ಮೋದಿ- ಕೇಜ್ರಿವಾಲ್ ನಡುವೆ ಯಾವುದೇ ವ್ಯತ್ಯಾಸವಿಲ್ಲ; ಮಿತ್ರಪಕ್ಷ ಆಪ್ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ಸೀಲಾಂಪುರ್ ರ್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಮತ್ತು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಬ್ಬರೂ ಜಾತಿ ಜನಗಣತಿ ವಿಷಯದಲ್ಲಿ ಮೌನವಾಗಿದ್ದಾರೆ. ಅವರಿಬ್ಬರ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಇಬ್ಬರೂ ಸುಳ್ಳು ಭರವಸೆಗಳನ್ನು ನೀಡುವುದರಲ್ಲಿ ನಿಸ್ಸೀಮರು ಎಂದು ಆರೋಪಿಸಿದ್ದಾರೆ. ಹಿಂದುಳಿದ ಸಮುದಾಯಗಳು ಮತ್ತು ಅಲ್ಪಸಂಖ್ಯಾತರು ತಮ್ಮ ನ್ಯಾಯಯುತ ಪಾಲನ್ನು ಪಡೆಯುವುದನ್ನು ಅವರು ಬಯಸುವುದಿಲ್ಲ ಎಂದು ಟೀಕಿಸಿದ್ದಾರೆ.
ನವದೆಹಲಿ: ದೆಹಲಿಯ ಸೀಲಾಂಪುರ್‌ನಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಇಂಡಿಯಾ ಬಣದ ಮಿತ್ರಪಕ್ಷವಾದ ಆಮ್ ಆದ್ಮಿ ಪಕ್ಷದ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಬಿಜೆಪಿ ಜನರನ್ನು ಪರಸ್ಪರರ ವಿರುದ್ಧ ಹೋರಾಡಲು ಪ್ರೋತ್ಸಾಹಿಸುವ ಮೂಲಕ ಸಂಘರ್ಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.
ಹಣದುಬ್ಬರವನ್ನು ಕಡಿಮೆ ಮಾಡುವ ಭರವಸೆಗಳನ್ನು ಈಡೇರಿಸುವಲ್ಲಿ ಮೋದಿ- ಕೇಜ್ರಿವಾಲ್ ಈ ಇಬ್ಬರೂ ನಾಯಕರು ವಿಫಲರಾಗಿದ್ದಾರೆ. ಅವರು ಬಡವರನ್ನು ಇನ್ನಷ್ಟು ಬಡವರನ್ನಾಗಿ ಮಾಡುತ್ತಾರೆ ಮತ್ತು ಶ್ರೀಮಂತರು ಶ್ರೀಮಂತರಾಗುತ್ತಲೇ ಇರುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
#WATCH | Delhi: Addressing a public rally in Seelampur, Congress leader and Lok Sabha LoP Rahul Gandhi says, “Do you remember that Delhi when Sheila Dikshit was the chief minister of the national capital? … Arvind Kejriwal had said he will clean Delhi, make it corruption-free.… pic.twitter.com/stdT5pwtWD
— ANI (@ANI) January 13, 2025
ಇದನ್ನೂ ಓದಿ: ದೆಹಲಿ ಚುನಾವಣೆ: ಆಮ್ ಆದ್ಮಿ ಪಕ್ಷ ಗೆದ್ದರೆ ದೇವಸ್ಥಾನಗಳ ಅರ್ಚಕರ ಗೌರವಧನ 18 ಸಾವಿರ ರೂ.ಗೆ ಏರಿಕೆ: ಕೇಜ್ರಿವಾಲ್
ಇದೇ ವೇಳೆ ಸಂಪನ್ಮೂಲಗಳ ಅಸಮಾನ ಹಂಚಿಕೆಯ ಬಗ್ಗೆಯೂ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಹಿಂದುಳಿದ ಸಮುದಾಯಗಳಿಗೆ ಅವರ ನ್ಯಾಯಯುತ ಪಾಲನ್ನು ನಿರಾಕರಿಸಲಾಗುತ್ತಿದೆ. ಹಿಂದುಳಿದ ಮತ್ತು ಅಲ್ಪಸಂಖ್ಯಾತ ಸಮುದಾಯಗಳಿಗೆ, ವಿಶೇಷವಾಗಿ ಜಾತಿ ಜನಗಣತಿಗೆ ಸಂಬಂಧಿಸಿದಂತೆ ಜನರು ತಮ್ಮ ಹಕ್ಕುಗಳನ್ನು ಪಡೆಯುವುದನ್ನು ಪಿಎಂ ಮೋದಿ ಮತ್ತು ಅರವಿಂದ್ ಕೇಜ್ರಿವಾಲ್ ಇಬ್ಬರೂ ಬಯಸುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದರು.
#WATCH | Delhi: Addressing a public rally in Seelampur, Congress leader and Lok Sabha LoP Rahul Gandhi says, “…Prime Minister Modi and AAP national convenor Arvind Kejriwal do not even speak about caste census. Both want backward communities, Dalits, tribals and minorities to… pic.twitter.com/JD7ihwakSk
— ANI (@ANI) January 13, 2025
ಕಾಂಗ್ರೆಸ್‌ಗೆ ಎಲ್ಲಾ ನಾಗರಿಕರು ಸಮಾನರು. ಪ್ರೀತಿಯು ಹಿಂಸೆಯ ಮೇಲೆ ಜಯ ಗಳಿಸುತ್ತದೆ ಎಂಬ ನಂಬಿಕೆ ನಮ್ಮದು. ಬಡತನದ ಅಂಚಿನಲ್ಲಿರುವವರನ್ನು ಮೇಲಕ್ಕೆತ್ತುವುದು ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡುವುದಕ್ಕೆ ಕಾಂಗ್ರೆಸ್ ಪಕ್ಷ ಗಮನ ನೀಡುತ್ತದೆ. “ನನಗೆ, ಭಾರತ ಎಂದರೆ ಜನರಲ್ಲಿ ಯಾವುದೇ ದ್ವೇಷ ಇರಬಾರದು ಮತ್ತು ಬಡವರು ದೊಡ್ಡ ಕನಸುಗಳನ್ನು ಹೊಂದಿರಬೇಕು” ಎಂದು ರಾಹುಲ್ ಗಾಂಧಿ ಘೋಷಿಸಿದ್ದಾರೆ.
VIDEO | Delhi Elections 2025: Lok Sabha LoP Rahul Gandhi (@RahulGandhi) says, “In this country, the poor have no participation. Modi ji and Kejriwal ji promised to reduce inflation, but it’s only rising, making the rich richer and the poor are getting poorer. A few billionaires… pic.twitter.com/qtwavpwOuA
— Press Trust of India (@PTI_News) January 13, 2025
ಇದನ್ನೂ ಓದಿ: ನಾನು ಕೂಡ ಶೀಶ್ ಮಹಲ್ ನಿರ್ಮಿಸಬಹುದಿತ್ತು; ಅರವಿಂದ್ ಕೇಜ್ರಿವಾಲ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ದೆಹಲಿಯ ಆಡಳಿತದ ವಿರುದ್ಧ ಅಸಮಾಧಾನ ಹೊರಹಾಕಿದ ರಾಹುಲ್ ಗಾಂಧಿ, ನಗರವನ್ನು ಸ್ವಚ್ಛಗೊಳಿಸುವ, ಭ್ರಷ್ಟಾಚಾರವನ್ನು ಎದುರಿಸುವ, ಹೆಚ್ಚುತ್ತಿರುವ ಮಾಲಿನ್ಯ ಮತ್ತು ಹಣದುಬ್ಬರವನ್ನು ನಿಭಾಯಿಸುವ ಭರವಸೆಗಳನ್ನು ಈಡೇರಿಸುವಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಆಡಳಿತ ವಿಫಲವಾಗಿದೆ ಎಂದು ಟೀಕಿಸಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ