AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವಿಚಾರಣೆಯವರೆಗೆ ವಕ್ಫ್​ ಕಾಯ್ದೆಯಲ್ಲಿ ಬದಲಾವಣೆ ಮಾಡುವಂತಿಲ್ಲ; ಸುಪ್ರೀಂ ಕೋರ್ಟ್

ವಕ್ಫ್ ತಿದ್ದುಪಡಿ ಕಾಯ್ದೆಯಡಿ ಯಾವುದೇ ನೇಮಕಾತಿ ಮಾಡುವಂತಿಲ್ಲ. ಕೇಂದ್ರ ಸರಕಾರ 7 ದಿನದಲ್ಲಿ ಪ್ರತಿಕ್ರಿಯೆ ನೀಡಬೇಕು. ಹೊಸ ನೇಮಕಾತಿ ಮಾಡದಂತೆ ಕೇಂದ್ರ ಸರ್ಕಾರ ಭರವಸೆ ನೀಡಬೇಕು. ವಕ್ಫ್ ಆಸ್ತಿಗಳ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ. ವಕ್ಫ್ ತಿದ್ದುಪಡಿ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್​ ನಡೆಸಿದೆ. ಸಿಜೆಐ ಸಂಜೀವ್ ಖನ್ನಾ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಾಗಿದೆ. ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲ ಭಾಗಗಳಿಗೆ ತಡೆ ನೀಡುವುದು ಬೇಡ. ಈ ನಡೆ ಕಠಿಣ ಹೆಜ್ಜೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದೆ.

ಮುಂದಿನ ವಿಚಾರಣೆಯವರೆಗೆ ವಕ್ಫ್​ ಕಾಯ್ದೆಯಲ್ಲಿ ಬದಲಾವಣೆ ಮಾಡುವಂತಿಲ್ಲ; ಸುಪ್ರೀಂ ಕೋರ್ಟ್
ಸುಪ್ರೀಂಕೋರ್ಟ್
Follow us
ಸುಷ್ಮಾ ಚಕ್ರೆ
|

Updated on:Apr 17, 2025 | 4:26 PM

ನವದೆಹಲಿ, ಏಪ್ರಿಲ್ 17: ವಕ್ಫ್ ಮಂಡಳಿಗಳಿಗೆ ಯಾವುದೇ ನೇಮಕಾತಿಗಳನ್ನು ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿತು. ವಕ್ಫ್ ಮಂಡಳಿಯಲ್ಲಿ (Waqf Board) ಮುಸ್ಲಿಮೇತರರನ್ನು ಸೇರಿಸುವುದು ಮುಂತಾದ ವಿವಾದಾತ್ಮಕ ವಕ್ಫ್ ಕಾನೂನಿನ ಕೆಲವು ಭಾಗಗಳ ಕಾರ್ಯಾಚರಣೆಯನ್ನು ಸುಪ್ರೀಂ ಕೋರ್ಟ್ (Supreme Court) ಮೇ 5ರ ಮುಂದಿನ ವಿಚಾರಣೆಯ ದಿನಾಂಕದವರೆಗೆ ತಡೆಹಿಡಿದಿದೆ. ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠವು ಅಲ್ಲಿಯವರೆಗೆ ‘ಬಳಕೆದಾರರಿಂದ ವಕ್ಫ್’ ನಿಬಂಧನೆಯನ್ನು ಡಿನೋಟಿಫೈ ಮಾಡಬಾರದು ಎಂದು ಹೇಳಿದೆ. ಹಾಗೇ, ಸಂಬಂಧಿತ ದಾಖಲೆಗಳೊಂದಿಗೆ ಪ್ರಾಥಮಿಕ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರಕ್ಕೆ 7 ದಿನಗಳ ಗಡುವು ನೀಡಲಾಗಿದೆ.

ಮುಂದಿನ ವಿಚಾರಣೆಯಿಂದ ಕೇವಲ 5 ರಿಟ್ ಅರ್ಜಿದಾರರು ಮಾತ್ರ ನ್ಯಾಯಾಲಯದಲ್ಲಿ ಹಾಜರಾಗಲಿದ್ದಾರೆ ಎಂದು ಸಿಜೆಐ ಆದೇಶದಲ್ಲಿ ತಿಳಿಸಿದ್ದಾರೆ. ಇದಕ್ಕೂ ಮೊದಲು, ಸುಪ್ರೀಂ ಕೋರ್ಟ್ ವಕ್ಫ್ ಕಾಯ್ದೆಯ ಕುರಿತು ಕೇಂದ್ರ ಸರ್ಕಾರಕ್ಕೆ 7 ದಿನಗಳ ಕಾಲಾವಕಾಶ ನೀಡಿದೆ. ಕೇಂದ್ರದ ಪ್ರತಿಕ್ರಿಯೆ ಬರುವವರೆಗೂ ವಕ್ಫ್ ಆಸ್ತಿಯ ಸ್ಥಿತಿ ಬದಲಾಗುವುದಿಲ್ಲ. ಅಂದರೆ ಸರ್ಕಾರ ಪ್ರತಿಕ್ರಿಯಿಸುವವರೆಗೆ ಯಥಾಸ್ಥಿತಿ ಮುಂದುವರಿಯುತ್ತದೆ ಮತ್ತು ಮುಂದಿನ ಆದೇಶದವರೆಗೆ ಹೊಸ ಕಾನೂನಿನಡಿಯಲ್ಲಿ ಯಾವುದೇ ಹೊಸ ನೇಮಕಾತಿಗಳನ್ನು ಮಾಡುವಂತಿಲ್ಲ.

ಇದನ್ನೂ ಓದಿ: ಬಂಗಾಳದಲ್ಲಿ ಹಿಂಸಾಚಾರಕ್ಕೆ ತಿರುಗಿದ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ

ಇದನ್ನೂ ಓದಿ
Image
ರಾಜ್ಯಸಭೆಯಲ್ಲಿ ಅಸಂಸದೀಯ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ಮುಂದಿನ ದಿನಾಂಕದವರೆಗೆ, 2025ರ ಕಾಯ್ದೆಯಡಿಯಲ್ಲಿ ವಕ್ಫ್ ಮಂಡಳಿಗೆ ಯಾವುದೇ ನೇಮಕಾತಿ ನಡೆಯುವುದಿಲ್ಲ ಎಂದು ಎಸ್‌ಜಿ ತುಷಾರ್ ಮೆಹ್ತಾ ಭರವಸೆ ನೀಡಿದರು. ಏಪ್ರಿಲ್ 8ರಂದು ಜಾರಿಗೆ ಬಂದ ಈ ಕಾನೂನು, ‘ಬಳಕೆದಾರರಿಂದ ವಕ್ಫ್’ ನಿಬಂಧನೆಯನ್ನು ತೆಗೆದುಹಾಕುತ್ತದೆ. ಇದು ಔಪಚಾರಿಕ ದಾಖಲೆಗಳಿಲ್ಲದೆಯೂ ಸಹ ಧಾರ್ಮಿಕ ಅಥವಾ ದತ್ತಿ ಉದ್ದೇಶಗಳಿಗಾಗಿ ಆಸ್ತಿಯನ್ನು ದೀರ್ಘಕಾಲೀನ ಬಳಕೆಯ ಆಧಾರದ ಮೇಲೆ ವಕ್ಫ್ ಎಂದು ಪರಿಗಣಿಸಲು ಅನುವು ಮಾಡಿಕೊಡುತ್ತದೆ.

ವಕ್ಫ್ ತಿದ್ದುಪಡಿ ಕಾಯ್ದೆಯ ಬಗ್ಗೆ ಸುಪ್ರೀಂ ಕೋರ್ಟ್‌ನ ಕಠಿಣ ನಿಲುವಿನ ನಂತರ, ಕೇಂದ್ರ ಸರ್ಕಾರವು ವಕ್ಫ್ ಕೌನ್ಸಿಲ್ ಮತ್ತು ಮಂಡಳಿಯಲ್ಲಿ ಸೆಕ್ಷನ್ 9 ಮತ್ತು 14ರ ಅಡಿಯಲ್ಲಿ ಯಾವುದೇ ನೇಮಕಾತಿಯನ್ನು ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿತು. ಮುಂದಿನ ವಿಚಾರಣೆಯ ದಿನಾಂಕದವರೆಗೆ ಬಳಕೆದಾರರಿಂದ ವಕ್ಫ್ ಅನ್ನು ಡಿನೋಟಿಫೈ ಮಾಡುವುದಿಲ್ಲ ಅಥವಾ ಕಲೆಕ್ಟರ್ ಅನ್ನು ಬದಲಾಯಿಸುವುದಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ನಿಮ್ಮ ಪಕ್ಷದ ಮುಖ್ಯಸ್ಥರನ್ನಾಗಿ ಮುಸ್ಲಿಂ ನಾಯಕರನ್ನು ನೇಮಿಸಿ; ವಕ್ಫ್ ಕಾಯ್ದೆ ಬಗ್ಗೆ ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಸವಾಲು

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರತಿನಿಧಿಸುವ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಸಲ್ಲಿಸಲು 7 ದಿನಗಳ ಕಾಲಾವಕಾಶವನ್ನು ಕೋರಿತು. ಅದರ ನಂತರ 5 ದಿನಗಳಲ್ಲಿ ಅರ್ಜಿದಾರರು ತಮ್ಮ ಪ್ರತಿವಾದವನ್ನು ಸಲ್ಲಿಸಲು ನ್ಯಾಯಾಲಯ ಅವಕಾಶ ನೀಡಿತು.

ವಕ್ಫ್ ಕಾನೂನು ದೇಶಾದ್ಯಂತ ಭಾರಿ ಪ್ರತಿಭಟನೆಗಳನ್ನು ಹುಟ್ಟುಹಾಕಿದೆ, ಕಳೆದ ವಾರ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೆದ್ದಿತು. ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಏಪ್ರಿಲ್ 4ರಂದು ಸಂಸತ್ತು ಅಂಗೀಕರಿಸಿತು. ಮರುದಿನ ಏಪ್ರಿಲ್ 5ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿತು. ನಂತರ ಕೇಂದ್ರ ಸರ್ಕಾರವು ಕಾಯ್ದೆಯನ್ನು ಜಾರಿಗೊಳಿಸುವ ಅಧಿಸೂಚನೆಯನ್ನು ಹೊರಡಿಸಿತು. ಅದು ಏಪ್ರಿಲ್ 8ರಿಂದ ಜಾರಿಗೆ ಬಂದಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:55 pm, Thu, 17 April 25