AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬಗಳ ನೆಪದಲ್ಲಿ ಸರ್ಕಾರದಿಂದ ಆಗುತ್ತಿದ್ದ ದುಂದುವೆಚ್ಚಕ್ಕೆ ಕಡಿವಾಣ ಹಾಕಿದ ಮೋದಿ ಸರ್ಕಾರ

ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಎಲ್ಲಾ ಸಚಿವಾಲಯಗಳು, ಇಲಾಖೆಗಳಲ್ಲಿ ದೀಪಾವಳಿ ಉಡುಗೊರೆಗಳನ್ನು ನಿಷೇಧಿಸಿದೆ, ಅವುಗಳನ್ನು ಅನಗತ್ಯ ಖರ್ಚುಗಳು ಎಂದು ಕರೆದಿದೆ.ದೀಪಾವಳಿ ಸೇರಿ ಯಾವುದೇ ಹಬ್ಬಕ್ಕೆ ಸಾರ್ವಜನಿಕ ಹಣ ಬಳಕೆಗೆ ನಿರ್ಬಂಧ ಹೇರಲಾಗಿದೆ. ಸೆ.19ರಂದು ಕೇಂದ್ರ ಹಣಕಾಸು ಸಚಿವಾಲಯ ಆದೇಶ ಹೊರಡಿಸಿದೆ. ಈ ಹಿಂದೆಯೂ ಕೇಂದ್ರ ಸರ್ಕಾರ ಇಂತಹ ನಿರ್ದೇಶನ ನೀಡಿತ್ತು, ಆದರೆ ಅದು ಸಮರ್ಪಕವಾಗಿ ಪಾಲನೆಯಾಗದ ಹಿನ್ನೆಲೆ ಮತ್ತೆ ಸುತ್ತೋಲೆ ಹೊರಡಿಸಲಾಗಿದೆ. ಈ ಬಾರಿ ಆದೇಶವನ್ನು ಕಡ್ಡಾಯವಾಗಿ ಪಾಲಿಸಲು ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ಉಡುಗೊರೆ ನೆಪದಲ್ಲಿ ಆಗುವ ದುಂದುವೆಚ್ಚಕ್ಕೆ ಬ್ರೇಕ್ ಹಾಕಲು ಕ್ರಮ ಕೈಗೊಳ್ಳಲಾಗಿದೆ.

ಹಬ್ಬಗಳ ನೆಪದಲ್ಲಿ ಸರ್ಕಾರದಿಂದ ಆಗುತ್ತಿದ್ದ ದುಂದುವೆಚ್ಚಕ್ಕೆ ಕಡಿವಾಣ ಹಾಕಿದ ಮೋದಿ ಸರ್ಕಾರ
ಉಡುಗೊರೆ
ನಯನಾ ರಾಜೀವ್
|

Updated on: Sep 23, 2025 | 11:51 AM

Share

ನವದೆಹಲಿ, ಸೆಪ್ಟೆಂಬರ್ 23: ಹಬ್ಬಗಳ ನೆಪದಲ್ಲಿ ಆಗುತ್ತಿದ್ದ ದುಂದು ವೆಚ್ಚಕ್ಕೆ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ(Narendra Modi) ಸರ್ಕಾರ ಕಡಿವಾಣ ಹಾಕಿದೆ. ಹಬ್ಬಗಳಿವೆ ಎಂದು ಸರ್ಕಾರದ ಹಣದಿಂದ ಉಡುಗೊರೆಗಳನ್ನು ಕೊಡುವಂತಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಎಲ್ಲಾ ಸಚಿವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ. ದೀಪಾವಳಿ ಸೇರಿ ಯಾವುದೇ ಹಬ್ಬಕ್ಕೆ ಸಾರ್ವಜನಿಕ ಹಣ ಬಳಕೆಗೆ ನಿರ್ಬಂಧ ಹೇರಲಾಗಿದೆ. ಸೆ.19ರಂದು ಕೇಂದ್ರ ಹಣಕಾಸು ಸಚಿವಾಲಯ ಆದೇಶ ಹೊರಡಿಸಿದೆ.

ಈ ಹಿಂದೆಯೂ ಕೇಂದ್ರ ಸರ್ಕಾರ ಇಂತಹ ನಿರ್ದೇಶನ ನೀಡಿತ್ತು, ಆದರೆ ಅದು ಸಮರ್ಪಕವಾಗಿ ಪಾಲನೆಯಾಗದ ಹಿನ್ನೆಲೆ ಮತ್ತೆ ಸುತ್ತೋಲೆ ಹೊರಡಿಸಲಾಗಿದೆ. ಈ ಬಾರಿ ಆದೇಶವನ್ನು ಕಡ್ಡಾಯವಾಗಿ ಪಾಲಿಸಲು ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ಉಡುಗೊರೆ ನೆಪದಲ್ಲಿ ಆಗುವ ದುಂದುವೆಚ್ಚಕ್ಕೆ ಬ್ರೇಕ್ ಹಾಕಲು ಕ್ರಮ ಕೈಗೊಳ್ಳಲಾಗಿದೆ.

ದೀಪಾವಳಿ ಅಥವಾ ಯಾವುದೇ ಇತರ ಹಬ್ಬದ ಸಮಯದಲ್ಲಿ ಉಡುಗೊರೆಗಳಿಗಾಗಿ ಸಾರ್ವಜನಿಕ ಹಣವನ್ನು ಖರ್ಚು ಮಾಡದಂತೆ ಹಣಕಾಸು ಸಚಿವಾಲಯವು ಎಲ್ಲಾ ಕೇಂದ್ರ ಸರ್ಕಾರಿ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಬಂಧಿತ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.

ಮತ್ತಷ್ಟು ಓದಿ: ಖರ್ಚು ಕಡಿಮೆಯಾಗಿ ಪ್ರತಿ ಮನೆಯಲ್ಲೂ ನಗು ಅರಳಲಿ; ಭಾರತೀಯರಿಗೆ ಪ್ರಧಾನಿ ಮೋದಿ ಪತ್ರ

ಸೆಪ್ಟೆಂಬರ್ 19, 2025 ರಂದು ಘೋಷಿಸಲಾದ ಈ ಕ್ರಮವು ಹಣಕಾಸಿನ ಶಿಸ್ತನ್ನು ಜಾರಿಗೊಳಿಸಲು ಮತ್ತು ಅನಿವಾರ್ಯವಲ್ಲದ ಖರ್ಚುಗಳನ್ನು ನಿರ್ಬಂಧಿಸಲು ಸರ್ಕಾರದ ನಿರಂತರ ಪ್ರಯತ್ನಗಳ ಭಾಗವಾಗಿದೆ. ಈ ಆದೇಶವನ್ನು ಕಾರ್ಯದರ್ಶಿ (ಖರ್ಚು) ಅನುಮೋದಿಸಿದ್ದಾರೆ ಮತ್ತು ಭಾರತ ಸರ್ಕಾರದ ಜಂಟಿ ಕಾರ್ಯದರ್ಶಿ ಪಿ.ಕೆ. ಸಿಂಗ್ ಅವರು ಸಹಿ ಮಾಡಿದ್ದಾರೆ.

ಇದನ್ನು ಎಲ್ಲಾ ಕಾರ್ಯದರ್ಶಿಗಳು, ಸಚಿವಾಲಯಗಳು ಮತ್ತು ಇಲಾಖೆಗಳ ಹಣಕಾಸು ಸಲಹೆಗಾರರು ಹಾಗೂ ಸಾರ್ವಜನಿಕ ಉದ್ಯಮಗಳ ಇಲಾಖೆ ಮತ್ತು ಹಣಕಾಸು ಸೇವೆಗಳ ಇಲಾಖೆಗೆ ರವಾನಿಸಲಾಗಿದೆ. ಭಾರತ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಇತರ ಅಂಗಗಳಿಂದ ದೀಪಾವಳಿ ಮತ್ತು ಇತರ ಹಬ್ಬಗಳಿಗೆ ಉಡುಗೊರೆಗಳು ಮತ್ತು ಸಂಬಂಧಿತ ವಸ್ತುಗಳಿಗೆ ಯಾವುದೇ ಖರ್ಚು ಮಾಡಲಾಗುವುದಿಲ್ಲ ಎಂಬುದನ್ನು ಈ ಸುತ್ತೋಲೆ ಹೇಳುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ