ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಂಡಿತ; ಪುಣೆ ಪೋರ್ಷೆ ಅಪಘಾತದ ಬಗ್ಗೆ ಮೌನ ಮುರಿದ ಸಿಎಂ ಏಕನಾಥ್ ಶಿಂಧೆ

ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತದ ಕುರಿತು ಇದೇ ಮೊದಲ ಬಾರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರತಿಕ್ರಿಯಿಸಿದ್ದಾರೆ. ಮಹಾರಾಷ್ಟ್ರ ಸರ್ಕಾರ ಈ ಅಪಘಾತದ ಕುರಿತು ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ, ಅಪರಾಧಿಗಳನ್ನು ಬಚಾವ್ ಮಾಡಲು ನೋಡುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪದ ಬೆನ್ನಲ್ಲೇ ಕೊನೆಗೂ ಸಿಎಂ ಶಿಂಧೆ ಮೌನ ಮುರಿದಿದ್ದಾರೆ.

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಂಡಿತ; ಪುಣೆ ಪೋರ್ಷೆ ಅಪಘಾತದ ಬಗ್ಗೆ ಮೌನ ಮುರಿದ ಸಿಎಂ ಏಕನಾಥ್ ಶಿಂಧೆ
ಏಕನಾಥ್ ಶಿಂಧೆ
Follow us
ಸುಷ್ಮಾ ಚಕ್ರೆ
|

Updated on: May 28, 2024 | 9:24 PM

ಮುಂಬೈ: ವ್ಯಕ್ತಿಯು ಎಷ್ಟೇ ಶ್ರೀಮಂತನಾಗಿರಲಿ ಅಥವಾ ಬಡವನಾಗಿರಲಿ ಕಾನೂನು ಎಲ್ಲರಿಗೂ ಸಮಾನವಾಗಿರುತ್ತದೆ. ತಪ್ಪು ಮಾಡಿದ ಯಾರನ್ನೂ ಸುಮ್ಮನೆ ಬಿಡುವುದಿಲ್ಲ. ತಪ್ಪತಸ್ಥರ ವಿರುದ್ಧ ನಾನು ಕಠಿಣ ಕ್ರಮಕ್ಕೆ ಆದೇಶಿಸಿದ್ದೇನೆ ಎಂದು ಪುಣೆ ಪೋರ್ಷೆ ಅಪಘಾತದ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಅಪಘಾತ ನಡೆದ ಮೊದಲ ದಿನದಿಂದ ಪುಣೆ ಪೊಲೀಸ್ ಆಯುಕ್ತರೊಂದಿಗೆ ಸಂಪರ್ಕದಲ್ಲಿದ್ದೇನೆ. ಎಲ್ಲ ಮಾಹಿತಿಯನ್ನೂ ನಾನು ಪಡೆಯುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ನಾನು ಅಪಘಾತ ಸಂಭವಿಸಿದ ಮೊದಲ ದಿನದಿಂದಲೂ ಪುಣೆ ಪೊಲೀಸ್ ಆಯುಕ್ತರೊಂದಿಗೆ ಸಂಪರ್ಕದಲ್ಲಿದ್ದೇನೆ. ವ್ಯಕ್ತಿ ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಯಾವುದೇ ತಾರತಮ್ಯ ಮಾಡಬಾರದು ಎಂದು ನಾನು ಮೊದಲಿನಿಂದಲೂ ಹೇಳಿದ್ದೇನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪೋರ್ಷೆ ಕಾರು ಅಪಘಾತ; ಅಪ್ರಾಪ್ತನ ತಂದೆ ವಿಶಾಲ್ ಅಗರ್​ವಾಲ್ 3 ದಿನ ಪೊಲೀಸ್ ವಶಕ್ಕೆ

ಎನ್‌ಡಿಟಿವಿ ವರದಿಯ ಪ್ರಕಾರ, ಮಹಾರಾಷ್ಟ್ರ ಸಿಎಂ ವೈಯಕ್ತಿಕವಾಗಿ ಪುಣೆ ಪೊಲೀಸ್ ಕಮಿಷನರ್‌ಗೆ ವೈದ್ಯರು ಅಥವಾ ಬೇರೆಯವರೂ ಸೇರಿದಂತೆ ಎಲ್ಲರನ್ನೂ ಹೊಣೆಗಾರರನ್ನಾಗಿ ಮಾಡಲು ಸೂಚಿಸಿದ್ದಾರೆ.

ಸಾವಿಗೀಡಾದ ಇಬ್ಬರು ಕೂಡ ಯಾರೋ ಒಬ್ಬರ ಮಕ್ಕಳು. ಈ ಪ್ರಕರಣದಲ್ಲಿ ಎಲ್ಲ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅವರ ಹಿನ್ನೆಲೆಯನ್ನೂ ಪರಿಶೀಲಿಸಲಾಗುವುದು. ವೈದ್ಯರಾಗಲಿ ಅಥವಾ ಬೇರೆಯವರಾಗಲಿ ಯಾರನ್ನೂ ಬಿಡಬೇಡಿ ಎಂದು ಪೊಲೀಸ್ ಕಮಿಷನರ್‌ಗೆ ಖುದ್ದಾಗಿ ಹೇಳಿದ್ದೇನೆ ಎಂದು ಏಕನಾಥ್ ಶಿಂಧೆ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಪೊಲೀಸರು, ರಾಜಕಾರಣಿಗಳು ಮತ್ತು ಶ್ರೀಮಂತ ವ್ಯಕ್ತಿಗಳ ನಡುವಿನ ಸಂಬಂಧವನ್ನು ಆರೋಪಿಸಿ ಮುಖ್ಯಮಂತ್ರಿ ಮತ್ತು ಅವರ ಸಚಿವ ಸಂಪುಟ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ನ ಮಹಾರಾಷ್ಟ್ರ ಅಧ್ಯಕ್ಷ ನಾನಾ ಪಟೋಲೆ ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಏಕನಾಥ್ ಶಿಂಧೆ ಈ ಅಪಘಾತದ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Pune Porsche Accident: ಪುಣೆ ಪೋರ್ಷೆ ಅಪಘಾತ; ಅಗರ್​ವಾಲ್ ಕುಟುಂಬದ ವಿರುದ್ಧ ಮತ್ತೊಬ್ಬರಿಂದ ದೂರು

ಏನಿದು ಘಟನೆ?:

ಮೇ 19ರಂದು ಪೋರ್ಷೆ ಕಾರು ಚಲಾಯಿಸಿ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳ ಸಾವಿಗೆ ಕಾರಣವಾದ 17ರ ಹರೆಯದ ಯುವಕನನ್ನು ಒಳಗೊಂಡ ಪುಣೆ ಅಪಘಾತ ಪ್ರಕರಣವು ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿತ್ತು. ಕುಡಿದ ಮತ್ತಿನಲ್ಲಿ ಮಧ್ಯಪ್ರದೇಶ ಮೂಲದ ಇಬ್ಬರು ಪ್ರಯಾಣಿಸುತ್ತಿದ್ದ ಬೈಕ್​ಗೆ ಪೋರ್ಷೆ ಕಾರು ಡಿಕ್ಕಿ ಹೊಡೆದು ಅವರಿಬ್ಬರೂ ಸಾವನ್ನಪ್ಪಿದ್ದರು. ಪುಣೆಯ ಅಪ್ರಾಪ್ತ ಚಾಲಕನ ರಕ್ತದ ಮಾದರಿ ಬದಲಿಸಿದ್ದಕ್ಕಾಗಿ ಆಸ್ಪತ್ರೆಯ ಇಬ್ಬರು ವೈದ್ಯರು ಮತ್ತು ಉದ್ಯೋಗಿಯ ಬಂಧನದೊಂದಿಗೆ ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಪುಣೆ ಪೊಲೀಸರು ಸಸೂನ್ ಆಸ್ಪತ್ರೆಯ ಫೋರೆನ್ಸಿಕ್ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಅಜಯ್ ತಾವರೆ, ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಹರಿ ಹಾಲ್ನೋರ್ ಮತ್ತು ಡಾ. ತಾವರೆ ಅವರ ಅಡಿಯಲ್ಲಿ ಕೆಲಸ ಮಾಡುವ ಅತುಲ್ ಘಟಕಾಂಬಳೆ ಅವರನ್ನು ಬಂಧಿಸಿದ್ದಾರೆ. ಅವರನ್ನು ಮೇ 30ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಈಗಾಗಲೇ ಅಪ್ರಾಪ್ತ ಬಾಲಕನ ತಂದೆ ವಿಶಾಲ್ ಅಗರ್ವಾಲ್ ಮತ್ತು ಅಜ್ಜ ಸುರೇಂದ್ರ ಅಗರ್ವಾಲ್ ವಿರುದ್ಧ ತಮ್ಮ ಚಾಲಕನ ‘ಅಕ್ರಮ ಬಂಧನ’ಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ತಂದೆ ಮತ್ತು ಅಜ್ಜ ಇಬ್ಬರೂ ಕುಟುಂಬದ ಚಾಲಕನಿಗೆ ಹಣ ನೀಡುವುದಾಗಿ ಮತ್ತು ಬೆದರಿಕೆ ಹಾಕುವ ಮೂಲಕ ಅಪಘಾತದ ಹೊಣೆ ಹೊರುವಂತೆ ಒತ್ತಡ ಹೇರಿದ್ದರು. ಅಲ್ಲದೆ, ಸುರೇಂದ್ರ ಅಗರ್​ವಾಲ್ ಅವರಿಗೆ ಭೂಗತ ಲೋಕದ ನಂಟಿದೆ ಎಂದು ಕೂಡ ಹೇಳಲಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ವಿಜಯಲಕ್ಷ್ಮಿ
ಜಾಮೀನು ಸಿಕ್ಕಿದ್ದಕ್ಕೆ ಚಾಮುಂಡಿ ಬೆಟ್ಟದಲ್ಲಿ ಹರಿಕೆ ತೀರಿಸಿದ ವಿಜಯಲಕ್ಷ್ಮಿ
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಸಿಟಿ ರವಿ ವಿರುದ್ಧ ರಾಷ್ಟ್ರಪತಿಗೆ ಪತ್ರ, ಮೋದಿ ಭೇಟಿ ಮಾಡುವೆ: ಹೆಬ್ಬಾಳ್ಕರ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಭದ್ರಾವತಿ ಉಕ್ಕು ಕಾರ್ಖಾನೆಗೆ ಪುನಶ್ಚೇತನ: ಕುಮಾರಸ್ವಾಮಿ ಗುಡ್ ನ್ಯೂಸ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ ಮಾಡಿದ ಲಕ್ಷ್ಮೀ ಹೆಬ್ಬಾಳ್ಕರ್
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಕೊಹ್ಲಿ, ರೋಹಿತ್ ತಂಡಗಳನ್ನು ಸೋಲಿಸಿ 25 ಸಾವಿರ ರೂ. ಗೆದ್ದ ಯುವ ಆಟಗಾರ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ಬಳ್ಳಾರಿ: ಮನೆಯಿಂದ ದೂರವಾಗಿ 25 ವರ್ಷಗಳ ಬಳಿಕ ಪತ್ತೆಯಾದ ಮಹಿಳೆ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನೆಲಮಂಗಲ: ಬೆಳ್ಳಂ ಬೆಳಗ್ಗೆ ಬಾರ್ ತೆರದು ಅಕ್ರಮವಾಗಿ ಮದ್ಯ ಮಾರಾಟ
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ನಿಜಕ್ಕೂ ಎಲಿಮಿನೇಟ್ ಆದ್ರಾ ತ್ರಿವಿಕ್ರಂ?; ಅಭಿಮಾನಿಗಳಿಗೆ ಬಿಗ್ ಶಾಕ್
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಈ ತಪ್ಪುಗಳನ್ನು ಮಾಡಲೇಬಾರದು
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಸೋಮವಾರದ ದಿನ ಭವಿಷ್ಯ ತಿಳಿಯಿರಿ