
ನವದೆಹಲಿ, ಅಕ್ಟೋಬರ್ 3: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕಿಡ್ನಿ ಸಂಬಂಧಿತ (Kidney Failure) ತೊಂದರೆಗಳಿಂದಾಗಿ 11 ಮಕ್ಕಳು ಸಾವನ್ನಪ್ಪಿದ್ದರು. ಕೆಮ್ಮಿನ ಸಿರಪ್ (Cough Syrup) ಸೇವಿಸಿದ್ದರಿಂದಲೇ ಅವರು ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ (Central Government) 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬಾರದು ಎಂದು ಶಿಫಾರಸು ಮಾಡಿದೆ.
ಕೇಂದ್ರ ಸರ್ಕಾರವು ಇಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಕ್ಕಳಿಗೆ ತೀರಾ ಅಗತ್ಯವಿದ್ದರೆ ಮಾತ್ರ ಕೆಮ್ಮಿನ ಸಿರಪ್ ನೀಡಲು ಸೂಚಿಸಿದೆ. ಕೆಮ್ಮಿನ ಸಿರಪ್ ಮಾದರಿಗಳ ಪರೀಕ್ಷೆಗಳು “ಡೈಥಿಲೀನ್ ಗ್ಲೈಕಾಲ್ (DEG) ಅಥವಾ ಎಥಿಲೀನ್ ಗ್ಲೈಕಾಲ್ (EG)” ಅನ್ನು ಒಳಗೊಂಡಿಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇದು ಗಂಭೀರವಾದ ಕಿಡ್ನಿ ಸಮಸ್ಯೆಯನ್ನು ಉಂಟುಮಾಡುವ ಮಾಲಿನ್ಯಕಾರಕಗಳನ್ನು ಹೊಂದಿರುತ್ತದೆ.
ಇದನ್ನೂ ಓದಿ: ಮೋಡಕವಿದ ವಾತಾವರಣ, ಜಿಟಿ ಜಿಟಿ ಮಳೆ ಜೊತೆ ಶೀತಗಾಳಿ: ಜನರಲ್ಲಿ ಶುರುವಾಯ್ತು ಆರೋಗ್ಯ ಸಮಸ್ಯೆಗಳು
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇಲ್ಲಿಯವರೆಗೆ 11 ಮಕ್ಕಳು ಕೆಮ್ಮಿನ ಸಿರಪ್ ಸೇವಿಸಿದ ಮೇಲೆ ಸಾವನ್ನಪ್ಪಿದ್ದಾರೆ. ಇದು ತೀವ್ರ ಕಳವಳವನ್ನುಂಟುಮಾಡಿದೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಶೀತ, ಕೆಮ್ಮು ಔಷಧಿಗಳನ್ನು ಸೇವಿಸಿದ ಕೆಲವು ದಿನಗಳ ನಂತರ ಮಕ್ಕಳು ಮೂತ್ರಪಿಂಡದ ಸಮಸ್ಯೆಗಳನ್ನು ಅನುಭವಿಸಿದ್ದರು.
ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆರೋಗ್ಯ ಸೇವೆಗಳ ಮಹಾನಿರ್ದೇಶಕರು (DGHS) ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಕ್ಕಳ ಜನಸಂಖ್ಯೆಯಲ್ಲಿ ಕೆಮ್ಮಿನ ಸಿರಪ್‌ಗಳ ಕಡಿಮೆ ಬಳಕೆಯ ಕುರಿತು ಸಲಹೆಯನ್ನು ನೀಡಿದ್ದಾರೆ.
ಇದನ್ನೂ ಓದಿ: ಕೆಮ್ಮಿನಿಂದ ರಾತ್ರಿ ಪದೇಪದೆ ಎಚ್ಚರವಾಗುತ್ತದೆಯೇ?; ಅದಕ್ಕೆ ಕಾರಣ ಇಲ್ಲಿದೆ
“ಮಧ್ಯಪ್ರದೇಶದಲ್ಲಿ ಮಕ್ಕಳ ಸಾವುಗಳು ಕೆಮ್ಮಿನ ಸಿರಪ್‌ಗಳ ಸೇವನೆಗೆ ಸಂಬಂಧಿಸಿವೆ ಎಂದು ಸೂಚಿಸುವ ಇತ್ತೀಚಿನ ವರದಿಗಳನ್ನು ಗಮನದಲ್ಲಿಟ್ಟುಕೊಂಡು, ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC), ರಾಷ್ಟ್ರೀಯ ವೈರಾಲಜಿ ಸಂಸ್ಥೆ (NIV), ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಇತ್ಯಾದಿಗಳ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ತಂಡವು ಸ್ಥಳಕ್ಕೆ ಭೇಟಿ ನೀಡಿತು.
DGHS (Directorate General of Health Services) issues advisory on rational use of cough syrups in paediatric population
“Cough and cold medications should not be prescribed or dispensed to children under 2 years. These are generally not recommended for ages below 5 years and… pic.twitter.com/gqQ94VJIqx
— ANI (@ANI) October 3, 2025
ವಿವಿಧ ಕೆಮ್ಮಿನ ಸಿರಪ್‌ಗಳ ಮಾದರಿಗಳು ಸೇರಿದಂತೆ ರಾಜ್ಯ ಅಧಿಕಾರಿಗಳೊಂದಿಗೆ ಸಮನ್ವಯದೊಂದಿಗೆ ವಿವಿಧ ಮಾದರಿಗಳನ್ನು ಸಂಗ್ರಹಿಸಲಾಯಿತು. ಪರೀಕ್ಷಾ ಫಲಿತಾಂಶಗಳ ಪ್ರಕಾರ, ಯಾವುದೇ ಮಾದರಿಗಳಲ್ಲಿ ಡೈಥಿಲೀನ್ ಗ್ಲೈಕಾಲ್ (DEG) ಅಥವಾ ಎಥಿಲೀನ್ ಗ್ಲೈಕಾಲ್ (EG) ಇರಲಿಲ್ಲ. ಇದು ಗಂಭೀರ ಮೂತ್ರಪಿಂಡದ ಹಾನಿಯನ್ನುಂಟುಮಾಡುವ ಮಾಲಿನ್ಯಕಾರಕಗಳಾಗಿವೆ.
ಮಧ್ಯಪ್ರದೇಶ ರಾಜ್ಯ ಆಹಾರ ಮತ್ತು ಔಷಧ ಆಡಳಿತ (SFDA) ಕೂಡ ಮೂರು ಮಾದರಿಗಳನ್ನು ಪರೀಕ್ಷಿಸಿ DEG/EG ಅಂಶ ಇರಲಿಲ್ಲ ಎಂದು ದೃಢಪಡಿಸಿತು. ಪುಣೆಯ NIVಯಿಂದ ಮತ್ತಷ್ಟು ರಕ್ತ/CSF ಮಾದರಿಗಳನ್ನು ಸಾಮಾನ್ಯ ರೋಗಕಾರಕಗಳಿಗಾಗಿ ಪರೀಕ್ಷಿಸಲಾಗಿದೆ. ಅದರಲ್ಲಿ ಒಂದು ಪ್ರಕರಣದಲ್ಲಿ ಲೆಪ್ಟೊಸ್ಪೈರೋಸಿಸ್ ಇರುವುದು ಕಂಡುಬಂದಿದೆ” ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮು, ಶೀತದ ಔಷಧಿ ನೀಡಬೇಡಿ:
ಕೇಂದ್ರ ಆರೋಗ್ಯ ಸೇವೆಗಳ ಮಹಾನಿರ್ದೇಶಕಿ ಸುನೀತಾ ಶರ್ಮಾ, 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಸಿರಪ್‌ಗಳ ನಿಯಮಿತ ಬಳಕೆಯ ಕುರಿತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದ್ದಾರೆ. “ಕೆಮ್ಮು ಮತ್ತು ಶೀತದ ಔಷಧಿಗಳನ್ನು 2 ವರ್ಷದೊಳಗಿನ ಮಕ್ಕಳಿಗೆ ಶಿಫಾರಸು ಮಾಡಬಾರದು ಅಥವಾ ವಿತರಿಸಬಾರದು. ಇವುಗಳನ್ನು ಸಾಮಾನ್ಯವಾಗಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಶಿಫಾರಸು ಮಾಡುವುದಿಲ್ಲ. ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ, ಸೂಕ್ತ ಡೋಸೇಜ್‌ಗೆ ಅನುಗುಣವಾಗಿ ಸಿರಪ್ ನೀಡಬೇಕು” ಎಂದು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:02 pm, Fri, 3 October 25