ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆಯಿಲ್ಲ; ಸಚಿವ ಅಶ್ವಿನಿ ವೈಷ್ಣವ್ ಪುನರುಚ್ಛಾರ

ರೈಲ್ವೆಯನ್ನು ಖಾಸಗೀಕರಣಗೊಳಿಸುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಹೇಳಿದ್ದರು. ಅದನ್ನೇ ಅಶ್ವಿನಿ ವೈಷ್ಣವ್ ಪುನರುಚ್ಛರಿಸಿದ್ದಾರೆ.

ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಯೋಜನೆಯಿಲ್ಲ; ಸಚಿವ ಅಶ್ವಿನಿ ವೈಷ್ಣವ್ ಪುನರುಚ್ಛಾರ
ಅಶ್ವಿನಿ ವೈಷ್ಣವ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 09, 2022 | 7:45 PM

ನವದೆಹಲಿ: ರಾಷ್ಟ್ರೀಯ ಸಾರಿಗೆಯಾದ ರೈಲ್ವೆಯನ್ನು (Railways) ಖಾಸಗೀಕರಣಗೊಳಿಸುವ ಯಾವುದೇ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Minister Ashwini Vaishnaw) ಇಂದು ಪುನರುಚ್ಚರಿಸಿದ್ದಾರೆ. ಪ್ರಯಾಣಿಕರ ಆಕಾಂಕ್ಷೆಗಳನ್ನು ಪೂರೈಸಲು, ವಿಶೇಷವಾಗಿ ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯದ ವಿಷಯದಲ್ಲಿ ಇತ್ತೀಚಿನ ತಂತ್ರಜ್ಞಾನವನ್ನು ಸ್ವೀಕರಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ.

ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಕೊಡುಗೆಯಂತೆ ತಂತ್ರಜ್ಞಾನವು ಸ್ಥಳೀಯವಾಗಿರಬೇಕು ಎಂದು ಅವರು ರೈಲ್ ಮಂಟಪದಲ್ಲಿ ಭಾರತೀಯ ರೈಲ್ವೇ ಮಜ್ದೂರ್ ಸಂಘದ (ಬಿಆರ್‌ಎಂಎಸ್) 20ನೇ ಅಖಿಲ ಭಾರತ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ ಉಪಕ್ರಮದ ಅಡಿಯಲ್ಲಿ ಪೆರಂಬೂರಿನಲ್ಲಿ ಐಸಿಎಫ್ ವಿನ್ಯಾಸಗೊಳಿಸಿ, ತಯಾರಿಸಿದೆ. ರೈಲ್ವೆಯನ್ನು ಖಾಸಗೀಕರಣಗೊಳಿಸುವ ಕ್ರಮವನ್ನು ವಿರೋಧ ಪಕ್ಷಗಳು ಪದೇಪದೆ ವಿರೋಧಿಸುತ್ತಿವೆ. ರೈಲ್ವೇ ಒಂದು ದೊಡ್ಡ ಸಂಕೀರ್ಣ ಸಂಸ್ಥೆ ಎಂದು ನಾನು ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. ಕೇಂದ್ರ ಸರ್ಕಾರದ ಮುಂದೆ ರೈಲ್ವೆಯನ್ನು ಖಾಸಗೀಕರಣಗೊಳಿಸುವ ಯಾವುದೇ ನೀತಿ ಇಲ್ಲ. ಅಂತಹ ಯಾವುದೇ ಯೋಜನೆಗಳೂ ಇಲ್ಲ ಎಂದು ಸಚಿವರು ಹೇಳಿದ್ದಾರೆ.

ಭಾರತೀಯ ರೈಲ್ವೆಗೆ ಉತ್ತಮವಾದುದನ್ನು ಮಾಡಲು ಮತ್ತು ಅದನ್ನು ಮುಂದಕ್ಕೆ ಕೊಂಡೊಯ್ಯಲು ಶ್ರಮಿಸಲಾಗುವುದು. ರೈಲ್ವೆಯ ಖಾಸಗೀಕರಣದ ಬಗ್ಗೆ ಯೋಚಿಸಿಲ್ಲ. ಆದರೆ ತಂತ್ರಜ್ಞಾನವನ್ನು ನಾವು ಒಪ್ಪಿಕೊಂಡು, ಅಳವಡಿಸಿಕೊಳ್ಳಬೇಕು” ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ರೈಲ್ವೆಯನ್ನು ಖಾಸಗೀಕರಣಗೊಳಿಸುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಹೇಳಿದ್ದರು. ಅದನ್ನೇ ಅಶ್ವಿನಿ ವೈಷ್ಣವ್ ಪುನರುಚ್ಛರಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರೈಲ್ವೆಯಲ್ಲಿ 3.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಿದೆ. 1.40 ಲಕ್ಷ ಹುದ್ದೆಗಳಿಗೆ ಜನರನ್ನು ನೇಮಿಸಿಕೊಳ್ಳಲು ಕ್ರಮಗಳನ್ನು ಪ್ರಾರಂಭಿಸಿದೆ. ನಾನು 15 ದಿನಗಳಿಗೊಮ್ಮೆ ನೇಮಕಾತಿ ಪ್ರಕ್ರಿಯೆಯನ್ನು ಪರಿಶೀಲಿಸುತ್ತಿದ್ದೇನೆ, ನೇಮಕಾತಿಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಖಚಿತಪಡಿಸಿಕೊಳ್ಳುತ್ತೇನೆ” ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಇದನ್ನೂ ಓದಿ: ಮೇ ತಿಂಗಳಲ್ಲಿ ಚಾರ್​ ಧಾಮ್ ಯಾತ್ರೆಗೆ ವಿಶೇಷ ರಿಯಾಯ್ತಿ ಘೋಷಿಸಿದ ರೈಲ್ವೆ: ಇಲ್ಲಿದೆ ಮಾಹಿತಿ

Indian Railway Recruitment 2022: ರೈಲ್ವೆ ಇಲಾಖೆಯ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ