Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಎಸ್​ಪಿ ಹೆಚ್ಚಳದ ಬಗ್ಗೆ ಮಾತನಾಡಲು ನನ್ನಷ್ಟು ಧೈರ್ಯ ಯಾರಿಗೂ ಇಲ್ಲ; ಸಹೋದ್ಯೋಗಿ ಸಂಸದರ ಬಗ್ಗೆ ವ್ಯಂಗ್ಯವಾಡಿದ ಬಿಜೆಪಿ ಸಂಸದ

ವರುಣ್​ ಗಾಂಧಿ ಪಕ್ಷದಿಂದ ರೆಬೆಲ್​ ಆಗಿಯೇ ಗುರುತಿಸಿಕೊಂಡಿದ್ದಾರೆ. ಅವರನ್ನು ಈ ಬಾರಿ ಪಕ್ಷದ Varun Gandhi: ರಾಷ್ಟ್ರೀಯ ಕಾರ್ಯಕಾರಿಣಿಯಿಂದಲೂ ಕೈಬಿಡಲಾಗಿದೆ. ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಟ ಮಾಡುತ್ತಿದ್ದ ಸಂದರ್ಭದಲ್ಲಿ, ಲಖಿಂಪುರ ಖೇರಿ ಹಿಂಸಾಚಾರ ನಡೆದಿದ್ದಾಗ ಅವರು ಬಿಜೆಪಿ ಸರ್ಕಾರವನ್ನು ತೀವ್ರವಾಗಿ ಖಂಡಿಸಿದ್ದರು. 

ಎಂಎಸ್​ಪಿ ಹೆಚ್ಚಳದ ಬಗ್ಗೆ ಮಾತನಾಡಲು ನನ್ನಷ್ಟು ಧೈರ್ಯ ಯಾರಿಗೂ ಇಲ್ಲ; ಸಹೋದ್ಯೋಗಿ ಸಂಸದರ ಬಗ್ಗೆ ವ್ಯಂಗ್ಯವಾಡಿದ ಬಿಜೆಪಿ ಸಂಸದ
ವರುಣ್​ ಗಾಂಧಿ
Follow us
TV9 Web
| Updated By: Lakshmi Hegde

Updated on:Dec 22, 2021 | 10:01 AM

ಬರೇಲಿ: ಸದಾ ಒಂದಿಲ್ಲೊಂದು ಕಾರಣಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ಮಾತನಾಡುವ ಪಿಲಿಭಿತ್​ ಬಿಜೆಪಿ ಸಂಸದ ವರುಣ್​ ಗಾಂಧಿ (BJP MP Varun Gandhi) ಮಂಗಳವಾರ ಮತ್ತೆ ಬಿಜೆಪಿಯ ತಮ್ಮ ಸಹೋದ್ಯೋಗಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಬ್ಬು ಬೆಳೆಗೆ ಕನಿಷ್ಠ ಬೆಂಬಲ ಬೆಲೆ (MSP-Minimum Support Price) ಹೆಚ್ಚಿಸುವ ಬಗ್ಗೆ ಧ್ವನಿ ಎತ್ತಿದವನು ನಾನೊಬ್ಬನೇ ಆಗಿದ್ದೇನೆ. ಉಳಿದ ಸಂಸದರು, ಶಾಸಕರಿಗೆ ಆ ಬಗ್ಗೆ ಮಾತನಾಡುವ ಧೈರ್ಯ ಇಲ್ಲ ಎಂದಿದ್ದಾರೆ.  ನನ್ನದೇ ಪಕ್ಷದ ಉಳಿದ ಸಂಸದರು, ಶಾಸಕರು ಕೂಡ ಈ ವಿಷಯದ ಬಗ್ಗೆ ಧ್ವನಿ ಎತ್ತುತ್ತಿಲ್ಲ. ನಾವು ಅದನ್ನು ಮಾತನಾಡಿದರೆ ಮುಂದಿನ ಚುನಾವಣೆಗಳಲ್ಲಿ ಟಿಕೆಟ್​ ಸಿಗದೆ ಇದ್ದರೆ ಎಂಬ ಭಯ ಅವರಿಗೆ ಎಂದು ವ್ಯಂಗ್ಯವಾಡಿದ್ದಾರೆ. 

ಬರೇಲಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ದಿನಗಳ ಪ್ರವಾಸ ಹಮ್ಮಿಕೊಂಡಿರುವ ಅವರು, ಸ್ಥಳೀಯ ಹಳ್ಳಿಗಳ ಜನರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಮಾತನಾಡಿ, ಕಬ್ಬಿಗೆ ಬೆಂಬಲ ಬೆಲೆ ಏರಿಕೆ ಮಾಡುವ ಬಗ್ಗೆ ಮಾತನಾಡಲು ನನ್ನನ್ನು ಹೊರತುಪಡಿಸಿ ಇನ್ಯಾರಿಗೂ ಧೈರ್ಯವೇ ಇಲ್ಲ. ನಾವು ಆ ಬಗ್ಗೆ ಮಾತನಾಡಿದರೆ ಮುಂದೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಇದ್ದರೆ ಎಂಬ ಭಯ ಅವರನ್ನು ಕಾಡುತ್ತಿದೆ. ಆದರೆ ಜನರ ಧ್ವನಿಯನ್ನು ನಾವು ಜನಪ್ರತಿನಿಧಿಗಳು ಎತ್ತದೆ ಇದ್ದರೆ, ಇನ್ಯಾರು ಅವರಿಗೆ ಸಹಾಯ ಮಾಡುತ್ತಾರೆ? ನನಗೆ ಮುಂದಿನ ಚುನಾವಣೆಯಲ್ಲಿ ಪಕ್ಷದಿಂದ ಟಿಕೆಟ್​ ಸಿಗದೆ ಇದ್ದರೂ ನನಗೇನೂ ವ್ಯತ್ಯಾಸವಾಗುವುದಿಲ್ಲ. ನನ್ನ ತಾಯಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣೆ ಗೆದ್ದವರು. ನನಗೂ ಕೂಡ ಯಾವುದೇ ಭಯವಿಲ್ಲ. ಸರ್ಕಾರಗಳು ಬರುತ್ತವೆ, ಹೋಗುತ್ತವೆ, ನಾನು ಸತ್ಯವನ್ನು ಮಾತ್ರ ಹೇಳಲು ಇಷ್ಟಪಡುತ್ತೇನೆ ಎಂದಿದ್ದಾರೆ.

ವರುಣ್​ ಗಾಂಧಿ ಪಕ್ಷದಿಂದ ರೆಬೆಲ್​ ಆಗಿಯೇ ಗುರುತಿಸಿಕೊಂಡಿದ್ದಾರೆ. ಅವರನ್ನು ಈ ಬಾರಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಿಂದಲೂ ಕೈಬಿಡಲಾಗಿದೆ. ಕೃಷಿ ಕಾಯ್ದೆಗಳ ವಿರುದ್ಧ ರೈತರು ಹೋರಾಟ ಮಾಡುತ್ತಿದ್ದ ಸಂದರ್ಭದಲ್ಲಿ, ಲಖಿಂಪುರ ಖೇರಿ ಹಿಂಸಾಚಾರ ನಡೆದಿದ್ದಾಗ ಅವರು ಬಿಜೆಪಿ ಸರ್ಕಾರವನ್ನು ತೀವ್ರವಾಗಿ ಖಂಡಿಸಿದ್ದರು.  ಜನರಿಗೆ ಅನ್ಯಾಯವಾಗುವುದನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವೇ ಇಲ್ಲ ಎಂದು ಅವರು ಪದೇಪದೆ ಹೇಳುತ್ತಿದ್ದಾರೆ.  ಇವರ ತಾಯಿ ಮನೇಕಾ ಗಾಂಧಿ ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಪಿಲಿಭಿತ್​ನಲ್ಲಿ ಸ್ವತಂತ್ರ್ಯವಾಗಿಯೇ  ಸ್ಪರ್ಧಿಸಿ ಗೆದ್ದಿದ್ದರು.

ಇದನ್ನೂ ಓದಿ: ಸ್ನೇಹಿತರ ಜೊತೆ ಪಾರ್ಟಿಗೆ ಹೋದ ಯುವಕ ಅನುಮಾನಾಸ್ಪದವಾಗಿ ಸಾವು, ಹಲ್ಲೆ ಮಾಡಿ ಹತ್ಯೆ ಆರೋಪ

Published On - 9:49 am, Wed, 22 December 21

PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ