AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆಯಲ್ಲಿ ತಮಿಳುನಾಡಿನ ಪಾಲಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ; ಸ್ಟಾಲಿನ್ ಖಡಕ್ ಸಂದೇಶ

ಕೇಂದ್ರದ ಬಿಜೆಪಿ ಸರ್ಕಾರದೊಂದಿಗೆ ಡಿಎಂಕೆ ಹತ್ತಿರವಾಗುತ್ತಿದೆ ಎಂಬ ಆಡಳಿತಾರೂಢ ಟಿವಿಕೆ ಪಕ್ಷದ ಆರೋಪಗಳು ಮತ್ತು ಮಾಧ್ಯಮಗಳ ಊಹಾಪೋಹಗಳಿಗೆ ಸ್ಟಾಲಿನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. "ಮಾಧ್ಯಮಗಳಲ್ಲಿ ಹರಡಲಾಗುತ್ತಿರುವ ಊಹಾಪೋಹಗಳಾಗಲಿ ಅಥವಾ ಬೆನ್ನಿಗೆ ಚೂರಿ ಹಾಕುವವರ ಗೋಳಾಟವಾಗಲಿ ನಮ್ಮ ಸಂಕಲ್ಪವನ್ನು ಅಲುಗಾಡಿಸಲು ಸಾಧ್ಯವಿಲ್ಲ. ಅಧಿಕಾರದ ಸ್ಥಾನಗಳಿಗಾಗಿ ತಮ್ಮ ತತ್ವಗಳನ್ನು ತ್ಯಜಿಸಿದ ನಾಚಿಕೆಗೇಡಿನ ಮತ್ತು ಕೃತಘ್ನ ಗುಂಪು ಇದನ್ನು ಅರ್ಥಮಾಡಿಕೊಳ್ಳಬೇಕು" ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆಯಲ್ಲಿ ತಮಿಳುನಾಡಿನ ಪಾಲಿನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ; ಸ್ಟಾಲಿನ್ ಖಡಕ್ ಸಂದೇಶ
ಎಂ.ಕೆ. ಸ್ಟಾಲಿನ್Image Credit source: PTI
ಸುಷ್ಮಾ ಚಕ್ರೆ
|

Updated on: Nov 27, 2026 | 3:18 PM

Share

ಚೆನ್ನೈ, ನವೆಂಬರ್ 27: ನವೆಂಬರ್ 30ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಕ್ಷೇತ್ರ ಪುನರ್​ ವಿಂಗಡಣೆ ವಿಧೇಯಕ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇಂದು ತಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಲೋಕಸಭೆಯಲ್ಲಿ ತಮಿಳುನಾಡಿನ ಸ್ಥಾನಗಳ ಹಾಲಿ ಪಾಲಿನ ವಿಚಾರದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ ಎಂದು ಅವರು ಘೋಷಿಸಿದ್ದಾರೆ.

ತಮಿಳುನಾಡಿನ ಶೇ. 7.18ರಷ್ಟು ಸ್ಥಾನಗಳ ಪಾಲನ್ನು ಉಳಿಸಿಕೊಳ್ಳುವ ಭರವಸೆ ಸಿಕ್ಕರೆ ಡಿಎಂಕೆ ಪಕ್ಷವು ಕ್ಷೇತ್ರ ಪುನರ್ ವಿಂಗಡಣೆ ವಿಧೇಯಕವನ್ನು ಬೆಂಬಲಿಸಬಹುದು ಎಂಬ ವರದಿಗಳು ಮಾಧ್ಯಮಗಳಲ್ಲಿ ಹರಿದಾಡಿದ್ದವು. ಇದಕ್ಕೆ ಪ್ರತಿಕ್ರಿಯಿಸಿರುವ ಸ್ಟಾಲಿನ್, “ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ, ರಾಜಿಯ ಪ್ರಶ್ನೆಯೇ ಇಲ್ಲ! ಮಾಧ್ಯಮಗಳಲ್ಲಿ ಹರಡಲಾಗುತ್ತಿರುವ ಊಹಾಪೋಹಗಳಾಗಲಿ ಅಥವಾ ಬೆನ್ನಿಗೆ ಚೂರಿ ಹಾಕುವವರ ಗೋಳಾಟವಾಗಲಿ ನಮ್ಮ ಸಂಕಲ್ಪವನ್ನು ಅಲುಗಾಡಿಸಲು ಸಾಧ್ಯವಿಲ್ಲ” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕ್ಷೇತ್ರ ಮರುವಿಂಗಡಣೆಗೆ ಕೇಂದ್ರದ ಹೊಸ ಸೂತ್ರ: ಲೋಕಸಭೆಯಲ್ಲಿ ಶೇ.50ರಷ್ಟು ಸ್ಥಾನ ಹೆಚ್ಚಳಕ್ಕೆ ಕೇಂದ್ರ ಅಸ್ತು, 2051ರವರೆಗೆ ಈ ಹೊಸ ನಿಯಮ

ಡಿಎಂಕೆ ಮುಂದಿಟ್ಟಿರುವ 2 ಪ್ರಮುಖ ಷರತ್ತುಗಳು:

ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಎಂ.ಕೆ ಸ್ಟಾಲಿನ್, ಕ್ಷೇತ್ರ ಪುನರ್ ವಿಂಗಡಣೆ ವಿಧೇಯಕಕ್ಕೆ ಡಿಎಂಕೆ ಬೆಂಬಲ ನೀಡಬೇಕಾದರೆ 2 ಪ್ರಮುಖ ಬೇಡಿಕೆಗಳು ಈಡೇರಬೇಕು ಎಂದು ಸ್ಪಷ್ಟಪಡಿಸಿದ್ದಾರೆ.

  1. ಸಂಸದೀಯ ಕ್ಷೇತ್ರಗಳ ಸಂಖ್ಯೆಯನ್ನು ಹೆಚ್ಚಿಸಿದರೂ ಸಹ, ಲೋಕಸಭೆಯಲ್ಲಿ ತಮಿಳುನಾಡಿನ ಹಾಲಿ ಶೇ. 7.18ರಷ್ಟು ಸ್ಥಾನಗಳ ಪಾಲು (ಒಟ್ಟು 543 ಸ್ಥಾನಗಳಲ್ಲಿ 39 ಸ್ಥಾನಗಳು) ಯಾವುದೇ ಕಾರಣಕ್ಕೂ ಕಡಿಮೆಯಾಗಬಾರದು.
  2. 1971ರ ಜನಗಣತಿಯ ಆಧಾರದ ಮೇಲೆ ನಿರ್ಧರಿಸಲಾಗಿರುವ ರಾಜ್ಯಗಳ ನಡುವಿನ ಹಾಲಿ ಪ್ರಾತಿನಿಧ್ಯದ ಅನುಪಾತವನ್ನು ಮುಂದಿನ 25 ವರ್ಷಗಳ ಕಾಲ ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂಬುದು ಸ್ಟಾಲಿನ್ ಷರತ್ತಾಗಿದೆ.

ಕ್ಷೇತ್ರ ಪುನರ್ ವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಆಗಬಹುದಾದ ಅನ್ಯಾಯ ಮತ್ತು ಅಪಾಯಗಳ ವಿರುದ್ಧ ದೇಶದಲ್ಲೇ ಮೊದಲ ಬಾರಿಗೆ ಧ್ವನಿ ಎತ್ತಿದ್ದು ಡಿಎಂಕೆ ಎಂದು ಸ್ಟಾಲಿನ್ ನೆನಪಿಸಿದ್ದಾರೆ. 2024ರ ತಮಿಳುನಾಡು ವಿಧಾನಸಭೆ ನಿರ್ಣಯ ಮತ್ತು 2025ರ ಮಾರ್ಚ್‌ನಲ್ಲಿ ಚೆನ್ನೈನಲ್ಲಿ ನಡೆದ ರಾಷ್ಟ್ರೀಯ ನಾಯಕರ ಸಮಾವೇಶವನ್ನು ಉಲ್ಲೇಖಿಸಿದ ಅವರು, ತಮಿಳುನಾಡಿನ ಹಿತಾಸಕ್ತಿಯನ್ನು ಡಿಎಂಕೆ ಎಂದಿಗೂ ಬಿಟ್ಟುಕೊಡುವುದಿಲ್ಲ ಎಂದಿದ್ದಾರೆ.

ನಾಳೆ ಡಿಎಂಕೆ ಸಂಸದರ ಸಭೆ:

ನವೆಂಬರ್ 30ರಂದು ಆರಂಭವಾಗುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಕುರಿತು ಚರ್ಚಿಸಲು ಎಂ.ಕೆ. ಸ್ಟಾಲಿನ್ ನಾಳೆ (ನವೆಂಬರ್ 28) ಚೆನ್ನೈನಲ್ಲಿ ಪಕ್ಷದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರ ಮಹತ್ವದ ಸಭೆಯನ್ನು ಕರೆದಿದ್ದಾರೆ.

ಇದನ್ನೂ ಓದಿ: ಸಂಸತ್ ಅಧಿವೇಶನ ಪುನರಾರಂಭ; ನವೆಂಬರ್ 30ರಿಂದ ಲೋಕಸಭೆ, ಡಿಸೆಂಬರ್ 2ಕ್ಕೆ ರಾಜ್ಯಸಭೆ ಕಲಾಪ ಶುರು 

ಕಳೆದ ಏಪ್ರಿಲ್‌ನಲ್ಲಿ ಮಂಡನೆಯಾಗಿದ್ದ ಸಂವಿಧಾನ ತಿದ್ದುಪಡಿ ವಿಧೇಯಕವು ಲೋಕಸಭೆಯಲ್ಲಿ ಮೂರನೇ ಎರಡರಷ್ಟು ಬಹುಮತ ಪಡೆಯಲು ವಿಫಲವಾಗಿತ್ತು. ಈ ಬಾರಿ ಎಲ್ಲಾ ರಾಜ್ಯಗಳ ಸ್ಥಾನಗಳನ್ನು ಏಕರೂಪವಾಗಿ ಶೇ. 50ರಷ್ಟು ಹೆಚ್ಚಿಸುವ ಭರವಸೆಯನ್ನು ಕೇಂದ್ರ ಸರ್ಕಾರ ನೀಡುತ್ತಿರುವ ಹಿನ್ನೆಲೆಯಲ್ಲಿ, ಲೋಕಸಭೆಯಲ್ಲಿ 22 ಸಂಸದರನ್ನು ಹೊಂದಿರುವ ಡಿಎಂಕೆ ಮತ್ತು 8 ಸಂಸದರನ್ನು ಹೊಂದಿರುವ ಎನ್‌ಸಿಪಿ (ಶರದ್ ಪವಾರ್ ಬಣ) ಷರತ್ತುಬದ್ಧ ಬೆಂಬಲ ನೀಡಬಹುದು ಎಂದು ಬಿಜೆಪಿ ನಾಯಕರು ನಿರೀಕ್ಷಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
‘ಮಿಸ್ಟರ್ ಜ್ಯಾಕ್’ ಚಿತ್ರದ ಮೂಲಕ ಬರಲು ರೆಡಿ ಆದ ತಪಸ್ವಿನಿ
‘ಮಿಸ್ಟರ್ ಜ್ಯಾಕ್’ ಚಿತ್ರದ ಮೂಲಕ ಬರಲು ರೆಡಿ ಆದ ತಪಸ್ವಿನಿ
ಆಶ್ರಯ ಯೋಜನೆ ಭೂ ವಿವಾದಕ್ಕೆ ಯುವಕ ಬಲಿ, ಮಾಜಿ ಪಂಚಾಯಿತಿ ಸದಸ್ಯನ ಬಂಧನ
ಆಶ್ರಯ ಯೋಜನೆ ಭೂ ವಿವಾದಕ್ಕೆ ಯುವಕ ಬಲಿ, ಮಾಜಿ ಪಂಚಾಯಿತಿ ಸದಸ್ಯನ ಬಂಧನ
ಕೊಲೆ ಬೆದರಿಕೆ ನಡುವೆಯೂ ಪ್ರೇಮ ವಿವಾಹ; ಜೋಡಿಗೆ ರಕ್ಷಣೆ ನೀಡಿದ ಪೊಲೀಸರು
ಕೊಲೆ ಬೆದರಿಕೆ ನಡುವೆಯೂ ಪ್ರೇಮ ವಿವಾಹ; ಜೋಡಿಗೆ ರಕ್ಷಣೆ ನೀಡಿದ ಪೊಲೀಸರು
ಡಿಕೆಶಿ- ಆನಂದ್ ಸಿಂಗ್ ಪ್ರತ್ಯೇಕ ಚರ್ಚೆ: ಕುತೂಹಲ ಮೂಡಿಸಿದ ನಡೆ
ಡಿಕೆಶಿ- ಆನಂದ್ ಸಿಂಗ್ ಪ್ರತ್ಯೇಕ ಚರ್ಚೆ: ಕುತೂಹಲ ಮೂಡಿಸಿದ ನಡೆ
ಆಸ್ತಿ ವಿವಾದಕ್ಕೆ ಅತ್ತೆ, ಅಳಿಯನ ಕೊಲೆ; ಕೊಡಲಿಯಿಂದ ಕೊಚ್ಚಿ ಡಬಲ್ ಮರ್ಡರ್!
ಆಸ್ತಿ ವಿವಾದಕ್ಕೆ ಅತ್ತೆ, ಅಳಿಯನ ಕೊಲೆ; ಕೊಡಲಿಯಿಂದ ಕೊಚ್ಚಿ ಡಬಲ್ ಮರ್ಡರ್!
ಮಷಿನ್​ಗಳಿದ್ರೂ ಆಪರೇಟರ್ಸ್ ಇಲ್ಲ; ಖಾಸಗಿ ಲ್ಯಾಬ್ ಜೊತೆ ಶಾಮಿಲಾದ್ರ ಸರ್ಕಾರಿ
ಮಷಿನ್​ಗಳಿದ್ರೂ ಆಪರೇಟರ್ಸ್ ಇಲ್ಲ; ಖಾಸಗಿ ಲ್ಯಾಬ್ ಜೊತೆ ಶಾಮಿಲಾದ್ರ ಸರ್ಕಾರಿ
ಸಿಎಂ ಡಿಕೆಶಿ ಸದಾಶಿವನಗರದ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ
ಸಿಎಂ ಡಿಕೆಶಿ ಸದಾಶಿವನಗರದ ಮನೆ, ವಿಧಾನಸೌಧಕ್ಕೆ ಬಾಂಬ್ ಬೆದರಿಕೆ
ಮಂಡ್ಯ ಮಿಮ್ಸ್ ಫಲಕದಲ್ಲಿ ಮೋದಿ, ಹೆಚ್‌ಡಿಕೆ ಫೋಟೋ ಮರೆಮಾಚಿದ ಸಿಬ್ಬಂದಿ
ಮಂಡ್ಯ ಮಿಮ್ಸ್ ಫಲಕದಲ್ಲಿ ಮೋದಿ, ಹೆಚ್‌ಡಿಕೆ ಫೋಟೋ ಮರೆಮಾಚಿದ ಸಿಬ್ಬಂದಿ
ಮಧ್ಯರಾತ್ರಿಯಲ್ಲೂ ರೇಷನ್ ಅಂಗಡಿ ಮುಂದೆ ಕ್ಯೂ ನಿಂತ ಗ್ರಾಮಸ್ಥರು
ಮಧ್ಯರಾತ್ರಿಯಲ್ಲೂ ರೇಷನ್ ಅಂಗಡಿ ಮುಂದೆ ಕ್ಯೂ ನಿಂತ ಗ್ರಾಮಸ್ಥರು
ಉಡುಪಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚಳ: ಹಿರಿಯ ನಾಗರಿಕರೇ ಟಾರ್ಗೆಟ್
ಉಡುಪಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚಳ: ಹಿರಿಯ ನಾಗರಿಕರೇ ಟಾರ್ಗೆಟ್