ಇನ್ಮುಂದೆ ಪುರುಷ ಟೈಲರ್​ಗಳು ಹೆಣ್ಣುಮಕ್ಕಳ ದೇಹದ ಅಳತೆ ತೆಗೆದುಕೊಳ್ಳುವಂತಿಲ್ಲ

|

Updated on: Nov 08, 2024 | 3:19 PM

ಇನ್ನುಮುಂದೆ ಪುರುಷ ಟೈಲರ್​ಗಳು, ಹೆಣ್ಣುಮಕ್ಕಳ ದೇಹದ ಅಳತೆ ತೆಗೆದುಕೊಳ್ಳುವಂತಿಲ್ಲ ಎಂದು ಮಹಿಳಾ ಆಯೋಗವು ಹೇಳಿದೆ. ಮಹಿಳೆಯರ ಸುರಕ್ಷತೆ ನಿಟ್ಟಿನಲ್ಲಿ ಉತ್ತರ ಪ್ರದೇಶ ಮಹಿಳಾ ಆಯೋಗವು ಈ ಕ್ರಮಗಳನ್ನು ಪ್ರಸ್ತಾಪಿಸಿದೆ. ಮಹಿಳೆಯರ ಅಳತೆಯನ್ನು ತೆಗೆದುಕೊಳ್ಳುವುದು, ಯೋಗ ಹಾಗೂ ಜಿಮ್​ಗಳಲ್ಲಿ ಹೆಣ್ಣುಮಕ್ಕಳಿಗೆ ಪುರುಷರು ತರಬೇತಿ ನೀಡುವುದನ್ನು ನಿರ್ಬಂಧಿಸುವುದು ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಇನ್ಮುಂದೆ ಪುರುಷ ಟೈಲರ್​ಗಳು ಹೆಣ್ಣುಮಕ್ಕಳ ದೇಹದ ಅಳತೆ ತೆಗೆದುಕೊಳ್ಳುವಂತಿಲ್ಲ
ಟೈಲರ್
Image Credit source: Envato
Follow us on

ಇನ್ನುಮುಂದೆ ಪುರುಷ ಟೈಲರ್​ಗಳು, ಹೆಣ್ಣುಮಕ್ಕಳ ದೇಹದ ಅಳತೆ ತೆಗೆದುಕೊಳ್ಳುವಂತಿಲ್ಲ ಎಂದು ಮಹಿಳಾ ಆಯೋಗವು ಹೇಳಿದೆ. ಮಹಿಳೆಯರ ಸುರಕ್ಷತೆ ನಿಟ್ಟಿನಲ್ಲಿ ಉತ್ತರ ಪ್ರದೇಶ ಮಹಿಳಾ ಆಯೋಗವು ಈ ಕ್ರಮಗಳನ್ನು ಪ್ರಸ್ತಾಪಿಸಿದೆ. ಮಹಿಳೆಯರ ಅಳತೆಯನ್ನು ತೆಗೆದುಕೊಳ್ಳುವುದು, ಯೋಗ ಹಾಗೂ ಜಿಮ್​ಗಳಲ್ಲಿ ಹೆಣ್ಣುಮಕ್ಕಳಿಗೆ ಪುರುಷರು ತರಬೇತಿ ನೀಡುವುದನ್ನು ನಿರ್ಬಂಧಿಸುವುದು ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

ಸಾರ್ವಜನಿಕ ಹಾಗೂ ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆ ಹೆಚ್ಚಿಸಲು ಶಾಲಾ ಬಸ್​ಗಳಲ್ಲಿ ಮಹಿಳಾ ಭದ್ರತಾ ಸಿಬ್ಬಂದಿಯನ್ನಿರಿಸುವುದು, ಮಹಿಳಾ ಬಟ್ಟೆ ಅಂಗಡಿಗಳಲ್ಲಿ ಮಹಿಳಾ ಸಿಬ್ಬಂದಿಯನ್ನೇ ನೇಮಿಸಿಕೊಳ್ಳಲು ಆಯೋಗವು ಸೂಚಿಸಿದೆ.

ಅಕ್ಟೋಬರ್ 28 ರಂದು ಲಕ್ನೋದಲ್ಲಿ ನಡೆದ ಸಭೆಯಲ್ಲಿ ಮಹಿಳೆಯರ ಸುರಕ್ಷತೆಯನ್ನು ಹೆಚ್ಚಿಸುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು , ಅಲ್ಲಿ ಆಯೋಗದ ಸದಸ್ಯರು ಮಹಿಳೆಯರ ಸುರಕ್ಷತೆಯನ್ನು ಸುಧಾರಿಸುವ ಉದ್ದೇಶದಿಂದ ವಿವಿಧ ಸಲಹೆಗಳನ್ನು ನೀಡಿದರು.

ಮತ್ತಷ್ಟು ಓದಿ: ರಕ್ಷಣೆ ಮಾಡುವವರಿಗೆ ರಕ್ಷಣೆ ಇಲ್ಲ, ಗನ್ ತೋರಿಸಿ ಮಹಿಳಾ ಹೆಡ್ ಕಾನ್‌ಸ್ಟೆಬಲ್ ಮೇಲೆ ಅತ್ಯಾಚಾರ ಮಾಡಿದ ಎಸ್​​ಐ

ಈ ಪ್ರಸ್ತಾವನೆಗಳ ಕಾರ್ಯಸಾಧ್ಯತೆಯನ್ನು ಇನ್ನೂ ನಿರ್ಧರಿಸಲಾಗಿಲ್ಲ, ಅನುಮೋದಿಸಿದ ನಂತರ, ಈ ಪ್ರಸ್ತಾವನೆಗಳ ಕರಡು ನೀತಿಯನ್ನು ರಚಿಸಲು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಆಯೋಗದ ಸದಸ್ಯರಾದ ಮನೀಶಾ ಅಹ್ಲಾವತ್ ಹೇಳಿದ್ದಾರೆ.

ಶಾಮ್ಲಿಯಲ್ಲಿರುವ ಕೋಚಿಂಗ್ ಸೆಂಟರ್‌ಗಳು ಈಗ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಮತ್ತು ಮಹಿಳೆಯರಿಗೆ ಸರಿಯಾದ ವಿಶ್ರಾಂತಿ ಕೊಠಡಿಯನ್ನು ಹೊಂದಿರಬೇಕು. ಮಹಿಳೆಯರ ಉಡುಪುಗಳನ್ನು ಮಾರಾಟ ಮಾಡುವ ಮಳಿಗೆಗಳಿಗೆ ಸಹಾಯಕ್ಕಾಗಿ ಮಹಿಳಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವಂತೆ ತಿಳಿಸಲಾಗಿದೆ.

ಸಾಮಾಜಿಕ ಕಾರ್ಯಕರ್ತೆ ವೀಣಾ ಅಗರವಾಲ್ ಈ ಕ್ರಮಗಳನ್ನು ಬೆಂಬಲಿಸಿದ್ದಾರೆ, ಅವರು ಸುರಕ್ಷತೆಯನ್ನು ಸುಧಾರಿಸಲು ಮತ್ತು ರಾಜ್ಯಾದ್ಯಂತ ಸಾರ್ವಜನಿಕ ಮತ್ತು ವಾಣಿಜ್ಯ ಸ್ಥಳಗಳಲ್ಲಿ ಮಹಿಳೆಯರಿಗೆ ಹೆಚ್ಚು ಬೆಂಬಲ ವಾತಾವರಣವನ್ನು ಸೃಷ್ಟಿಸುವ ಗುರಿಯನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ