ಕೆಲವು ನಿರ್ಧಾರಗಳು ದೇಶದ ಭವಿಷ್ಯವನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿವೆ: ಪ್ರಧಾನಿ ಮೋದಿ
ಲೋಕಸಭೆ ಹಾಗೂ ರಾಜ್ಯ ಸಭೆಗಳಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿರುವ ಕುರಿತು ಪ್ರಧಾನಿ ನರೇಂದ್ರ ಮೋದಿ(Narendra Modi) ಸಂತಸ ವ್ಯಕ್ತಪಡಿಸಿದ್ದಾರೆ. ನಾವು ಎರಡು ದಿನದಲ್ಲಿ ಇತಿಹಾಸ ಸೃಷ್ಟಿಸಿದ್ದೇವೆ ಎಂದಿದ್ದಾರೆ. ನಾರಿ ಶಕ್ತಿ ವಂದನ್( Nari Shakti Vandan) ಕಾಯ್ದೆ ಅಂಗೀಕಾರಗೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಆಚರಣೆಗೆ ಸಂಪೂರ್ಣ ಸಿದ್ಧತೆ ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಪಕ್ಷದ ಕೇಂದ್ರ ಕಚೇರಿಗೆ ಆಗಮಿಸಿದ್ದಾರೆ. ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಅವರನ್ನು ಸ್ವಾಗತಿಸಿದರು.

ದೇಶದ ಎಲ್ಲಾ ತಾಯಂದಿರು, ಸಹೋದರಿಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು, ಪೂರ್ಣ ಬಹುಮತದೊಂದಿಗೆ ಮಸೂದೆ ಅಂಗೀಕಾರವಾಗಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಸಾಮಾನ್ಯ ಕಾನೂನಲ್ಲ, ಇದು ನವ ಭಾರತದ ಹೊಸ ಪ್ರಜಾಸತ್ತಾತ್ಮಕ ಬದ್ಧತೆಯ ಘೋಷಣೆಯಾಗಿದೆ ಎಂದರು.
ಸಂಸತ್ತಿನಲ್ಲಿ ನಾರಿ ಶಕ್ತಿ ವಂದನ್ ಅಧಿನಿಯಮದ ಸರ್ವಾನುಮತದ ಅಂಗೀಕಾರವು ಮಹಿಳಾ ನೇತೃತ್ವದ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಮಹತ್ವದ ಮೈಲಿಗಲ್ಲು ಎಂದು ಮೋದಿ ಹೇಳಿದ್ದಾರೆ. ಸೆಪ್ಟೆಂಬರ್ 20-21 ರಂದು ಹೊಸ ಇತಿಹಾಸ ನಿರ್ಮಿಸಲಾಗಿದೆ. ಜನ ಅವಕಾಶ ಕೊಟ್ಟಿದ್ದು ನಮ್ಮ ಸೌಭಾಗ್ಯ ಎಂದರು.
ಮತ್ತಷ್ಟು ಓದಿ: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆ ಅಂಗೀಕಾರ ನಂತರ ಮನೋಜ್ ತಿವಾರಿಗೆ ಪತ್ನಿಯ ಸ್ವಾಗತ, ವಿಡಿಯೊ ವೈರಲ್
ಕೆಲವು ನಿರ್ಧಾರಗಳು ದೇಶದ ಭವಿಷ್ಯವನ್ನು ಬದಲಾಯಿಸುವ ಸಾಮರ್ಥ್ಯವನ್ನು ಹೊಂದಿವೆ ಮತ್ತು ಅಂತಹ ಒಂದು ನಿರ್ಧಾರಕ್ಕೆ ನಾವು ಸಾಕ್ಷಿಯಾಗಿದ್ದೇವೆ ಎಂದು ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಾರಿ ಶಕ್ತಿ ವಂದನ್-ಅಭಿನಂದನ್ ಕಾರ್ಯಕ್ರಮದಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತು ಪ್ರಧಾನಿ ಮೋದಿ ಹೇಳಿದರು.
ಮುಂದಿನ ದಿನಗಳಲ್ಲಿ ಮಹಿಳಾ ಮೀಸಲಾತಿ ಬಿಲ್ ಬಗ್ಗೆ ಚರ್ಚೆ ನಡೆಯಲಿದೆ, ಇಂತಹ ಐತಿಹಾಸಿಕ ನಿರ್ಣಯ ತೆಗೆದುಕೊಳ್ಳುವ ಅವಕಾಶ ಬಿಜೆಪಿಗೆ ಸಿಕ್ಕಿದೆ. ನಾವು ಯಾವ ಗ್ಯಾರಂಟಿ ನೀಡಿದ್ದೆವೋ ಅದೆಲ್ಲವನ್ನೂ ನೀವು ನೋಡುತ್ತಿದ್ದೀರಿ, ಮಹಿಳಾ ಮೀಸಲಾತಿ ಮಸೂದೆ ಹೊಸ ಪ್ರಜಾಪ್ರಭುತ್ವದ ಬದ್ಧತೆಯ ಪ್ರತೀಕವಾಗಿದೆ, ದೇಶದ ಜನರಿಗೆ ನಾವು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತಿದ್ದೇವೆ. ಮಹಿಳೆಯರ ಹಿತಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.
ಬೇಟಿ ಬಚಾವೋ ಬೇಟಿ ಪಢಾವೋ ಸೇರಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ, ಸುಕನ್ಯಾ ಯೋಜನೆ, ಜಲಜೀವನ್ ಮಿಷನ್ ಯೋಜನೆ ಜಾರಿಗೊಳಿಸಿದ್ದೇವೆ, ಎಲ್ಲಾ ಪಕ್ಷಗಳು ಹಾಗೂ ಸಂಸದರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಕುಟುಂಬದ ಸದಸ್ಯನಂತೆ ಬಿಜೆಪಿ ಸರ್ಕಾರ ನಿಮ್ಮ ಸಮಸ್ಯೆಗಳನ್ನು ಪರಿಹರಿಸುತ್ತದೆ ಎಂದು ಮೋದಿ ಹೇಳಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:57 am, Fri, 22 September 23