Free Electricity in Rajasthan: ರಾಜಸ್ಥಾನದಲ್ಲಿ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತ, ಸಿಎಂ ಗೆಹ್ಲೋಟ್ ಘೋಷಣೆ: ಕರ್ನಾಟಕದಲ್ಲಿ ಯಾವಾಗ?

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಮಹತ್ವದ ಘೋಷಣೆ ಮಾಡಿದ್ದು, ಜೂನ್ 1 ರಿಂದ ಜಾರಿಗೆ ಬರುವಂತೆ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತವಾಗಿ ಪೂರೈಕೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

Free Electricity in Rajasthan: ರಾಜಸ್ಥಾನದಲ್ಲಿ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತ, ಸಿಎಂ ಗೆಹ್ಲೋಟ್ ಘೋಷಣೆ: ಕರ್ನಾಟಕದಲ್ಲಿ ಯಾವಾಗ?
ಅಶೋಕ್ ಗೆಹ್ಲೋಟ್
Follow us
ನಯನಾ ರಾಜೀವ್
|

Updated on: Jun 01, 2023 | 7:57 AM

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಮಹತ್ವದ ಘೋಷಣೆ ಮಾಡಿದ್ದು, ಜೂನ್ 1 ರಿಂದ ಜಾರಿಗೆ ಬರುವಂತೆ ಪ್ರತಿ ಮನೆಗೂ 100 ಯೂನಿಟ್ ವಿದ್ಯುತ್ ಉಚಿತವಾಗಿ ಪೂರೈಕೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಈಗ ಹೊಸ ನಿಯಮಗಳ ಪ್ರಕಾರ ರಾಜಸ್ಥಾನದಲ್ಲಿ ಪ್ರತಿ ತಿಂಗಳು 100 ಯೂನಿಟ್ ವಿದ್ಯುತ್ ಬಳಕೆ ಮಾಡುವವರ ಬಿಲ್ ಸಂಪೂರ್ಣ ಶೂನ್ಯವಾಗಲಿದೆ. 100 ಯೂನಿಟ್‌ಗಿಂತ ಹೆಚ್ಚು ವಿದ್ಯುತ್ ಖರ್ಚು ಮಾಡುವ ಕುಟುಂಬಗಳು ಅವರು 100 ಯುನಿಟ್‌ಗಳ ರಿಯಾಯಿತಿಯನ್ನು ಸಹ ಪಡೆಯುತ್ತಾರೆ. ಅಂದರೆ 100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಮಾಡಿದರೂ ಸಂಪೂರ್ಣ ಬಿಲ್​ನಲ್ಲಿ 100 ಯೂನಿಟ್ ಕಡಿತವಾಗುತ್ತದೆ.

ಹಣದುಬ್ಬರ ಪರಿಹಾರ ಶಿಬಿರಗಳಲ್ಲಿ ಸಾರ್ವಜನಿಕರೊಂದಿಗೆ ಮಾತನಾಡಿದ ನಂತರ, ರಾಜಸ್ಥಾನದಲ್ಲಿ ವಿದ್ಯುತ್ ಬಿಲ್‌ಗಳಲ್ಲಿ ನೀಡಲಾದ ಸ್ಲ್ಯಾಬ್‌ವಾರು ವಿನಾಯಿತಿಯನ್ನು ಬದಲಾಯಿಸಬೇಕು ಎಂದು ಸಲಹೆ ನೀಡಲಾಯಿತು ಎಂದು ಗೆಹ್ಲೋಟ್ ಹೇಳಿದರು. ಇದರ ಬೆನ್ನಲ್ಲೇ ಗೆಹ್ಲೋಟ್ ಸರ್ಕಾರ ಎಲ್ಲರಿಗೂ 100 ಯೂನಿಟ್ ವರೆಗೆ ಉಚಿತ ವಿದ್ಯುತ್ ಉಡುಗೊರೆ ನೀಡಿದೆ.

ಮತ್ತಷ್ಟು ಓದಿ:Free power supply: ಉಚಿತ ವಿದ್ಯುತ್ ಪೂರೈಕೆ ಕುರಿತು ಸೃಷ್ಟಿಯಾಗಿರುವ ಗೊಂದಲವನ್ನು ಸರ್ಕಾರ ಕೂಡಲೇ ಪರಿಹರಿಸಬೇಕು, ಎಸ್ಕಾಂ ಸಿಬ್ಬಂದಿ ಅಪಾಯದಲ್ಲಿದೆ!

200 ಯೂನಿಟ್ ವರೆಗೆ ವಿದ್ಯುತ್ ಬಳಸುವ ಕುಟುಂಬಗಳಿಗೂ ಹೆಚ್ಚಿನ ರಿಯಾಯಿತಿ ನೀಡಲಾಗಿದೆ. ಇದರಲ್ಲಿ, ಮೊದಲ 100 ಯುನಿಟ್‌ಗಳು ಉಚಿತವಾಗಿರುತ್ತದೆ, ಆದರೆ ಅದಕ್ಕಿಂತ ಹೆಚ್ಚಿನ ಬಳಕೆಯ ಮೇಲೆ, ಸ್ಥಿರ ಶುಲ್ಕಗಳು, ಇಂಧನ ಹೆಚ್ಚುವರಿ ಶುಲ್ಕಗಳು ಸೇರಿದಂತೆ ಎಲ್ಲಾ ಇತರ ಶುಲ್ಕಗಳನ್ನು ಮನ್ನಾ ಮಾಡಲಾಗುತ್ತದೆ.

ವರ್ಷಾಂತ್ಯಕ್ಕೆ ವಿಧಾನಸಭೆ ಚುನಾವಣೆ ಎದುರಿಸುವ ರಾಜಸ್ಥಾನದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನಿಂದ ಜನರ ಮನಗೆಲ್ಲಲು ಉಚಿತ ವಿದ್ಯುತ್‌ ಯೋಜನೆ ಘೋಷಣೆ ಮಾಡಲಾಗಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ವಿದ್ಯುತ್​ ಅನ್ನು ಎಷ್ಟೇ ಬಳಕೆ ಮಾಡಿದರೂ, ಬಳಕೆದಾರರು ಮೊದಲ 100 ಯೂನಿಟ್‌ಗಳಿಗೆ ಯಾವುದೇ ವಿದ್ಯುತ್ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ