ಖಾಸಗಿ ವಾಹನದಲ್ಲಿ ಒಂಟಿಯಾಗಿ ಪ್ರಯಾಣಿಸುವಾಗ ಮಾಸ್ಕ್​ ಕಡ್ಡಾಯವಲ್ಲ; ಕೇಂದ್ರ ಸರ್ಕಾರ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 10, 2021 | 9:32 PM

ಅರ್ಜಿ ವಿಚಾರಣೆ ವೇಳೆ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ದೆಹಲಿ ಹೈಕೋರ್ಟ್‌ಗೆ ಪ್ರತಿಕ್ರಿಯಿಸಿದೆ. ವಾಹನಗಳಲ್ಲಿ ಒಂಟಿಯಾಗಿ ತೆರಳುವಾಗ ಮಾಸ್ಕ್​ ಹಾಕಬೇಕು ಎನ್ನುವುದು ನಿಯಮಾವಳಿಯಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಖಾಸಗಿ ವಾಹನದಲ್ಲಿ ಒಂಟಿಯಾಗಿ ಪ್ರಯಾಣಿಸುವಾಗ ಮಾಸ್ಕ್​ ಕಡ್ಡಾಯವಲ್ಲ; ಕೇಂದ್ರ ಸರ್ಕಾರ
ಪ್ರಾತಿನಿಧಿಕ ಚಿತ್ರ
Follow us on

ದೆಹಲಿ: ಕಾರಿನಲ್ಲಿ ಅಥವಾ ಯಾವುದೇ ಖಾಸಗಿ ವಾಹನದಲ್ಲಿ ಒಂಟಿಯಾಗಿ ಪ್ರಯಾಣಿಸುವಾಗಲೂ ಮಾಸ್ಕ್​ ಹಾಕದಿದ್ದರೆ ದಂಡ ವಿಧಿಸಿದ್ದ ಸಾಕಷ್ಟು ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ಖಾಸಗಿ ವಾಹನದಲ್ಲಿ ಒಬ್ಬಂಟಿಯಾಗಿ ಪ್ರಯಾಣಿಸುವಾಗ ಮಾಸ್ಕ್​ ಕಡ್ಡಾಯವಲ್ಲ ಎಂದು ಹೇಳಿದೆ.

ಸೌರಭ್​ ಶರ್ಮಾ ಹೆಸರಿನ ವಕೀಲರು ಕಾರಿನಲ್ಲಿ ಒಬ್ಬಂಟಿಯಾಗಿ ತೆರಳುತ್ತಿದ್ದರು. ಈ ವೇಳೆ ಮಾಸ್ಕ್​ ಧರಿಸಿಲ್ಲ ಎನ್ನುವ ಕಾರಣಕ್ಕೆ ಅವರಿಗೆ 500 ರೂಪಾಯಿ ದಂಡ ಹಾಕಲಾಗಿತ್ತು. ಇದನ್ನು ಸೌರಭ್​ ಶರ್ಮಾ ದೆಹಲಿ ಹೈಕೋರ್ಟ್​​ನಲ್ಲಿ ಪ್ರಶ್ನೆ ಮಾಡಿದ್ದರು. ಅಲ್ಲದೆ, ಮಾನಸಿಕವಾಗಿ ಹಿಂಸೆ ನೀಡಿದ್ದಕ್ಕೆ 10 ರೂಪಾಯಿ ಪರಿಹಾರ ನೀಡುವಂತೆ ಕೋರಿದ್ದರು.

ಅರ್ಜಿ ವಿಚಾರಣೆ ವೇಳೆ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ದೆಹಲಿ ಹೈಕೋರ್ಟ್‌ಗೆ ಪ್ರತಿಕ್ರಿಯಿಸಿದೆ. ವಾಹನಗಳಲ್ಲಿ ಒಂಟಿಯಾಗಿ ತೆರಳುವಾಗ ಮಾಸ್ಕ್​ ಹಾಕಬೇಕು ಎನ್ನುವುದು ನಿಯಮಾವಳಿಯಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಮೊದಲು ದೆಹಲಿ ಹೈಕೋರ್ಟ್​ಗೆ ಮಾಹಿತಿ ನೀಡಿದ್ದ ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಸರ್ಕಾರ, ಯಾವುದೇ ವ್ಯಕ್ತಿ ತನ್ನ ಖಾಸಗಿ ವಾಹನದಲ್ಲಿ ಒಬ್ಬಂಟಿಯಾಗಿ ಸಾಗುತ್ತಿದ್ದರೂ ಮಾಸ್ಕ್​ ಧರಿಸುವುದು ಕಡ್ಡಾಯ ಎಂದಿತ್ತು. ಈಗ ಈ ವಿಚಾರದಲ್ಲಿ ಕೇಂದ್ರ ಸ್ಪಷ್ಟನೆ ನೀಡಿದಂತಾಗಿದೆ.

ಮಹಾರಾಷ್ಟ್ರದಲ್ಲಿ ಇನ್ನು 6 ತಿಂಗಳು ಮಾಸ್ಕ್ ಕಡ್ಡಾಯ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ