
ನವದೆಹಲಿ, ಅಕ್ಟೋಬರ್ 16: ಭಾರತ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಪ್ರಧಾನಿ ಮೋದಿ (PM Modi) ಭರವಸೆ ನೀಡಿದ್ದಾರೆ ಎಂಬ ಟ್ರಂಪ್ ಹೇಳಿಕೆಗೆ ತಿರುಗೇಟು ನೀಡಿರುವ ಭಾರತದ ವಿದೇಶಾಂಗ ಸಚಿವಾಲಯ (MEA) ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಯಾವುದೇ ಫೋನ್ ಸಂಭಾಷಣೆ ನಡೆದಿಲ್ಲ ಎಂದು ಹೇಳಿದೆ.
ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯ ವಕ್ತಾರ ರಣಧೀರ್ ಜೈಸ್ವಾಲ್, “ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ನಡುವೆ ಸಂಭಾಷಣೆ ನಡೆದಿದೆಯೇ ಅಥವಾ ದೂರವಾಣಿ ಕರೆ ನಡೆದಿದೆಯೇ ಎಂಬ ಪ್ರಶ್ನೆಗೆ, ನಿನ್ನೆ ಇಬ್ಬರು ನಾಯಕರ ನಡುವೆ ಯಾವುದೇ ಸಂಭಾಷಣೆ ನಡೆದ ಬಗ್ಗೆ ನನಗೆ ತಿಳಿದಿಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಭಾರತ ರಷ್ಯಾದ ತೈಲವನ್ನು ಖರೀದಿಸುವುದಿಲ್ಲ, ಮೋದಿ ಭರವಸೆ ಎಂದ ಡೊನಾಲ್ಡ್ ಟ್ರಂಪ್
ಬುಧವಾರ ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡೊನಾಲ್ಡ್ ಟ್ರಂಪ್, ಭಾರತ ರಷ್ಯಾದ ತೈಲವನ್ನು ಖರೀದಿಸುವುದಿಲ್ಲ ಎಂದು ಪ್ರಧಾನಿ ಮೋದಿ ನನಗೆ ಭರವಸೆ ನೀಡಿದ್ದಾರೆ ಎಂದು ಹೇಳಿಕೊಂಡಿದ್ದರು. “ಮೋದಿ ಇಂದು ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ನನಗೆ ಭರವಸೆ ನೀಡಿದ್ದಾರೆ. ಅದು ಒಂದು ದೊಡ್ಡ ಹೆಜ್ಜೆ. ಈಗ ನಾವು ಚೀನಾವನ್ನು ಅದೇ ಕೆಲಸ ಮಾಡುವಂತೆ ಮಾಡಬೇಕಾಗಿದೆ” ಎಂದಿದ್ದರು.
#WATCH | Delhi | On US President Trump’s statement over purchase of Russian oil by India, MEA Spokesperson Randhir Jaiswal says, “… On the question of whether there was a conversation or a telephone call between Prime Minister Modi and President Trump, I am not aware of any… pic.twitter.com/CqjfqCEO0p
— ANI (@ANI) October 16, 2025
ಇದನ್ನೂ ಓದಿ: ಎಷ್ಟು ದೊಡ್ಡ ಬಕೆಟ್ ಹಿಡಿತಾರಪ್ಪ! ಪಾಕ್ ಪ್ರಧಾನಿಯ ಟ್ರಂಪ್ ಗುಣಗಾನಕ್ಕೆ ದಂಗಾದ ಮೆಲೋನಿ
ವಿಶ್ವದ ಅತಿದೊಡ್ಡ ಕಚ್ಚಾ ತೈಲ ಆಮದುದಾರರಲ್ಲಿ ಒಂದಾದ ಭಾರತವು ತನ್ನ ಇಂಧನ ಅಗತ್ಯಗಳಲ್ಲಿ 85%ಕ್ಕಿಂತ ಹೆಚ್ಚು ವಿದೇಶಿ ಮೂಲಗಳನ್ನು ಅವಲಂಬಿಸಿದೆ. ಸಾಂಪ್ರದಾಯಿಕವಾಗಿ ಮಧ್ಯಪ್ರಾಚ್ಯದ ತೈಲವನ್ನು ಅವಲಂಬಿಸಿದ್ದ ಭಾರತ, ಮಾಸ್ಕೋ ಮೇಲಿನ ಪಾಶ್ಚಿಮಾತ್ಯ ನಿರ್ಬಂಧಗಳು ಖರೀದಿದಾರರಿಗೆ ಹೊಸ ಅವಕಾಶಗಳನ್ನು ತೆರೆದ ನಂತರ 2022ರಿಂದ ಹೆಚ್ಚು ರಿಯಾಯಿತಿ ದರದಲ್ಲಿ ರಷ್ಯಾದ ಕಚ್ಚಾ ತೈಲವನ್ನು ಖರೀದಿಸಲು ಪ್ರಾರಂಭಿಸಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:19 pm, Thu, 16 October 25