ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶಕ್ಕೆ ಯಾರು ಸಿಎಂ?; ನಾಳೆ ವೀಕ್ಷಕರನ್ನು ನೇಮಕ ಮಾಡಲಿದೆ ಬಿಜೆಪಿ

ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದ ಮೂರು ರಾಜ್ಯಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ ಯಾರನ್ನು ಆಯ್ಕೆ ಮಾಡುವುದು ಎಂಬುದರ ಬಗ್ಗೆ ಬಿಜೆಪಿ ಇನ್ನೂ ಒಮ್ಮತಕ್ಕೆ ಬಂದಿಲ್ಲ. ಮುಖ್ಯಮಂತ್ರಿಗಳ ಆಯ್ಕೆಗಾಗಿ ಪಕ್ಷವು ನಾಳೆ (ಶುಕ್ರವಾರ) ವೀಕ್ಷಕರನ್ನು ನೇಮಕ ಮಾಡಲಿದೆ ಎಂದು ಮೂಲಗಳು ಹೇಳಿವೆ.

ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶಕ್ಕೆ ಯಾರು ಸಿಎಂ?; ನಾಳೆ ವೀಕ್ಷಕರನ್ನು ನೇಮಕ ಮಾಡಲಿದೆ ಬಿಜೆಪಿ
ಬಿಜೆಪಿ
Follow us
ರಶ್ಮಿ ಕಲ್ಲಕಟ್ಟ
|

Updated on: Dec 07, 2023 | 8:39 PM

ದೆಹಲಿ ಡಿಸೆಂಬರ್ 07 : ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ (Assembly Election 2023) ಬಿಜೆಪಿ (BJP) ಜಯಗಳಿಸಿದ ಮೂರು ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಲು (Chief Minister) ಅಂತಿಮ ಹೆಸರುಗಳನ್ನು ಆಯ್ಕೆ ಮಾಡುವ ಕಾರ್ಯವನ್ನು ಬಿಜೆಪಿ ಇನ್ನೂ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಅಂತಿಮವಾಗಿ ಹೆಸರುಗಳನ್ನು ಆಯ್ಕೆ ಮಾಡಲು ಪಕ್ಷವು ನಾಳೆ (ಶುಕ್ರವಾರ) ಮೂರು ರಾಜ್ಯಗಳಿಗೆ ವೀಕ್ಷಕರನ್ನು ನೇಮಿಸುತ್ತದೆ ಎಂದು ಮೂಲಗಳು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ.

ರಾಜಸ್ಥಾನ, ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದ ಮೂರು ರಾಜ್ಯಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ ಸಂಭಾವ್ಯರ ಪಟ್ಟಿಯಲ್ಲಿ ಬೆರಳೆಣಿಕೆಯ ಹೆಸರುಗಳಿವೆ ಎಂದು ಹೇಳಲಾಗಿದೆ. ಬಿಜೆಪಿ ಯಾವುದೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಹೆಸರಿಸದೆ ಚುನಾವಣಾ ಕಣಕ್ಕಿಳಿದಿತ್ತು. ವೀಕ್ಷಕರು ಮೂರು ರಾಜ್ಯಗಳಲ್ಲಿ ಹೊಸದಾಗಿ ಚುನಾಯಿತ ಶಾಸಕರ ಸಭೆಗಳನ್ನು ಮೇಲ್ವಿಚಾರಣೆ ಮಾಡುವ ಸಾಧ್ಯತೆಯಿದೆ, ಅಲ್ಲಿ ಅವರು ತಮ್ಮ ನಾಯಕರನ್ನು ಆಯ್ಕೆ ಮಾಡುತ್ತಾರೆ. ಬಿಜೆಪಿಯೊಳಗಿನ ಅನೇಕರು ಮೂರು ರಾಜ್ಯಗಳಲ್ಲಿ ಪಡೆದಿರುವ ಬೃಹತ್ ಜನಾದೇಶವನ್ನು ಅದರ ನೀತಿಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ವ್ಯಾಪಕವಾದ ಜನಬೆಂಬಲದ ಬಲವಾದ ಹೇಳಿಕೆಯಾಗಿ ನೋಡುತ್ತಾರೆ.

ಶಿವರಾಜ್ ಸಿಂಗ್ ಚೌಹಾಣ್ ಮಧ್ಯಪ್ರದೇಶದಲ್ಲಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಪಕ್ಷದ ಗೆಲುವಿನ ನಂತರ ಪ್ರಬಲ ಸ್ಪರ್ಧಿಯಾಗಿ ಉಳಿದಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ನರೇಂದ್ರ ಸಿಂಗ್ ತೋಮರ್ ಕೂಡ ಸಂಭಾವ್ಯರೆಂದು ಪರಿಗಣಿಸಲಾಗಿದೆ.

ಛತ್ತೀಸ್‌ಗಢದಲ್ಲಿ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್, ರಾಜ್ಯ ಬಿಜೆಪಿ ಅಧ್ಯಕ್ಷ ಅರುಣ್ ಕುಮಾರ್ ಸಾವೊ, ವಿರೋಧ ಪಕ್ಷದ ನಾಯಕ ಧರ್ಮಲಾಲ್ ಕೌಶಿಕ್ ಮತ್ತು ಮಾಜಿ ಐಎಎಸ್ ಅಧಿಕಾರಿ ಒಪಿ ಚೌಧರಿ ಅವರನ್ನು ರಾಜಕೀಯ ವಿಶ್ಲೇಷಕರು ಸ್ಪರ್ಧಿಗಳಾಗಿ ನೋಡಿದ್ದಾರೆ. ಸಿಂಗ್ ಹೊರತುಪಡಿಸಿ, ಎಲ್ಲಾ ಮೂರು ನಾಯಕರು ಇತರ ಹಿಂದುಳಿದ ವರ್ಗಗಳಿಂದ (OBC) ಬಂದವರು. ಆದಾಗ್ಯೂ, ಬಿಜೆಪಿ ನಾಯಕತ್ವವು ಈ ಹಿಂದೆ ತನ್ನ ಮುಖ್ಯಮಂತ್ರಿ ಆಯ್ಕೆಯೊಂದಿಗೆ ವೀಕ್ಷಕರನ್ನು ಆಶ್ಚರ್ಯಗೊಳಿಸಿದೆ.

ಇದನ್ನೂ ಓದಿ: 40% ಕಮಿಷನ್​​ ಆರೋಪ ಕೇಸ್​: ಬಿಜೆಪಿ, ಕಾಂಗ್ರೆಸ್​ ಸರ್ಕಾರದ ವಿರುದ್ಧ ದಾಖಲೆ ಸಲ್ಲಿಸಿದ ಕೆಂಪಣ್ಣ

ರಾಜಸ್ಥಾನದಲ್ಲಿ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಉನ್ನತ ಹುದ್ದೆಯ ಆಕಾಂಕ್ಷಿಗಳಲ್ಲಿ ಒಬ್ಬರಾಗಿದ್ದಾರೆ. ಸುಮಾರು 25 ಬಿಜೆಪಿ ಶಾಸಕರು ಸೋಮವಾರ ಅವರನ್ನು ಭೇಟಿಯಾಗಿದ್ದು ಅದು ಅವರಿಗೆ ಬೆಂಬಲ ಮತ್ತು ಶಕ್ತಿ ಪ್ರದರ್ಶನವಾಗಿ ಕಂಡುಬಂದಿದೆ. ಶಾಸಕರು ಇದೊಂದು ಸೌಜನ್ಯದ ಭೇಟಿ ಎಂದು ಹೇಳಿದ್ದರೂ, ಪಕ್ಷದ ನಾಯಕತ್ವವು ರಾಜೇ ಅವರನ್ನು ಉನ್ನತ ಹುದ್ದೆಗೆ ಆಯ್ಕೆ ಮಾಡಿದರೆ ತಾವು ಬೆಂಬಲಿಸುವುದಾಗಿ ಹೇಳಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ