾರ ನೀಡಲು ತಮ್ಮ ಬಳಿ ಯಾವುದೇ ಸಂಪುಟ ಸ್ಥಾನವಿಲ್ಲ, ಹಣವೂ ಇಲ್ಲ ಎಂದು ಹೇಳಿದ್ದರು. ಈ ಹೇಳಿಕೆಗೆ ಆಡಳಿತಾರೂಢ ಕಾಂಗ್ರೆಸ್‌ನಿಂದ ತೀವ್ರ ಟೀಕೆ ವ್ಯಕ್ತವಾಗಿತ್ತು. ಹಾಗೇ, ಮಂಡಿಯ ಜನರು ಕೂಡ ಕಂಗನಾ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಂಡಿಯಿಂದ ಸ್ಪರ್ಧಿಸಿ ಭಾರೀ ಬಹುಮತದಿಂದ ಜಯ ಗಳಿಸಿದ್ದ ಕಂಗನಾ ರಣಾವತ್ ಮತ್ತೊಮ್ಮೆ ವಿವಾದದಿಂದ ಸುದ್ದಿಯಾಗಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಉಂಟಾದ ಪ್ರವಾಹ ಮತ್ತು ಭೂಕುಸಿತದಲ್ಲಿ ಅತ್ಯಂತ ಹಾನಿಯಾಗಿರುವ ಜಿಲ್ಲೆಗಳಲ್ಲಿ ಮಂಡಿ ಕೂಡ ಒಂದು. ಮಂಡಿ ಸಂಸದೆಯಾಗಿರುವ ಕಂಗನಾ ಪ್ರವಾಹಪೀಡಿತರಿಗೆ ಪರಿಹಾರ ಧನ ಬಿಡುಗಡೆ ಮಾಡಿಸುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ವಿಪತ್ತು ಪರಿಹಾರಕ್ಕೆ ನನ್ನ ಬಳಿ ಸಂಪುಟ ಸ್ಥಾನವಿಲ್ಲ. ನಾನು ಕೇವಲ ಸಂಸದೆಯಷ್ಟೇ. ನನ್ನ ಬಳಿ ಪರಿಹಾರ ನಿಧಿಯಿಲ್ಲ, ವಿಪತ್ತು ಪರಿಹಾರಕ್ಕೆ ಹಣವಿಲ್ಲ, ಯಾವುದೇ ಸಂಪುಟ ಹುದ್ದೆಯೂ ಇಲ್ಲ. ಸಂಸದರಿಗೆ ಸಂಸತ್ತಿಗೆ ಸೀಮಿತವಾದ ಕೆಲಸವಿದೆ” ಎಂದು ನಗುತ್ತಾ ವರದಿಗಾರರಿಗೆ ಹೇಳಿದ್ದಾರೆ.

“ನಾವು ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವಿನ ಕೊಂಡಿಯಾಗಿದ್ದೇವೆ. ಕೇಂದ್ರದಿಂದ ರಾಜ್ಯಕ್ಕೆ ಯೋಜನೆಗಳನ್ನು ತಲುಪಿಸುವಲ್ಲಿ ಮತ್ತು ನಮ್ಮ ಕ್ಷೇತ್ರಗಳ ಸಮಸ್ಯೆಗಳು ಮತ್ತು ಕುಂದುಕೊರತೆಗಳನ್ನು ಕೇಂದ್ರದೊಂದಿಗೆ ಎತ್ತುವಲ್ಲಿ ನಾವು ಪ್ರಮುಖ ಪಾತ್ರ ವಹಿಸುತ್ತೇವೆ. ನಮ್ಮ ಬಳಿ ಯಾವ ಪರಿಹಾರ ನಿಧಿಯೂ ಇಲ್ಲ” ಎಂದು ಅವರು ಹೇಳಿದ್ದಾರೆ. ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಕಂಗನಾ ಹೇಳಿಕೆ ಟ್ರೋಲ್ ಕೂಡ ಆಗಿತ್ತು.

ಇದನ್ನೂ ಓದಿ: ‘ವಯಸ್ಸಾಗುವುದು ಕೂಡ ಒಂದು ಸಂತೋಷ’; ಕಂಗನಾಗೆ ಇಲ್ಲ ಬಿಳಿ ಕೂದಲ ಬಗ್ಗೆ ಚಿಂತೆ

ಇದಾದ ನಂತರ ತನ್ನ ಹೇಳಿಕೆಗೆ ಇಂದು ಬಿಜೆಪಿ ಸಂಸದೆ ಮತ್ತು ನಟಿ ಕಂಗನಾ ರಣಾವತ್ ಸಮರ್ಥನೆ ನೀಡಿದ್ದು, ನಾನೇನೂ ತಪ್ಪು ಹೇಳಿಕೆ ನೀಡಿಲ್ಲ. ನನ್ನ ಹೇಳಿಕೆಗಳು ವಿವಾದಾತ್ಮಕವಲ್ಲ. ಅದು ನನ್ನ ಅಭಿವ್ಯಕ್ತಿಯ ಮಾರ್ಗವಾಗಿತ್ತು ಎಂದು ಅವರು ಹೇಳಿದ್ದಾರೆ. “ನನ್ನ ಕೈಯಲ್ಲಿ ಏನಿದೆ ಮತ್ತು ಏನಿಲ್ಲ ಎಂಬುದರ ಬಗ್ಗೆ ನಾನು ಜನರಿಗೆ ವಾಸ್ತವವನ್ನು ಹೇಳಿದ್ದೇನೆ. ಒಬ್ಬ ಸಂಸದೆಯಾಗಿ, ನಾವು ನಮ್ಮ ಕಳವಳಗಳನ್ನು ಎತ್ತಬೇಕು ಮತ್ತು ಹಣವನ್ನು ತರಬೇಕು. ನನಗೆ ಒಂದು ಮಹತ್ವವಿದೆ. ನಮ್ಮ ಪಕ್ಷವು ಜನರ ಎಲ್ಲಾ ಅಗತ್ಯಗಳನ್ನು ಪೂರೈಸುತ್ತದೆ ಎಂದು ನಾನು ಜನರಿಗೆ ಹೇಳಿದ್ದೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಂಗನಾ ಮನೆಗೆ ಬಂತು 1 ಲಕ್ಷ ರೂಪಾಯಿ ಕರೆಂಟ್ ಬಿಲ್; ಶಾಕ್ ಆದ ನಟಿ

ಮಳೆ ಸಂಬಂಧಿತ ಘಟನೆಗಳಲ್ಲಿ ಇದುವರೆಗೆ 78 ಜನರು ಸಾವನ್ನಪ್ಪಿರುವ ಹಿಮಾಚಲ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನೀಡುವ ಬೇಡಿಕೆಯಿಟ್ಟು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯುವುದಾಗಿ ಕಂಗನಾ ರಣಾವತ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Mon, 7 July 25

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ