ದೇಶಾದ್ಯಂತ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ; ಸುಪ್ರೀಂಕೋರ್ಟ್ ಮಹತ್ವದ ತೀರ್ಪು
ಅಕ್ಟೋಬರ್ 1ರವರೆಗೆ ಭಾರತದಾದ್ಯಂತ ಬುಲ್ಡೋಜರ್ ಕಾರ್ಯಾಚರಣೆ ನಡೆಸದಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕೋರ್ಟ್ ಅನುಮತಿ ಇಲ್ಲದೆ ಬುಲ್ಡೋಜರ್ ಕಾರ್ಯಾಚರಣೆ ನಡೆಸಬಾರದು. ದೇಶದಲ್ಲಿ ಎಲ್ಲಿಯೂ ಕಟ್ಟಡ, ಮನೆಗಳ ನೆಲಸಮ ಕಾರ್ಯ ನಡೆಸಬಾರದು ಎಂದು ಎಲ್ಲಾ ರಾಜ್ಯ, ಕೇಂದ್ರಾಡಳಿತ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ನವದೆಹಲಿ: ತನ್ನ ಅನುಮತಿಯಿಲ್ಲದೆ ದೇಶದಲ್ಲಿ ಯಾವುದೇ ನೆಲಸಮ ಕಾರ್ಯ ನಡೆಯಬಾರದು ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. “ಬುಲ್ಡೋಜರ್ ನ್ಯಾಯ”ವನ್ನು ಸ್ಥಗಿತಗೊಳಿಸಿದ ನ್ಯಾಯಾಲಯ ಒಂದು ವೇಳೆ ಅಕ್ರಮ ಧ್ವಂಸ ಪ್ರಕರಣವಿದ್ದರೂ ಅದು ಸಂವಿಧಾನದ ನೀತಿಗೆ ವಿರುದ್ಧವಾಗಿದೆ ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ ಪೀಠವು, ಸಾರ್ವಜನಿಕ ರಸ್ತೆಗಳು, ಕಾಲುದಾರಿಗಳು, ಜಲಮೂಲಗಳು ಮತ್ತು ರೈಲ್ವೆ ಹಳಿಗಳ ಮೇಲಿನ ಅನಧಿಕೃತ ರಚನೆಗಳಿಗೆ ತನ್ನ ಆದೇಶ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ದೇಶಾದ್ಯಂತ ಒಂದೇ ಒಂದು ಕಟ್ಟಡ ಧ್ವಂಸ ಮಾಡಿದರೂ ಸಂವಿಧಾನದ ಆಶಯಕ್ಕೆ ಧಕ್ಕೆ ಉಂಟಾಗುತ್ತದೆ. ನಮ್ಮ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾದದ್ದು ನಡೆಯುತ್ತದೆ ಎಂದು ಬುಲ್ಡೋಜರ್ ಕಾರ್ಯಾಚರಣೆ ಬಗ್ಗೆ ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಆದೇಶ ಸಾರ್ವಜನಿಕ ರಸ್ತೆಗಳು, ಫುಟ್ಪಾತ್ ಒತ್ತುವರಿಗೆ ಅನ್ವಯಿಸುವುದಿಲ್ಲ. ಸರ್ಕಾರಿ ಭೂಮಿ ಒತ್ತುವರಿ ಆಗಿದ್ದರೆ ತೆರವು ಮಾಡಲು ಅವಕಾಶ ನೀಡಲಾಗುವುದು/ ನಿಯಮದಂತೆ ಅನುಮತಿ ಪಡೆದು ಒತ್ತುವರಿ ತೆರವಿಗೆ ಅವಕಾಶ ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಇದನ್ನೂ ಓದಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರಿದ್ದ ಸುಪ್ರೀಂ ಕೋರ್ಟ್ ಪೀಠ, ಸಾರ್ವಜನಿಕ ರಸ್ತೆಗಳು, ಕಾಲುದಾರಿಗಳು, ಜಲಮೂಲಗಳು ಮತ್ತು ರೈಲ್ವೆ ಹಳಿಗಳ ಮೇಲಿನ ಅನಧಿಕೃತ ರಚನೆಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:12 pm, Tue, 17 September 24