ದೀಪಾವಳಿಯಂದು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ ದಂಡವಿಲ್ಲ: ಗೃಹ ಸಚಿವ

ದೀಪಾವಳಿಯನ್ನು ಗಮನದಲ್ಲಿಟ್ಟುಕೊಂಡು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಶುಕ್ರವಾರ ಅಕ್ಟೋಬರ್ 21 ರಿಂದ 27 ರವರೆಗೆ ಸಂಚಾರ ಪೊಲೀಸರು ನಾಗರಿಕರಿಗೆ ದಂಡವನ್ನು ವಿಧಿಸುವಂತಿಲ್ಲ ಎಂದು ಘೋಷಿಸಿದ್ದಾರೆ

ದೀಪಾವಳಿಯಂದು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ ದಂಡವಿಲ್ಲ: ಗೃಹ ಸಚಿವ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 22, 2022 | 4:57 PM

ಗುಜರಾತ್:  ದೀಪಾವಳಿಯನ್ನು ಗಮನದಲ್ಲಿಟ್ಟುಕೊಂಡು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಶುಕ್ರವಾರ ಅಕ್ಟೋಬರ್ 21 ರಿಂದ 27 ರವರೆಗೆ ಸಂಚಾರ ಪೊಲೀಸರು ನಾಗರಿಕರಿಗೆ ದಂಡವನ್ನು ವಿಧಿಸುವಂತಿಲ್ಲ ಎಂದು ಘೋಷಿಸಿದ್ದಾರೆ, ಇದೀಗ ಈ ಕ್ರಮ ವಿವಾದವನ್ನು ಸೃಷ್ಟಿಸಿದೆ. ಸೂರತ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಹರ್ಷ್ ಸಾಂಘವಿ, ಇಂದಿನಿಂದ ಅ. 21 ರಿಂದ ಅಕ್ಟೋಬರ್ 27 ರವರೆಗೆ, ಗುಜರಾತ್ ಟ್ರಾಫಿಕ್ ಪೊಲೀಸರು ನಾಗರಿಕರಿಗೆ ಯಾವುದೇ ದಂಡವನ್ನು ವಿಧಿಸುವಂತಿಲ್ಲ . ಇದರರ್ಥ ನೀವು (ಸಾರ್ವಜನಿಕರು) ಸಂಚಾರ ನಿಯಮಗಳನ್ನು ಅನುಸರಿಸಬಾರದು ಎಂದಲ್ಲ. ನೀವು ತಪ್ಪು ಮಾಡುತ್ತೀರಿ, ಅದಕ್ಕಾಗಿ ನೀವು ದಂಡವನ್ನು ಪಾವತಿಸಬೇಕಿಲ್ಲ ಎಂದು ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಸಾರ್ವಜನಿಕ ಹಿತಾಸಕ್ತಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಮತ್ತು ಇದು ಕಾನೂನು ಉಲ್ಲಂಘನೆ ಅಲ್ಲ. ಯಾರಾದರೂ ನಿಯಮಗಳನ್ನು ಉಲ್ಲಂಘಿಸಿದರೆ, ಗುಜರಾತ್ ಪೊಲೀಸರು ಹೂಗಳನ್ನು ನೀಡುವ ಮೂಲಕ ಈ ತಪ್ಪು ಮಾಡದಂತೆ ಮನವೊಲಿಸಬೇಕು ಎಂದು ಸಾಂಘವಿ ಹೇಳಿದರು.

ಇದೀಗ ಈ ಕ್ರಮಕ್ಕೆ ನಾಗರಿಕರು ಹಾಗೂ ರಾಜಕಾರಣಿಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ಶುರುವಾಗಿದೆ. ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ ಸಿಂಗ್ ಚೌಧರಿ ಆಡಳಿತಾರೂಢ ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿ ಟ್ವೀಟ್ ಮಾಡಿದ್ದಾರೆ, ಇದೊಂದು ಕೆಟ್ಟ ಕ್ರಮ ಮತಕ್ಕಾಗಿ ವಾಹನ ಚಾಲಕರ ಜೀವಕ್ಕೆ ಅಪಾಯ ಉಂಟು ಮಾಡುತ್ತಿದೆ. ಇದಕ್ಕಾಗಿ ಚುನಾವಣಾ ಆಯೋಗ ಕೂಡ ಚುನಾವಣೆ ಘೋಷನೆಯನ್ನು ತುಂಬಾ ತಡ ಮಾಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

Published On - 2:37 pm, Sat, 22 October 22

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ