Nipah virus ತಮಿಳುನಾಡಿನಲ್ಲಿ ನಿಫಾ ವೈರಸ್ ಪ್ರಕರಣಗಳಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

ನಿಫಾ ವೈರಸ್ ಸೋಂಕಿನಿಂದ ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ 12 ವರ್ಷದ ಬಾಲಕನ ಸಾವಿನ ನಂತರ ಕೇರಳದಿಂದ ಬರುವ ಜನರನ್ನು ಪರೀಕ್ಷಿಸಲು ತಮಿಳುನಾಡು ಕ್ರಮಗಳನ್ನು ಹೆಚ್ಚಿಸುತ್ತಿದೆ.  ತಮಿಳುನಾಡಿಗೆ ಸಾಂಕ್ರಾಮಿಕ ರೋಗ ಹರಡದಂತೆ ನೋಡಿಕೊಳ್ಳುತ್ತಿದೆ.

Nipah virus ತಮಿಳುನಾಡಿನಲ್ಲಿ ನಿಫಾ ವೈರಸ್ ಪ್ರಕರಣಗಳಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 06, 2021 | 5:21 PM

ಚೆನ್ನೈ: ತಮಿಳುನಾಡಿನಲ್ಲಿ ನಿಫಾ ವೈರಸ್ (Nipah virus) ಪ್ರಕರಣಗಳಿಲ್ಲ ಎಂದು ರಾಜ್ಯ ಸರ್ಕಾರದ ಅಧಿಕಾರಿಗಳು ಹೇಳಿದ್ದಾರೆ. ತಮಿಳುನಾಡಿನಲ್ಲಿ ನಿಫಾ ಪ್ರಕರಣ ಪತ್ತೆಯಾಗಿದೆ ಎಂದು ಎಎನ್ಐ ವರದಿ ಮಾಡಿದ್ದು ಇದು ಸತ್ಯಕ್ಕೆ ದೂರವಾದುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿದ ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ಎಎನ್‌ಐ ಮಾಧ್ಯಮ ವರದಿ ತಪ್ಪು.ನೆರೆಯ ರಾಜ್ಯದಲ್ಲಿ ನಿಫಾ ವೈರಸ್ ನಿಂದಾಗಿ ಸಾವು ವರದಿಯಾದ ನಂತರ ಕೊಯಮತ್ತೂರು  ಜಿಲ್ಲಾಧಿಕಾರಿ ತಪಾಸಣೆಗಾಗಿ ಕೇರಳದ ಗಡಿಗೆ ಹೋಗಿದ್ದಾರೆ ಎಂದು ಹೇಳಿದರು.

“ಇದು ಸುಳ್ಳು ಸುದ್ದಿ.ಅವರು (ಮಾಧ್ಯಮ ಸಂಸ್ಥೆಗಳು) ಜವಾಬ್ದಾರರಾಗಿರಬೇಕು. ಕಲೆಕ್ಟರ್ ಕೇರಳದ ಗಡಿಗೆ ಹೋಗಿದ್ದರು, ಮತ್ತು ಕೇರಳದಲ್ಲಿ ಒಂದು ಪ್ರಕರಣವಿದೆ ಎಂದು ಹೇಳಿದರು. ಅದನ್ನು ತಿರುಚಲಾಗಿದೆ ಮತ್ತು ತಪ್ಪಾಗಿ ವರದಿ ಮಾಡಲಾಗಿದೆ. ಇದು ಸುಳ್ಳು “ಎಂದು ಆರೋಗ್ಯ ಕಾರ್ಯದರ್ಶಿ ಜೆ ರಾಧಾಕೃಷ್ಣನ್ ಟಿಎನ್ಎಂಗೆ ತಿಳಿಸಿದ್ದಾರೆ.

“ಜನರು ಕಾರ್ಯವಿಧಾನವನ್ನು ತಿಳಿದುಕೊಳ್ಳಬೇಕು” ಎಂದು ರಾಜ್ಯದ ಆರೋಗ್ಯ ಕಾರ್ಯದರ್ಶಿ ಹೇಳಿದರು. “ನಿಫಾ ಇಲ್ಲಿ ಇರುವುದದರೆ ನಾನು ಮೊದಲು ಗಿಂಡಿಯ ಕಿಂಗ್ ಇನ್‌ಸ್ಟಿಟ್ಯೂಟ್‌ನಿಂದ ಮಾದರಿಯನ್ನು ಪುಣೆಗೆ ಕಳುಹಿಸಬೇಕು. ಸರಿಯಾದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಕೊಯಮತ್ತೂರು ಜಿಲ್ಲಾಧಿಕಾರಿ ಗಡಿಗೆ ಭೇಟಿ ನೀಡಿದ್ದರು. ಅಲ್ಲಿ ಅವರು ಕ್ಯಾಲಿಕಟ್ (ಕೋಯಿಕ್ಕೋಡ್) ನಲ್ಲಿ ಒಂದು ಪ್ರಕರಣವಿದೆ ಎಂದು ಹೇಳಿದ್ದಾರೆ.

ಅದಲ್ಲದೆ ರೋಗಗಳ ಬಗ್ಗೆಪ್ರೋಟೋಕಾಲ್ ಅನ್ನು ಆರೋಗ್ಯ ಕಾರ್ಯದರ್ಶಿ ಅಥವಾ ಸಚಿವರು ಘೋಷಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್ಐ ಅಧಿಕೃತ ಹ್ಯಾಂಡಲ್ ನಿಫಾ ಪ್ರಕರಣವನ್ನು “ಜಿಲ್ಲೆಯಲ್ಲಿ” ಪತ್ತೆಹಚ್ಚಲಾಗಿದೆ ಎಂದು ತಪ್ಪಾಗಿ ವರದಿ ಮಾಡಿತ್ತು, ಆದರೂ ಇದು ಯಾವ ರಾಜ್ಯ ಮತ್ತು ಜಿಲ್ಲೆಯನ್ನು ಉಲ್ಲೇಖಿಸಿಲ್ಲ. ಕಲೆಕ್ಟರ್ ಮಾಧ್ಯಮದವರೊಂದಿಗೆ ಮಾತನಾಡುವ ವಿಡಿಯೊದಲ್ಲಿ ಅವರು ರಾಜ್ಯದಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ಮಾತನಾಡಿದ್ದಾರೆ.ತ್ತು ಕೇರಳ ಮತ್ತು ಕೊಯಮತ್ತೂರು ನಡುವೆ 13 ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನು ಸುದ್ದಿ ಸಂಸ್ಥೆ ತಪ್ಪಾಗಿ ಉಲ್ಲೇಖಿಸಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಕೊಯಮತ್ತೂರಿನಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ ಎಂದು ಇನ್ನೊಂದು ಇಂಗ್ಲಿಷ್ ಸುದ್ದಿ ಚಾನೆಲ್ ಟ್ವೀಟ್ ಮಾಡಿತ್ತು.

ನಿಫಾ ವೈರಸ್ ಸೋಂಕಿನಿಂದ ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ 12 ವರ್ಷದ ಬಾಲಕನ ಸಾವಿನ ನಂತರ ಕೇರಳದಿಂದ ಬರುವ ಜನರನ್ನು ಪರೀಕ್ಷಿಸಲು ತಮಿಳುನಾಡು ಕ್ರಮಗಳನ್ನು ಹೆಚ್ಚಿಸುತ್ತಿದೆ.  ತಮಿಳುನಾಡಿಗೆ ಸಾಂಕ್ರಾಮಿಕ ರೋಗ ಹರಡದಂತೆ ನೋಡಿಕೊಳ್ಳುತ್ತಿದೆ. ಕೇರಳದ ಗಡಿಯಲ್ಲಿರುವ ತಮಿಳುನಾಡಿನ ಒಂಬತ್ತು ಜಿಲ್ಲೆಗಳಲ್ಲಿ ಫಿವರ್ ಕ್ಲಿನಿಕ್ ಮತ್ತು ಸ್ಕ್ರೀನಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸಲಾಗಿದೆ. ಕನ್ಯಾಕುಮಾರಿ, ತಿರುನೆಲ್ವೇಲಿ, ತೆಂಕಾಶಿ, ವಿರುಧುನಗರ, ತೇನಿ, ದಿಂಡಿಗಲ್, ತಿರುಪ್ಪೂರು, ಕೊಯಮತ್ತೂರು ಮತ್ತು ನೀಲಗಿರೀಸ್ ಕೇರಳದ ಗಡಿ ಜಿಲ್ಲೆಗಳಾಗಿವೆ.

ಕೇರಳದಲ್ಲಿ ನಿಫಾ ವೈರಸ್ ಪ್ರಕರಣದ ಇತ್ತೀಚಿನ ಪ್ರಕರಣದಲ್ಲಿ ಇಬ್ಬರು ಆರೋಗ್ಯ ಕಾರ್ಯಕರ್ತರಲ್ಲಿ ರೋಗಲಕ್ಷಣ ಕಾಣಿಸಿಕೊಂಡಿದೆ. ನಿಫಾ ವೈರಸ್ ನಿಂದ 12 ವರ್ಷದ ಬಾಲಕ ಸಾವಿಗೀಡಾದ ನಂತರ ಇತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ.

ನಿಫಾ ವೈರಸ್ (NiV) ಏಕಾಏಕಿ ಮೊದಲು ಪಶ್ಚಿಮ ಬಂಗಾಳದಲ್ಲಿ 2001 ಮತ್ತು 2007 ರಲ್ಲಿ ವರದಿಯಾಗಿತ್ತು. ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ 2018ರಲ್ಲಿ ಕಾಣಿಸಿಕೊಳ್ಳುವ ಮೂಲಕ ಭಾರತದಲ್ಲಿ ಮೂರನೇ ಪ್ರಕರಣವಾಗಿತ್ತು. 2019 ರಲ್ಲಿ ಕೇರಳವು ಒಂದು ಎನ್ಐವಿ ಪ್ರಕರಣವನ್ನು ವರದಿ ಮಾಡಿದರೂ, ಯಾವುದೇ ಸಾವು ನೋವುಗಳು ಸಂಭವಿಸಿರಲಿಲ್ಲ.

ಇದನ್ನೂ ಓದಿ: Nipah Virus ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ನಿಫಾ: ರೋಗ ಲಕ್ಷಣಗಳೇನು? ತಡೆಯುವುದು ಹೇಗೆ?

(No cases of Nipah virus in Tamil Nadu state government officials debunked fake news)

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ