100 ಕೋಟಿ ವಸೂಲಿ ಆರೋಪದಿಂದ ದೋಸ್ತಿ ಸರ್ಕಾರಕ್ಕೆ ಧಕ್ಕೆಯಿಲ್ಲ, ಅನಿಲ್ ದೇಶ್​ಮುಖ್ ತನಿಖೆಯಾಗಲಿ: ಶರದ್ ಪವಾರ್

Parambir Singh Letter to Uddhav Thackeray: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಯಾವುದೇ ರೀತಿಯ ತನಿಖೆಯನ್ನು ನಡೆಸಲು ಸ್ವಾತಂತ್ರ್ಯ ಹೊಂದಿದ್ದಾರೆ ಎಂದು ಶರದ್ ಪವಾರ್ ತಿಳಿಸಿದ್ದಾರೆ.

100 ಕೋಟಿ ವಸೂಲಿ ಆರೋಪದಿಂದ ದೋಸ್ತಿ ಸರ್ಕಾರಕ್ಕೆ ಧಕ್ಕೆಯಿಲ್ಲ, ಅನಿಲ್ ದೇಶ್​ಮುಖ್ ತನಿಖೆಯಾಗಲಿ: ಶರದ್ ಪವಾರ್
ಶರದ್ ಪವಾರ್ (ಸಂಗ್ರಹ ಚಿತ್ರ)
Follow us
guruganesh bhat
| Updated By: ganapathi bhat

Updated on: Mar 21, 2021 | 3:46 PM

ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ಮೇಲೆ ಕೇಳಿಬಂದಿರುವ ಭ್ರಷ್ಟಾಚಾರ ಆರೋಪದಿಂದ ಮಹಾರಾಷ್ಟ್ರ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಎನ್​ಸಿಪಿ ವರಿಷ್ಠ ಶರದ್ ಪವಾರ್ ಸ್ಪಷ್ಟಪಡಿಸಿದ್ದಾರೆ. ಸಚಿನ್ ವಾಜೆ ಮೇಲೆ ಪ್ರತಿ ತಿಂಗಳು 100 ಕೋಟಿ ವಸೂಲು ಮಾಡುವಂತೆ ಒತ್ತಡ ಹೇರಿದ್ದರು ಎಂಬ ಆರೋಪದ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಯಾವುದೇ ರೀತಿಯ ತನಿಖೆಯನ್ನು ನಡೆಸಲು ಸ್ವಾತಂತ್ರ್ಯ ಹೊಂದಿದ್ದಾರೆ ಎಂದು ಶರದ್ ಪವಾರ್ ತಿಳಿಸಿದ್ದಾರೆ. ಈ ಮೂಲಕ ಶಿವಸೇನೆ- ಎನ್​ಸಿಪಿ ದೋಸ್ತಿ ಸರ್ಕಾರವನ್ನು ಈ ಪ್ರಕರಣದಲ್ಲಿ ಬಲಿ ಕೊಡುವುದಿಲ್ಲ ಎಂಬ ಸೂಚನೆ ತಿಳಿಸಿದ್ದಾರೆ.

ಇನ್ನೊಂದು ಬೆಳವಣಿಗೆಯಲ್ಲಿ ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ, ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಇರಿಸಿದವರು ನಿಜವಾಗಿಯೂ ಯಾರು ಎಂಬುದನ್ನು ಕೇಂದ್ರ ಸರ್ಕಾರವೇ ತನಿಖೆ ನಡೆಸಬೇಕು ಎಂದು ರಾಜ್ ಠಾಕ್ರೆ ಆಗ್ರಹಿಸಿದ್ದಾರೆ. ಅಲ್ಲದೇ ಹಲವು ಬಿಜೆಪಿ ನಾಯಕರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಪತ್ರ ಬರೆದಿದ್ದಾಗಿ ಪರಮ್​ವೀರ್ ಸಿಂಗ್ ಖಚಿತಪಡಿಸಿದ್ದಾರೆ. ಅನಿಲ್ ದೇಶ್​ಮುಖ್ ಮುಂಬೈನ ಬಾರ್ ಮತ್ತು ರೆಸ್ಟೊರೆಂಟ್​ಗಳಿಂದ 100 ಕೋಟಿ ಹಣವನ್ನು ವಸೂಲು ಮಾಡಬೇಕೆಂದು ಸಸ್ಪೆಂಡ್ ಆಗಿರುವ ಪೊಲಿಸ್ ಅಧಿಕಾರಿ ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು ಎಂದು ಪರಮ್​ವೀರ್ ಸಿಂಗ್ ಪತ್ರದಲ್ಲಿ ಉಲ್ಲೇಖಿಸಿದ್ದರು. ನಂತರ ತಡರಾತ್ರಿ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ‘ಅದು ಪರಮ್​ವೀರ್ ಸಿಂಗ್ ಬರೆದ ಪತ್ರವಲ್ಲ. ಪತ್ರದ ಮೂಲದ ಕುರಿತು ಅಧಿಕೃತತೆಯಿಲ್ಲ’ ಎಂದು ಹೇಳಿತ್ತು. ಆದರೆ ಇಂದು (ಮಾರ್ಚ್ 21) ಬೆಳಗ್ಗೆ ಪರಮ್​ವೀರ್ ಸಿಂಗ್ ಸ್ವತಃ ತಾವೇ ಪತ್ರ ಬರೆದಿದ್ದಾಗಿ ಖಚಿತಪಡಿಸಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕಚೇರಿಗೆ ಸಹಿ ಮಾಡಿದ ಪತ್ರವನ್ನು ಕಳಿಸಿದ್ದಾಗಿ ಅವರು ತಿಳಿಸಿದ್ದಾರೆ.

ಶಿವಸೇನೆಯ ಉದ್ಧವ್ ಠಾಕ್ರೆ  ಮಹಾರಾಷ್ಟ್ರದ ಮುಖ್ಯಮಂತ್ರಿಯಾದರೂ ಮೈತ್ರಿಕೂಟದ ಎನ್​ಸಿಪಿ ಪಕ್ಷದ ಅನಿಲ್ ದೇಶ್​ಮುಖ್ ಗೃಹ ಸಚಿವರಾಗಿದ್ದಾರೆ.  ಸರ್ಕಾರದ ಚುಕ್ಕಾಣಿಯಲ್ಲಿ ಕುಳಿತಿರುವ ಇಬ್ಬರ ನಡುವೆ ಅಭಿಪ್ರಾಯ ಬೇಧ, ಸಣ್ಣಪುಟ್ಟ ವೈಮನಸ್ಸು ಉದ್ಭವಿಸಿದ ಉದಾಹರಣೆಗಳಿವೆ. ಗೃಹ ಸಚಿವ ಅನಿಲ್ ದೇಶ್​ಮುಖ್ ಮೇಲೆ ಪರಮ್​ವೀರ್ ಸಿಂಗ್ ಮಾಡಿರುವ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸುವ ಆರೋಪ ಮಹಾರಾಷ್ಟ್ರ ಸರ್ಕಾರಕ್ಕೆ ಕುತ್ತು ತರುವ ಶಕ್ತಿ ಹೊಂದಿದೆ. ಪರಮ್​ವೀರ್ ಸಿಂಗ್ ಗೃಹ ಸಚಿವರ ಮೇಲೇ ಆರೋಪ ಮಾಡಿರುವುದು ಶಿವಸೇನೆ-ಎನ್​ಸಿಪಿಯ ದೋಸ್ತಿ ಸರ್ಕಾರದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ.

ಪತ್ರದ ಸಂಪೂರ್ಣ ವಿವರ ಓದಲು ಇಲ್ಲಿ ಕ್ಲಿಕ್ ಮಾಡಿ: ಪರಮ್​ವೀರ್ ಸಿಂಗ್ ಉದ್ಧವ್ ಠಾಕ್ರೆಗೆ ಬರೆದ ಪತ್ರ

ಗೃಹ ಸಚಿವ ಅನಿಲ್ ದೇಶ್​ಮುಖ್ ಅವರ ಮೇಲೆ ಇನ್ನೂ ಗಂಭೀರ ಆರೋಪ ಮಾಡಿದ್ದಾರೆ. ಮುಂಬೈನ ಖಾಸಗಿ ಹೊಟೇಲ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂಸದ ಮೋಹನ್ ದೇಲ್ಕರ್ ಸಾವಿಗೂ ಅನಿಲ್ ದೇಶ್​ಮುಖ್ ಹೆಸರು ಥಳುಕುಹಾಕಿಕೊಂಡಿದೆ. ‘ಹಿರಿಯ ಅಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದೇನೆ’ ಎಂದು ಆತ್ಮಹತ್ಯಾ ಪತ್ರ ಬರೆದಿದ್ದ ಸಂಸದ ಮೋಹನ್ ದೇಲ್ಕರ್ ಬರೆದುಕೊಂಡಿದ್ದರಂತೆ. ಆದರೆ ಮೋಹನ್ ದೇಲ್ಕರ್ ಅವರ ಸಾವನ್ನು ಆತ್ಮಹತ್ಯೆ ಎಂದೇ ಪ್ರಕರಣ ದಾಖಲಿಸುವಂತೆ ಗೃಹ ಸಚಿವ ಅನಿಲ್ ದೇಶ್​ಮುಖ್ ಒತ್ತಡ ಹೇರಿದ್ದರು ಎಂದು ಪರಮ್​ವೀರ್  ಸಿಂಗ್ ಆರೋಪಿಸಿದ್ದಾರೆ.

ಅನಿಲ ದೇಶ್​ಮುಖ್​ಗೆ ನನ್ನ ಮೇಲೆ ಅತ್ಯಂತ ಸಿಟ್ಟಿತ್ತು. ಮೋಹನ್ ದೇಲ್ಕರ್ ಸಾವನ್ನು SIT ಗೆ ನಿಡುವುದಾಗಿ ಮಹಾರಾಷ್ಟ್ರ ವಿಧಾನಸಭೆಯಲ್ಲಿ ದೇಶ್​ಮುಖ್ ತಿಳಿಸಿದ್ದರು ಎಂದು ಪರಮ್​ವೀರ್  ಸಿಂಗ್ ಪತ್ರದಲ್ಲಿ ದೂರಿದ್ದಾರೆ.

ತನ್ನ ಮೇಲಿನ ಆರೋಪ ಸುಳ್ಳು ಎಂದ ಅನಿಲ್ ದೇಶ್​ಮುಖ್ ಆದರೆ, ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳನ್ನು ಗೃಹ ಸಚಿವ ಅನಿಲ್ ದೇಶ್​ಮುಖ್ ತಳ್ಳಿ ಹಾಕಿದ್ದಾರೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಅವರು ಹೇಳಿದ್ದಾರೆ.

ಪರಮ್​ವೀರ್ ಸಿಂಗ್ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು. ಹಾಗೂ ನಾನು ಮಾನಹಾನಿ ಪ್ರಕರಣ ದಾಖಲಿಸುತ್ತಿರುವ ಕಾರಣ ಅವರು ಮಾಡಿರುವ ಆರೋಪಗಳನ್ನು ಸಾಕ್ಷೀಕರಿಸಬೇಕು ಎಂದು ಅನಿಲ್ ದೇಶ್​ಮುಖ್ ತಿಳಿಸಿದ್ದಾರೆ.

ಇದನ್ನೂ ಓದಿ: ಗೃಹ ಸಚಿವ ಅನಿಲ್ ದೇಶ್​ಮುಖ್ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸಲು ಸಚಿನ್ ವಾಜೆ ಮೇಲೆ ಒತ್ತಡ ಹೇರಿದ್ದರು; ಉದ್ಧವ್ ಠಾಕ್ರೆಗೆ ಪತ್ರ ಬರೆದ ಪರಮ್​ವೀರ್ ಸಿಂಗ್

ಮುಕೇಶ್ ಅಂಬಾನಿ ಮನೆ ಮುಂದೆ ಜಿಲೆಟಿನ್ ಪತ್ತೆ ಪ್ರಕರಣ ; ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಸಸ್ಪೆಂಡ್

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ