
ನವದೆಹಲಿ, ಫೆಬ್ರವರಿ 21: ನವದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆ 2026ರ (AI Impact Summit) ಸಂದರ್ಭದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಟಾಪ್‌ಲೆಸ್ ಪ್ರತಿಭಟನೆ ನಡೆಸಿದ ನಂತರ ರಾಜಕೀಯ ವಿವಾದ ಭುಗಿಲೆದ್ದಿದೆ. ಇಡೀ ಜಗತ್ತಿನ ನಾಯಕರು ಆಗಮಿಸಿದ್ದ ಕೃತಕ ಬುದ್ಧಿಮತ್ತೆ (ಎಐ) ಮೇಲೆ ಕೇಂದ್ರೀಕರಿಸಿದ ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಂಗ್ರೆಸ್ ನಾಯಕರ ಇಂತಹ ವರ್ತನೆ ಸೂಕ್ತವಲ್ಲ ಎಂದು ಹಲವಾರು ವಿಪಕ್ಷ ನಾಯಕರು ಟೀಕಿಸಿದ್ದಾರೆ.
ಭಾರತ ಮತ್ತು ವಿದೇಶಗಳಿಂದ ಪ್ರಮುಖ ಪ್ರತಿನಿಧಿಗಳು ಭಾಗವಹಿಸಿದ್ದ ಎಐ ಶೃಂಗಸಭೆಯು ಹೊಸ ತಂತ್ರಜ್ಞಾನಗಳಲ್ಲಿ ಭಾರತದ ಬೆಳೆಯುತ್ತಿರುವ ಸ್ಥಾನಮಾನವನ್ನು ಪ್ರದರ್ಶಿಸುವ ಉದ್ದೇಶವನ್ನು ಹೊಂದಿತ್ತು. ಆದರೆ, ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಿಂದಾಗಿ ದೇಶದ ಇಮೇಜ್ ಹಾಳಾಗಿದೆ. ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಲು ಅದು ಸೂಕ್ತವಾದ ವೇದಿಕೆಯಾಗಿರಲಿಲ್ಲ ಎಂದು ಹಲವು ವಿರೋಧ ಪಕ್ಷದ ನಾಯಕರು ಟೀಕಿಸಿದ್ದಾರೆ.
Yesterday at the AI Summit, the Youth Congress made us all feel ashamed. Where is our politics heading! No one should ever demean our country. Whatever our political differences may be, we should always present a united face to the world.
— YS Jagan Mohan Reddy (@ysjagan) February 21, 2026
“ನಿನ್ನೆ ನಡೆದ AI ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ನಮ್ಮೆಲ್ಲರನ್ನೂ ತಲೆ ತಗ್ಗುವಂತೆ ಮಾಡಿತು. ನಮ್ಮ ರಾಜಕೀಯ ಎಲ್ಲಿಗೆ ಹೋಗುತ್ತಿದೆ! ಯಾರೂ ನಮ್ಮ ದೇಶವನ್ನು ಎಂದಿಗೂ ಕೀಳಾಗಿ ನೋಡಬಾರದು. ನಮ್ಮ ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇದ್ದರೂ ನಾವು ಯಾವಾಗಲೂ ಜಗತ್ತಿಗೆ ಒಗ್ಗಟ್ಟಿನ ಮುಖವನ್ನು ತೋರಿಸಬೇಕು” ಎಂದು ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ವೈ.ಎಸ್. ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ.
ಇದನ್ನೂ ಓದಿ: ದೇಶವೇ ತಲೆತಗ್ಗಿಸುವ ಕೆಲಸ; ಎಐ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಆಕ್ರೋಶ
ಈ ಘಟನೆಯನ್ನು ಅತ್ಯಂತ ಆಕ್ಷೇಪಾರ್ಹ ಎಂದು ಕರೆದ ಬಿಎಸ್ಪಿ ನಾಯಕಿ ಮಾಯಾವತಿ, “ನವದೆಹಲಿಯಲ್ಲಿ ನಡೆದ AI ಇಂಪ್ಯಾಕ್ಟ್ ಶೃಂಗಸಭೆಗೆ ಭಾರತ ಮತ್ತು ವಿದೇಶಗಳಿಂದ ಅನೇಕ ಪ್ರಮುಖ ವ್ಯಕ್ತಿಗಳನ್ನು ಆಹ್ವಾನಿಸಲಾಗಿತ್ತು. ಇದು ಅಂತಾರಾಷ್ಟ್ರೀಯ ಗಮನ ಸೆಳೆದಿತ್ತು. ಕಾಂಗ್ರೆಸ್ ಯುವ ಕಾರ್ಯಕರ್ತರು ಈ ವೇಳೆ ಶೃಂಗಸಭೆಯ ಆವರಣದೊಳಗೆ ಅರೆನಗ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿರುವುದು ಅತ್ಯಂತ ಅಸಭ್ಯ ಮತ್ತು ಖಂಡನೀಯ. ಈ ಶೃಂಗಸಭೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿಲ್ಲದಿದ್ದರೆ ವಿಷಯ ವಿಭಿನ್ನವಾಗಿರುತ್ತಿತ್ತು. ಆದರೆ, ಅಂತಾರಾಷ್ಟ್ರೀಯ ಶೃಂಗಸಭೆಯ ಸಮಯದಲ್ಲಿ ಇಂತಹ ನಡವಳಿಕೆಯು ಕಳವಳಕಾರಿ ವಿಷಯವಾಗಿದೆ. ಇದು ದೇಶದ ಘನತೆ ಮತ್ತು ಇಮೇಜ್‌ಗೆ ಹಾನಿಯಾಗದಂತೆ ನೋಡಿಕೊಳ್ಳುವುದು ಮುಖ್ಯವಾಗಿದೆ” ಎಂದು ಹೇಳಿದ್ದಾರೆ.
नई दिल्ली में आयोजित ’एआई इम्पैक्ट समिट’, जिसमें देश व विदेश के भी काफी प्रमुख लोग आमंत्रित थे तथा यह इवेन्ट अन्तर्राष्ट्रीय स्तर पर सुर्खि़यों में था, इस दौरान जिन भी लोगों द्वारा अर्द्धनग्न होकर अपना रोष प्रकट किया है जिसमें अधिकतर कांग्रेसी युवा बताये जा रहे हैं, वह…
— Mayawati (@Mayawati) February 21, 2026
“ಯುವ ಕಾಂಗ್ರೆಸ್ ಸದಸ್ಯರು AI ಇಂಪ್ಯಾಕ್ಟ್ ಶೃಂಗಸಭೆಯನ್ನು ರಾಜಕೀಯ ನಾಟಕಗಳಿಗೆ ಬಳಸಿಕೊಳ್ಳುತ್ತಿರುವುದು ಶೋಚನೀಯ. ಪ್ರತಿಭಟನೆಗಳಿಗೆ ಇಂತಹ ಜಾಗತಿಕ ವೇದಿಕೆಯನ್ನು ಬಳಸುವುದರಿಂದ ನಮ್ಮ ಮಹಾನ್ ರಾಷ್ಟ್ರ ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟದಾಗಿ ಬಿಂಬಿತವಾಗುತ್ತದೆ. ಪ್ರಜಾಪ್ರಭುತ್ವದಲ್ಲಿ ಅಭಿಪ್ರಾಯ ವ್ಯತ್ಯಾಸ ಸಹಜವಾದರೂ ಎಲ್ಲಿ ಮತ್ತು ಹೇಗೆ ಪ್ರತಿಭಟಿಸಬೇಕು ಎಂಬುದನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ. ರಾಜಕೀಯ ಭಿನ್ನಾಭಿಪ್ರಾಯಕ್ಕೆ ಒಂದು ಸಮಯ ಮತ್ತು ಸ್ಥಳ ಎಂಬುದು ಇರುತ್ತದೆ. ಅಂತಾರಾಷ್ಟ್ರೀಯ ಶೃಂಗಸಭೆಯನ್ನು ಇದಕ್ಕಾಗಿ ಬಳಸಿಕೊಳ್ಳುವುದು ಖಂಡಿತವಾಗಿಯೂ ಸರಿಯಲ್ಲ” ಎಂದು ಬಿಆರ್‌ಎಸ್ ಹಿರಿಯ ನಾಯಕ ಕೆ.ಟಿ. ರಾಮರಾವ್ ಹೇಳಿದ್ದಾರೆ.
It is absolutely deplorable that members of the Youth Congress chose the AI Impact Summit 2026 as a venue for petty political theatrics
Using such a global platform for protests will project our great nation India in a poor light internationally
While difference of opinion is… pic.twitter.com/sM3MmIb8UJ
— KTR (@KTRBRS) February 21, 2026
ಇದನ್ನೂ ಓದಿ: ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್‌ನಿಂದ ಅರೆಬೆತ್ತಲೆ ಪ್ರತಿಭಟನೆ; ಬಂಧಿತ 4 ಆರೋಪಿಗಳು 5 ದಿನ ಪೊಲೀಸ್ ವಶಕ್ಕೆ
I’m shocked and dismayed by the disruption caused by Youth Congress at the AI Summit yesterday. This global platform was meant to showcase India’s growing leadership as an emerging AI superpower. Turning such a prestigious international event into a political spectacle only… pic.twitter.com/5338c5NtPV
— Lokesh Nara (@naralokesh) February 21, 2026
“ನಿನ್ನೆ ನಡೆದ AI ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ನಿಂದ ಉಂಟಾದ ಅಡಚಣೆಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಮತ್ತು ನಿರಾಶೆಗೊಂಡಿದ್ದೇನೆ. ಈ ಜಾಗತಿಕ ವೇದಿಕೆಯು AI ಸೂಪರ್ ಪವರ್ ಆಗಿ ಭಾರತದ ಬೆಳೆಯುತ್ತಿರುವ ನಾಯಕತ್ವವನ್ನು ಪ್ರದರ್ಶಿಸಲು ಉದ್ದೇಶಿಸಲಾಗಿತ್ತು. ಭಾರತವು ಇದಕ್ಕಿಂತ ಉತ್ತಮವಾದುದಕ್ಕೆ ಅರ್ಹವಾಗಿದೆ. ನಾವು ಕ್ಷುಲ್ಲಕ ರಾಜಕೀಯವನ್ನು ಮೀರಿ ನಾವೀನ್ಯತೆ ಮತ್ತು ಶ್ರೇಷ್ಠತೆಯ ಮೂಲಕ ರಾಷ್ಟ್ರ ನಿರ್ಮಾಣದತ್ತ ಗಮನಹರಿಸೋಣ” ಎಂದು ಸಚಿವ ನಾರಾ ಲೋಕೇಶ್ ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ